Homeಕರ್ನಾಟಕವಿಶೇಷ ಸಚಿವ ಸಂಪುಟ ಮುಂದೂಡಿದ ಸರ್ಕಾರ; ಒಳಮೀಸಲಾತಿ ನಿರ್ಧಾರ ಮತ್ತಷ್ಟು ವಿಳಂಬ

ವಿಶೇಷ ಸಚಿವ ಸಂಪುಟ ಮುಂದೂಡಿದ ಸರ್ಕಾರ; ಒಳಮೀಸಲಾತಿ ನಿರ್ಧಾರ ಮತ್ತಷ್ಟು ವಿಳಂಬ

- Advertisement -
- Advertisement -

ಪರಿಶಿಷ್ಟ ಜಾತಿಯೊಳಗಿನ (ಎಸ್‌ಸಿ) ಒಳಮೀಸಲಾತಿ ಜಾರಿ ಸಂಬಂಧ ಇಂದು ಸರ್ಕಾರ ನಡೆಸಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಉಪಚುನಾವಣೆ ‘ಮಾದರಿ ನೀತಿ ಸಂಹಿತೆ’ ಕಾರಣ ಮುಂದಿಟ್ಟು ಮುಂದೂಡಿದೆ. ಆ ಮೂಲಕ, ಒಳಮೀಸಲಾತಿ ನಿರ್ಧಾರವನ್ನು ಮತ್ತಷ್ಟು ವಿಳಂಬ ಮಾಡಿರುವುದು ದಲಿತ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸಭೆ ಮುಂದೂಡಿರುವ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿಗಳು ಪ್ರಕಟಣೆ ಹೊರಡಿಸಿದ್ದು, “ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ನೀಡುವ ಬಗ್ಗೆ ಚರ್ಚಿಸಲು 27-03-2026ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ” ಎಂದು ಹೇಳಿದ್ದಾರೆ.

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ. ಮಾರ್ಚ್‌ 12ರಂದು ಒಳಮೀಸಲಾತಿ ಹೋರಾಟ ಸಮಿತಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತ್ತು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅಂದು ಮಾತನಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, “ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು ಹೇಳಿದ್ದರು.

“ನಮ್ಮ ಸರ್ಕಾರ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಒಳಮೀಸಲಾತಿ ವಿಚಾರದಲ್ಲಿ ಬಹಳ ಸ್ಪಷ್ಟವಾಗಿದೆ. ಒಳಮೀಸಲಾತಿ ಜಾರಿ ಮಾಡುವ ಬದ್ಧತೆ ಇದೆ ಅನ್ನುವ ಸ್ಪಷ್ಟತೆಯನ್ನು ನೀಡಿದ್ದೇವೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅಂದು ಹೇಳಿದ್ದರು.

.  

ಮಾ.25ರಂದು, ಒಳಮೀಸಲಾತಿ ಜಾರಿ ವಿರೋಧಿಸಿ ಬಲಗೈ ಸಮುದಾಯ ಸಾವಿರಾರು ಜನರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತೀರ್ಮಾನ ತೆಗೆದುಕೊಳ್ಳುವಂತೆ ಎಚ್ಚರಿಕೆ ನೀಡಿದ್ದರು.

ಒಳಮೀಸಲಾತಿ ಸಂಬಂಧ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಂತೆ ಎಡಗೈ-ಬಲಗೈ ಮತ್ತು ಅಲೆಮಾರಿಗಳು ಸಾಕಷ್ಟು ಒತ್ತಡ ಹೇರಿದ್ದರೂ ಸಹ ಸರ್ಕಾರ ಸಭೆ ಮುಂದೂಡಿರುವುದು ಸಮುದಾಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...

ಇಂಧನ ಬಿಕ್ಕಟ್ಟು: ‘ಭಾರತದಲ್ಲಿ ಲಾಕ್‌ಡೌನ್ ಇಲ್ಲ’: ‘ಅಂತಹ ಯಾವುದೇ ಪ್ರಸ್ತಾಪ ಪರಿಗಣನೆಯಲ್ಲಿಲ್ಲ’; ಹರ್ದೀಪ್ ಪುರಿ ಸ್ಪಷ್ಟನೆ

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾದ ಎಲ್‌ಪಿಜಿ ಬಿಕ್ಕಟ್ಟಿನ ಮಧ್ಯೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭಾರತದಲ್ಲಿ ಲಾಕ್‌ಡೌನ್ ವದಂತಿಗಳು "ಸುಳ್ಳು" ಎಂದು ಹೇಳಿದ್ದಾರೆ. ಇಂಧನ ಬಿಕ್ಕಟ್ಟಿನ ಕಳವಳಗಳನ್ನು ತಿಳಿಸುತ್ತಾ...

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...