Homeಕರ್ನಾಟಕಒಳ ಮೀಸಲಾತಿ ವರದಿ ಸ್ವೀಕರಿಸಿದ ಸರ್ಕಾರ; ಜಾರಿ ಕುರಿತು ಆ.16 ರಂದು ವಿಶೇಷ ಸಚಿವ ಸಂಪುಟ...

ಒಳ ಮೀಸಲಾತಿ ವರದಿ ಸ್ವೀಕರಿಸಿದ ಸರ್ಕಾರ; ಜಾರಿ ಕುರಿತು ಆ.16 ರಂದು ವಿಶೇಷ ಸಚಿವ ಸಂಪುಟ ಸಭೆ

- Advertisement -
- Advertisement -

ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳ ಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿದ್ದು, ಮೀಸಲಾತಿ ಜಾರಿ ಕುರಿತು ಆಗಸ್ಟ್‌ 16 ರಂದು ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ.

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದ್ದು, “ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ ಅವರ ಆಯೋಗವನ್ನು ನೇಮಕ ಮಾಡಿದ್ದು, ವರದಿ ಸಲ್ಲಿಕೆಯಾಗಿದೆ. ಶ್ರಮವಹಿಸಿ ಕಡಿಮೆ ಸಮಯದಲ್ಲಿ ವೈಜ್ಞಾನಿಕವಾದ ಅಧ್ಯಯನ ಮಾಡುವ ಮೂಲಕ ಶೇ 95 ರಷ್ಟು ಸಮುದಾಯದ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಿ ವರದಿ ಸಲ್ಲಿಸಿದ್ದಾರೆ. ಸದರಿ ವರದಿಯನ್ನು ಎಲ್ಲ ಸಚಿವರಿಗೆ ನೀಡಲಾಗಿದೆ. ಸಚಿವ ಸಂಪುಟ ವರದಿಯನ್ನು ಸ್ವೀಕರಿಸಿದೆ. ಈ ಬಗ್ಗೆ ಅಧ್ಯಯನ ಮಾಡಿ ಆಗಸ್ಟ್ 16 ರಂದು, ಶನಿವಾರ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದು ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಗುವುದು” ಎಂದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್ ಅವರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಮತ್ತೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆ!

ಸಿದ್ದರಾಮಯ್ಯ ಅವರು ಮೊದಲ ಭಾರಿಗೆ ಮುಖ್ಯಮಂತ್ರಿಯಾಗಿದ್ದಾಗ, 2015 ರಲ್ಲಿ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ನಡೆಸಲಾಗಿತ್ತು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ವರದಿಯನ್ನು ಸಿದ್ಧಪಡಿಸಿತ್ತು. ವರದಿ ಸಿದ್ದಪಡಿಸಿ ಈಗಾಗಲೇ 10 ವರ್ಷ ಕಳೆದಿದ್ದು, ಅದನ್ನು ಈವರೆಗೆ ಬಹಿರಂಗಪಡಿಸಿಲ್ಲ. ಆದರೆ. ಇದೀಗ ಮತ್ತೊಮ್ಮೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸಚಿವ ಸಂಪುಟ ಇಂದು ನಿರ್ಧರಿಸಿದೆ.

ಡಿಜಿಟಲ್ ಮಾದರಿಯಲ್ಲಿ ಸಮೀಕ್ಷೆಯನ್ನು ಕೈಗೊಳ್ಳುವುದು, ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು; ಹಾಗೂ ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ನ್ಯಾ.ನಾಗಮೋಹನ್‌ದಾಸ್ ರವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿರುತ್ತಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುವ ಜೊತೆಗೆ, ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡುವರು ಎಂದು ಸಚಿವರು ತಿಳಿಸಿದ್ದಾರೆ.

2021-22ನೇ ಸಾಲಿನ À RIDF ಟ್ರಾಂಚ್-27ರಡಿ ನಬಾರ್ಡ್ ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ ರೂ.171.91 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಹಾಗೂ ಹೆಚ್ಚುವರಿ ಮೊತ್ತ ರೂ.47.81 ಕೋಟಿಗಳನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದಿಂದ ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಮಹದೇವಪುರ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...