Homeಮುಖಪುಟ‘ಒಡೆದು ಆಳುವವರಿಗೆ ನಮ್ಮ ಬೆಂಬಲ ಇಲ್ಲ’; ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ಬಂಗಾಳದ ದೀದಿ ಸರ್ಕಾರ

‘ಒಡೆದು ಆಳುವವರಿಗೆ ನಮ್ಮ ಬೆಂಬಲ ಇಲ್ಲ’; ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ಬಂಗಾಳದ ದೀದಿ ಸರ್ಕಾರ

ಪಶ್ಚಿಮ ಬಂಗಾಳದ ಇಂದಿನ ಅಧಿವೇಶನದಲ್ಲಿ ಬಂಗಾಳ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥಾ ಚಟರ್ಜಿ ಅವರು ಈ ನಿರ್ಣಯವನ್ನು ಮಂಡಿಸಿದ್ದರು. ಹೀಗೆ ಮಂಡಿಸಲ್ಪಟ್ಟ ನಿರ್ಣಯ ಬಹುಮತದೊಂದಿಗೆ ಅಂಗೀಕಾರಗೊಂಡಿದೆ.

- Advertisement -
- Advertisement -

ಪಶ್ಚಿಮ ಬಂಗಾಳ( ಜನವರಿ 27); ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆಯ (ಎನ್ಆರ್​​ಸಿ) ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಇಂದು ಅಲ್ಲಿನ ವಿಧಾನಸಭೆಯಲ್ಲಿ ಈ ಕಾಯ್ದೆಗೆ ತಮ್ಮ ಸಹಮತ ಇಲ್ಲ ಎಂಬ ಒಮ್ಮತ ನಿರ್ಣಯ ತೆಗೆದುಕೊಂಡಿದೆ.

ಈ ಮೂಲಕ ಕೇರಳ, ಪಂಜಾಬ್, ರಾಜಸ್ತಾನದ ನಂತರ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿರುವ ನಾಲ್ಕನೇ ರಾಜ್ಯ ಎಂಬ ಶ್ರೇಯಕ್ಕೆ ಪಶ್ಚಿಮ ಬಂಗಾಳ ಪಾತ್ರವಾಗಿದೆ.

ಪಶ್ಚಿಮ ಬಂಗಾಳದ ಇಂದಿನ ಅಧಿವೇಶನದಲ್ಲಿ ಬಂಗಾಳ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥಾ ಚಟರ್ಜಿ ಅವರು ಈ ನಿರ್ಣಯವನ್ನು ಮಂಡಿಸಿದ್ದರು. ಹೀಗೆ ಮಂಡಿಸಲ್ಪಟ್ಟ ನಿರ್ಣಯ ಬಹುಮತದೊಂದಿಗೆ ಅಂಗೀಕಾರಗೊಂಡಿದೆ.

ನಿರ್ಣಯ ಬಹುಮತದೊಂದಿಗೆ ಅಂಗೀಕಾರವಾಗುತ್ತಿದ್ದಂತೆ ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿರುವ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಅಸಹಿಷ್ಣುತೆ ಮತ್ತು ದ್ವೇಷದ ವಾತಾವರಣ ಇಡೀ ರಾಷ್ಟ್ರದಾದ್ಯಂತ ವ್ಯಾಪಿಸಿದೆ. ದೇಶವನ್ನು ಹೀಗೆ ದ್ವೇಷದ ಮೇಲೆ ವಿಭಜಿಸುವ ಗುರಿಯನ್ನು ನಾವು ಬೆಂಬಲಿಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಸಿಎಎ ಕುರಿತು ಮಾತನಾಡಿದ ಅವರು, “ಸಿಎಎ ಜನ ವಿರೋಧಿ, ಸಂವಿಧಾನ ವಿರೋಧಿ. ಹೀಗಾಗಿ ಈ ಕಾನೂನನ್ನು ತಕ್ಷಣವೇ ರದ್ದು ಪಡಿಸಬೇಕು. ಕಾಂಗ್ರೆಸ್ ಮತ್ತು ಎಡಪಂಥೀಯರು ತಮ್ಮ ಸರ್ಕಾರದ ವಿರುದ್ಧ ಕೆಟ್ಟ ಅಭಿಪ್ರಾಯಗಳನ್ನು ಹರಡುವುದನ್ನು ನಿಲ್ಲಿಸಿ ತಮ್ಮ ಸಂಕುಚಿತ ಭಿನ್ನಾಭಿಪ್ರಾಯಗಳನ್ನು ಮರೆತು ದೇಶವನ್ನು ಉಳಿಸಲು ಒಟ್ಟಾಗಿ ಹೋರಾಡುವ ಸಮಯ ಬಂದಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಿಎಎ ವಿರೋಧಿ ನಿರ್ಣಯವನ್ನು ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಜನವರಿ 20 ರಂದೇ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದರು. ನಿರೀಕ್ಷೆಯಂತೆ ಇಂದು ಮಂಡಿಸಲಾದ ಈ ನಿರ್ಣಯವನ್ನು ಎಡ ಮತ್ತು ಕಾಂಗ್ರೆಸ್ ಸದಸ್ಯರು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದ 2,200ಕ್ಕೂ...

0
ರಾಜಸ್ಥಾನದ ಬನ್ಸ್ವಾರದಲ್ಲಿ ಮುಸ್ಲಿಮರ ವಿರುದ್ಧ ದ್ವೇಷದ ಹೇಳಿಕೆಗಳನ್ನು ನೀಡಿದ ಬಿಜೆಪಿಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ 2,200ಕ್ಕೂ ಹೆಚ್ಚು ನಾಗರಿಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆದರೆ...