Homeಮುಖಪುಟಕೇಂದ್ರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಸೆಡ್ಡು; 'ಮನರೇಗಾ ಬಾಕಿಯನ್ನು ರಾಜ್ಯವೇ ಪಾವತಿಸಲಿದೆ' ಎಂದ ದೀದಿ

ಕೇಂದ್ರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಸೆಡ್ಡು; ‘ಮನರೇಗಾ ಬಾಕಿಯನ್ನು ರಾಜ್ಯವೇ ಪಾವತಿಸಲಿದೆ’ ಎಂದ ದೀದಿ

- Advertisement -
- Advertisement -

‘ರಾಜ್ಯ ಸರ್ಕಾರವು ಫೆಬ್ರವರಿ 21ರೊಳಗೆ 21 ಲಕ್ಷ ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ) ಕಾರ್ಮಿಕರಿಗೆ ಅವರ ಬಾಕಿ ಇರುವ ವೇತನವನ್ನು ಪಾವತಿಸಲಿದೆ, ಬಾಕಿ ಹಣವನ್ನು ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಘೋಷಣೆ ಮಾಡಿದ್ದಾರೆ.

ಬಾಕಿ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ದೀದಿ, ‘ಕಳೆದ ಎರಡು ವರ್ಷಗಳಿಂದ ಕೇಂದ್ರ ಸರ್ಕಾರದಿಂದ ಬಾಕಿ ಉಳಿದಿರುವ 21 ಲಕ್ಷ ಎಂಜಿಎನ್‌ಆರ್‌ಇಜಿಎ ಕಾರ್ಮಿಕರ ಬಾಕಿಯನ್ನು ರಾಜ್ಯ ಸರ್ಕಾರ ತೆರವುಗೊಳಿಸಲಿದೆ. ಅವರ ವೇತನವನ್ನು ಫೆಬ್ರವರಿ 21ರೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು’ ಎಂದು ಹೇಳಿದರು.

ವಿವಿಧ ಕಲ್ಯಾಣ ಯೋಜನೆಗಳಿಗಾಗಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರದಿಂದ ಬರಬೇಕಿರುವ ಬಾಕಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅವರು ಶುಕ್ರವಾರದಿಂದ ಎರಡು ದಿನಗಳ ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು.

ಯುಟಿಲೈಸೇಶನ್ ಸರ್ಟಿಫಿಕೇಟ್ ಸಲ್ಲಿಕೆ ವಿಳಂಬದ ಬಗ್ಗೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿಯನ್ನು ನಿರಾಕರಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ‘ತಪ್ಪಾದ ವರದಿಯು ದಿಕ್ಕು ತಪ್ಪಿಸುವ ಚಿತ್ರಣವನ್ನು ಸೃಷ್ಟಿಸುತ್ತದೆ. ರಾಜ್ಯ ಆಡಳಿತ ಯಂತ್ರದ ವಿರುದ್ಧ ಸುಳ್ಳು ಪ್ರಚಾರಕ್ಕಾಗಿ ಕೆಲವರು ಅದನ್ನು ಬಳಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

‘2002-03 ರಿಂದ 2020-21 ರವರೆಗೆ 2,29,099 ಕೋಟಿ ರೂಪಾಯಿಗಳ ಬಳಕೆಯ ಪ್ರಮಾಣಪತ್ರಗಳನ್ನು ಸಲ್ಲಿಸುವಲ್ಲಿ ವಿಳಂಬವಾಗಿದೆ ಎಂದು 2020-21ರ ಸಿಎಜಿಯ ರಾಜ್ಯ ಹಣಕಾಸು ಲೆಕ್ಕಪರಿಶೋಧನಾ ವರದಿಯಲ್ಲಿ ವರದಿಯಾಗಿದೆ’ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠರು ಗಮನಿಸಿದ್ದಾರೆ.

‘ಪಶ್ಚಿಮ ಬಂಗಾಳ ಸರ್ಕಾರವು ಆಯಾ ಕೇಂದ್ರ ಸಚಿವಾಲಯಗಳಿಗೆ ಸಮಯಕ್ಕೆ ಸರಿಯಾಗಿ ಬಳಕೆಯ ಪ್ರಮಾಣಪತ್ರಗಳನ್ನು ಸಲ್ಲಿಸಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಪಂಜಾಬ್ ಗವರ್ನರ್ ಹುದ್ದೆಗೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದ್ವೇಷ’ ಬಿತ್ತುವ ಮೂರನೇ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡ ಬಿಜೆಪಿ: ಮೌನವಹಿಸಿರುವ ಚು. ಆಯೋಗ

0
ಲೋಕಸಭೆಯ ಹೊಸ್ತಿಲಲ್ಲಿ ಬಿಜೆಪಿ ಮೀಸಲಾತಿ ಬಗ್ಗೆ ಮುಸ್ಲಿಮರು ಮತ್ತು ಕಾಂಗ್ರೆಸ್‌ನ್ನು ಗುರಿಯಾಗಿಸಿಕೊಂಡು ದ್ವೇಷ ಬಿತ್ತುವ ಮೂರನೇ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಚು.ಅಯೋಗ ಮಾತ್ರ  ಮೌನವಾಗಿರುವುದು ಕಂಡು ಬಂದಿದೆ. ಕರ್ನಾಟಕ ಬಿಜೆಪಿ, ಮೀಸಲಾತಿ...