Homeಮುಖಪುಟಕುಸ್ತಿಪಟುಗಳೊಂದಿಗೆ ಮತ್ತೊಮ್ಮೆ ಚರ್ಚಿಸಲು ಸರ್ಕಾರ ಸಿದ್ಧವಿದೆ; ಅನುರಾಗ್ ಠಾಕೂರ್‌

ಕುಸ್ತಿಪಟುಗಳೊಂದಿಗೆ ಮತ್ತೊಮ್ಮೆ ಚರ್ಚಿಸಲು ಸರ್ಕಾರ ಸಿದ್ಧವಿದೆ; ಅನುರಾಗ್ ಠಾಕೂರ್‌

- Advertisement -
- Advertisement -

ಕೇಂದ್ರ ಸರ್ಕಾರವು ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ‘ಚರ್ಚೆ’ ನಡೆಸಲು ಸಿದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.

ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಅದಕ್ಕಾಗಿ ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ ಎಂದು ಠಾಕೂರ್ ಬುಧವಾರ ಮಧ್ಯರಾತ್ರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಧಾನಿಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳ ನಿಯೋಗವನ್ನು ಭೇಟಿಯಾದ ನಾಲ್ಕು ದಿನಗಳ ನಂತರ ಈ ಹೇಳಿಕೆ ಹೊರಬಿದ್ದಿದೆ.

ಎರಡು ಗಂಟೆಗಳ ಕಾಲ ನಡೆದ ಸಭೆಯು ಮಧ್ಯರಾತ್ರಿಯ ನಂತರ ಕೊನೆಗೊಂಡಿತ್ತು. ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ಹಲವಾರು ತರಬೇತುದಾರರು ಭಾಗವಹಿಸಿದ್ದರು ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಈ ಹಿಂದೆ ವರದಿ ಮಾಡಿದೆ. “ನಾವು ಗೃಹ ಸಚಿವರೊಂದಿಗೆ ಸಭೆ ನಡೆಸಿದ್ದೇವೆ. ನಾನು ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ಬಜರಂಗ್ ಪ್ರತಿಕ್ರಿಯಿಸಿದ್ದರು.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಸಂಬಂಧ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ರಾಷ್ಟ್ರ ರಾಜಧಾನಿಯಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿ ಪೊಲೀಸರು ಏಪ್ರಿಲ್ 28 ರಂದು ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಅದರಲ್ಲಿ ಪೋಕ್ಸೋ ಪ್ರಕರಣವೂ ಸೇರಿದೆ.

ಪ್ರತಿಭಟನೆ ಮುಂದುವರಿಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಕುಸ್ತಿಪಟುಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಪುನಿಯಾ ಮಾತನಾಡಿದ್ದು, “ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಲ್ಲಿ ಭಾರತ ಸರ್ಕಾರ ಕೋರಿದೆ” ಎಂದು ತಿಳಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಒಬ್ಬರಾದ ಅಪ್ರಾಪ್ತ ಕುಸ್ತಿಪಟು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿವೆ.

ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ. ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಹೇಳಿಕೆ ಸಲ್ಲಿಸಿದ್ದಾರೆ” ಎಂದು ವಿವರಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ ಒಎಸ್‌ಡಿ ಸೇವೆಗಳನ್ನು ಪುನರಾರಂಭಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...