Homeಕರ್ನಾಟಕNEP ಕುರಿತ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧ: ಬಸವರಾಜ ಬೊಮ್ಮಾಯಿ

NEP ಕುರಿತ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧ: ಬಸವರಾಜ ಬೊಮ್ಮಾಯಿ

ಸಮಗ್ರ ಚರ್ಚೆ ನಡೆಸದೆ ಎನ್‌ಇಪಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ "ಎನ್‌ಇಪಿ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -
- Advertisement -

ಸಮಗ್ರ ಚರ್ಚೆ ನಡೆಸದೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ “ಎನ್‌ಇಪಿ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಬಿಎಂಪಿ ಆಯೋಜಿಸಿದ್ದ ಸರ್. ಎಂ.ವಿಶ್ವೇಶ್ವರಯ್ಯ ಅವರ 161ನೇ ಜಯಂತಿ ಅಂಗವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದ್ದು, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ತಿಳಿಸಿದ್ದಾರೆ.

ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗುವುದು.
ಮತ್ತು ಪ್ರೌಢಶಿಕ್ಷಣದ ಬಗ್ಗೆ ಸಮಿತಿ ರಚಿಸಿ ಅನುಷ್ಠಾನದ ಬಗ್ಗೆ ತೀರ್ಮಾನಿಸಲಾಗುವುದು. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಎನ್‌‌ಇಪಿಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

ಸಮಗ್ರ ಚರ್ಚೆ ನಡೆಸದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನವೀಯವಾಗಿ ಲಾಠಿಚಾರ್ಜ್‌ ನಡೆಸಿದ್ದರು.

ಇದನ್ನೂ ಓದಿ: NEP ವಿರೋಧಿಸಿ ಪ್ರತಿಭಟಿಸುತ್ತಿದ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ತೀವ್ರ ಖಂಡನೆ

ಐದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್‌ಇಪಿ ಜಾರಿ ನಿಲ್ಲಬೇಕು ಎಂದು ಆಗ್ರಹಿಸಿ ಸೆ.14ರಂದು ವಿಧಾನಸೌಧ ಚಲೋ ಹೋರಾಟ ನಡೆಸುತ್ತಿದ್ದರು. ಈ ವೇಳೆ ಮನಬಂದಂತೆ ಲಾಠಿಚಾರ್ಜ್ ನಡೆಸಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಇನ್ನೂ ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ಸರ್ಕಾರ ಎಸಗಿದ ದೌರ್ಜನ್ಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.


 ಇದನ್ನೂ ಓದಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...