Homeಕರ್ನಾಟಕಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

ಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

- Advertisement -
- Advertisement -

ಅನಿರ್ದಿಷ್ಟಾವಧಿ ಹೋರಾಟವನ್ನು ಕೈಗೊಂಡಿದ್ದ ಅಂಗನವಾಡಿ ನೌಕರರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮಳೆ, ಬಿಸಿಲು, ಚಳಿಯೆನ್ನದೆ ಹೋರಾಟಕ್ಕೆ ಕುಳಿತ್ತಿದ್ದ ತಾಯಂದಿಯರು ಕೊಂಚ ನಿರಾಳವಾಗಿದ್ದು, ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ 2023 ಜನವರಿ 23ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸುಪ್ರೀಂ ಕೋರ್ಟಿನ ತೀರ್ಪಿನಂತೆ ‌ಗ್ರ್ಯಾಚುಟಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಬೇಕು, ಅಂಗನವಾಡಿಗಳನ್ನು ಅನ್ನದ ಜೊತೆಗೆ ಅಕ್ಷರದ ಕೇಂದ್ರವಾಗಿಸಲು, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ನಿರ್ದಿಷ್ಟ ಸಮಯ ಮೀಸಲಿರಿಸಲು, ಶಿಕ್ಷಕಿ ಪದನಾಮ ನೀಡಲು, ಅಂಗನವಾಡಿಗೆ ಬರುವ ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಹಾಗೂ ಅಂಗನವಾಡಿಯಲ್ಲಿ ಓದಿರುವ ಬಗ್ಗೆ ದೃಢೀಕರಣ ಪತ್ರ ನೀಡಲು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರೂಪಿಸಲು ಒತ್ತಾಯಿಸಲಾಗಿತ್ತು.

ಜೊತೆಗೆ ಮಿನಿ ಅಂಗನವಾಡಿ ಹಾಗೂ ಸಹಾಯಕಿಯರಿಗೆ ಪದೋನ್ನತಿಗೆ ಇರುವ ಆದೇಶ ಮಾರ್ಪಡಿಸಲು, ಅಂಗನವಾಡಿ ಕೇಂದ್ರಗಳನ್ನು ಮೇಲ್ದೆರ್ಜೆಗೇರಿಸಲು, ಅಂಗನವಾಡಿಗೆ ಸ್ವಂತ ಕಟ್ಟಡ ಕಟ್ಟಲು 30 ಲಕ್ಷ ರೂ ಮೀಸಲಿರಿಸಲು ಹಾಗೂ ಮೂಲಸೌಕರ್ಯ ಬಲವರ್ಧನೆಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆ ಮಾಡಲು ಇತ್ಯಾದಿ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಈ ಹೋರಾಟ ಕಳೆದ ಹತ್ತು ದಿನಗಳಿಂದ ನಡೆಯುತ್ತಿತ್ತು. ಕೊರೆಯುವ ಚಳಿಯಲ್ಲಿಯೇ ಮಹಿಳೆಯರು ನಡೆಸಿದ ಈ ಐತಿಹಾಸಿಕ ಹೋರಾಟ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಸ್ಪಂದಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಮಧ್ಯೆ ನಮ್ಮ ಹೋರಾಟಕ್ಕೆ ಸ್ಪಂದಿಸಿ ನಾಲ್ಕೈದು ಬಾರಿ ಸರ್ಕಾರದೊಂದಿಗೆ ಮಾತುಕತೆಗಳು ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನ್ಯ ಮಂತ್ರಿಗಳು ಹೋರಾಟದ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು, ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆಗೆ ನಿರ್ಧಿಷ್ಟ ವಿಷಯಗಳ ಕುರಿತು ಚರ್ಚೆಗಳು ನಡೆದವು. ಆದರೆ ಬೇಡಿಕೆ ಈಡೇರಿಕೆಗೆ ಸ್ಪಷ್ಟತೆ ಬಾರದೇ ಇರುವುದರಿಂದ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಲಾಗಿತ್ತು. ಮೂಲಸೌಕರ್ಯಗಳ ಕೊರತೆಯ ಮಧ್ಯೆಯೂ ಹೋರಾಟ ತೀವ್ರತೆ ಪಡೆದಿತ್ತು.

ಸಿಐಟಿಯುನ ಹೋರಾಟಕ್ಕೆ ಮಣಿದ ಇಲಾಖೆಯು ಶಾಲಾಪೂರ್ವ ಶಿಕ್ಷಣಕ್ಕಾಗಿ ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಿರ್ದಿಷ್ಟ ಸಮಯ ಮೀಸಲಿರಿಸಿದ ಸ್ಪಷ್ಟ ಆದೇಶವನ್ನು ಲಿಖಿತವಾಗಿ ನೀಡಿದೆ. ಮಿನಿ ಅಂಗನವಾಡಿ ಹಾಗೂ ಸಹಾಯಕಿಯರ ಪದೋನ್ನತಿಯ ಕುರಿತು ಲೋಪದೋಷಗಳಿರುವ ಆದೇಶ ವಾಪಸ್ ಪಡೆದು, ಮಾರ್ಪಡಿಸಿದ ತಿದ್ದುಪಡಿ ಆದೇಶವನ್ನು ಲಿಖಿತವಾಗಿ ಪಡೆಯಲಾಗಿದೆ. ಕಟ್ಟಡದ ವೆಚ್ಚ 12 ಲಕ್ಷದಿಂದ 20 ಲಕ್ಷಕ್ಕೆ ಏರಿಕೆಗೆ ಒಪ್ಪಿಗೆ ನೀಡಿದೆ. ಮಕ್ಕಳಿಗೆ ಶೂ, ಸಮವಸ್ತ್ರ ಹಾಗೂ ಮೂಲಸೌಕರ್ಯ ಹೆಚ್ಚಿಸಲು ಒಪ್ಪಿಗೆ ಸೂಚಿಸಿದೆ. ಅಂಗನವಾಡಿಗಳಲ್ಲಿ ಶಾಲಾಪೂರ್ವ ಶಿಕ್ಷಣ ಪಡೆದ ದೃಢೀಕರಣ ಪತ್ರ ನೀಡಲು ಸಮ್ಮತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆಯ ವೇಳೆಯಲ್ಲಿ ಇನ್ನುಳಿದ ಬೇಡಿಕೆಗಳೊಂದಿಗೆ ರಾಜ್ಯದ ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಪೂರ್ಣ ಆರೋಗ್ಯ ತಪಾಸಣೆ ಇತ್ಯಾದಿ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರಕಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಂಘಟಕರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಚ್ಯುಟಿಗೆ ಸಂಬಂಧಿಸಿ ಇಂದು 1-2-2023 ಮಾನ್ಯ ಮುಖ್ಯಮಂತ್ರಿಗಳ ಸಲಹೆಯಂತೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ಕಾಯ್ದೆ 1972 ರ ಪ್ರಕಾರ ಉಪಧನ (ಗ್ರಾಚ್ಯುಟಿ) ನೀಡುವ ಕುರಿತು ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಕಳೆದ ಹತ್ತು ದಿನಗಳಿಂದ ಹಮ್ಮಿಕೊಂಡಿರುವ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟವನ್ನು 1-2-2023 ರಂದು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಸಂಘಟನೆಯ ಬೇಡಿಕೆಗಳ ಈಡೇರಿಕೆಗೆ ಸಹಾಯ ಸಹಕಾರ ನೀಡಿದವರಿಗೆ, ಬೆಂಬಲಿಸಿದವರಿಗೆ, ಮಾರ್ಗದರ್ಶನ ಮಾಡಿದ ನಾಡಿನ ಗಣ್ಯರಿಗೆ ಹಿತೈಷಿಗಳಿಗೆ, ಹೋರಾಟವನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡಿದವರಿಗೆ, ಸೂಕ್ತ ರಕ್ಷಣೆ ನೀಡಿದ ಆರಕ್ಷಕರಿಗೆ ಸಂಘಟನೆಯ ಪರವಾಗಿ ವಂದನೆ ಸಲ್ಲಿಸಿದ್ದಾರೆ.

ಸಂಘಟಕರಾದ ಎಸ್. ವರಲಕ್ಷ್ಮಿ, ಶಾಂತಾ ಘಂಟೆ, ಎಚ್ ಎಸ್ ಸುನಂದಾ, ಜಿ ಕಮಲಾ, ಯಮುನಾ ಗಾಂವ್ಕರ್, ಜಯಶ್ರೀ ಹಿರೇಕರ್, ಲಲಿತಾ ಹೆಗಡೆ, ವಿದ್ಯಾ ವೈದ್ಯ, ಗೀತಾ ನಾಯ್ಕ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...