Homeಕರ್ನಾಟಕಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ...

ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

‘ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರನ್ನು ನೇಮಕ ಮಾಡುವ ಮುನ್ನ ಶೋಧನಾ ಸಮಿತಿ ರಚನೆ ಮಾಡಿರಲಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ನೇಮಕಾತಿಗೆ ತಡೆ ಕೋರಿರುವ ಅರ್ಜಿದಾರರ ಮಧ್ಯಂತರ ಕೋರಿಕೆಗೆ ಸಂಬಂಧಿಸಿದಂತ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಮಾಹಿತಿ ಆಯುಕ್ತರ ಹುದ್ದೆಯ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಜೆ.ಪಿ ನಗರ 7ನೇ ಹಂತದ ನಿವಾಸಿ ಸಾಮಾಜಿಕ ಕಾರ್ಯಕರ್ತ ಕೆ.ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಫೆ. 18) ವಿಚಾರಣೆ ನಡೆಸಿದೆ.

ಈ ವೇಳೆ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್ ಶೆಟ್ಟಿ ಅವರು, “ಶೋಧನಾ ಸಮಿತಿಯನ್ನು ಕಡ್ಡಾಯವಾಗಿ ರಚಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದಿಷ್ಟ ನಿರ್ದೇಶನವನ್ನೂ ನೀಡಿಲ್ಲ. ಶೋಧನಾ ಸಮಿತಿ ರಚಿಸುವುದು ಸೂಕ್ತ ಎಂದು ಹೇಳಿದೆಯಷ್ಟೇ” ಎಂದಿದ್ದಾರೆ.

“ನೇಮಕಾತಿಯಲ್ಲಿ ಯಾವ ಪ್ರಕ್ರಿಯೆ ಅನುಸರಿಸಲಾಗಿದೆ ಎಂಬುವುದರ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಿದೆ. ಅದನ್ನು ಸಲ್ಲಿಸಿ ಒಪ್ಪಿಗೆ ಪಡೆಯಲಾಗುವುದು. ಅರ್ಜಿಯು ಸುಪ್ರೀಂ ಕೋರ್ಟ್‌ ಪರಿಗಣನೆಗೆ ಒಳಪಟ್ಟಿರುವಾಗ ಇಲ್ಲಿ ಈ ಅರ್ಜಿಯನ್ನು ಪುರಸ್ಕರಿಸುವುದು ಸೂಕ್ತವಲ್ಲ” ಎಂದು ಹೇಳಿದ್ದಾರೆ.

ಸಿಐಸಿ ಮತ್ತು ಕೆಲ ಮಾಹಿತಿ ಆಯುಕ್ತರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಅರ್ಜಿದಾರರು ಸಿಐಸಿ ಹುದ್ದೆಗೆ ಅರ್ಜಿ ಹಾಕಿರಲಿಲ್ಲ ಎಂದಾಗಲಿ, ಸಿಐಸಿಯಾಗಿ ನೇಮಕವಾಗಲು ಆಶಿತ್‌ ಮೋಹನ್‌ ಪ್ರಸಾದ್‌ ಅರ್ಹರಲ್ಲ ಎಂಬುದಕ್ಕೆ ಸಂಬಂಧಿಸಿದಂತೆಯಾಗಲಿ ಯಾವುದೇ ಗುಮಾನಿಯೂ ಅರ್ಜಿಯಲಿಲ್ಲ. ಹೀಗಾಗಿ, ಅರ್ಜಿ ವಜಾ ಮಾಡಬೇಕು” ಎಂದು ಕೋರಿದ್ದಾರೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಅಶೋಕ್‌ ಪಾಟೀಲ್‌ ಅವರು “ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರ ನೇಮಕಾತಿಗೂ ಮುನ್ನ ತಮಿಳುನಾಡು, ಮಹಾರಾಷ್ಟ್ರ, ಹರಿಯಾಣ ಮತ್ತು ತ್ರಿಪುರದಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ. ಹೀಗಾಗಿ, ಸುಪ್ರೀಂ ಕೋರ್ಟ್‌ ನಿರ್ದೇಶನಗಳು ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎನ್ನಲಾಗದು. ರಾಜ್ಯ ಸರ್ಕಾರವು 2024ರ ಜೂನ್‌ 11ರಂದು ಮುಖ್ಯ ಮಾಹಿತಿ ಆಯುಕ್ತರು ಮತ್ತು ಒಂದು ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಆದರೆ, ಸಿಐಸಿ ಮತ್ತು ಏಳು ಮಾಹಿತಿ ಆಯುಕ್ತರನ್ನು ನೇಮಿಸಲಾಗಿದೆ. ಇಲ್ಲಿ ಎರಡು ಅಧಿಸೂಚನೆಗಳನ್ನು ಒಟ್ಟುಗೂಡಿಸಿ ಶೋಧನಾ ಸಮಿತಿ ಇಲ್ಲದೇ ನೇಮಕಾತಿ ಮಾಡಲಾಗಿದೆ. ಕಾನೂನು ಪಾಲಿಸದೇ ನೇಮಕ ಮಾಡಿರುವವರು ಪ್ರಮಾಣ ಸ್ವೀಕರಿಸಿ, ಕೆಲಸ ಮಾಡುತ್ತಿರುವುದರಿಂದ ಮಧ್ಯಂತರ ಆದೇಶ ಮಾಡಬೇಕು. ಆನಂತರ ಅವರು ಆಕ್ಷೇಪಣೆ ಸಲ್ಲಿಸಬಹುದು” ಎಂದಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮಧ್ಯಂತರ ಕೋರಿಕೆಯ ಕುರಿತು ಆದೇಶ ಕಾಯ್ದಿರಿಸಿದೆ. ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ. ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ ಎಂದು ಫೆಬ್ರವರಿ 4ರಂದು ನ್ಯಾಯಾಲಯ ಹೇಳಿತ್ತು.

ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಎ.ಎಂ.ಪ್ರಸಾದ್ ಹಾಗೂ ಆಯುಕ್ತರಾಗಿ ಕೆ‌.ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ.ಬದ್ರುದ್ದೀನ್ ಮತ್ತು ಬಿ.ಆರ್.ಮಮತಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದಾರೆ. ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತ ಮತ್ತು ಇತರ ಆಯುಕ್ತರು ಫೆಬ್ರವರಿ 4ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸೌಜನ್ಯ : ಬಾರ್ & ಬೆಂಚ್

ಕುಡಿಯುವ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಲು ನಿರ್ಧರಿಸಿದ ಬೆಂಗಳೂರು ಜಲಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...