Homeಕರ್ನಾಟಕಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್...

ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ

- Advertisement -
- Advertisement -

ಪ್ರಾಥಮಿಕ ಆಗಲಿ ಉನ್ನತ ಶಿಕ್ಷಣವಾಗಲಿ ಅದು ಬಂಡವಾಳಶಾಹಿಗಳ ಕೈಗೆ ಹೋಗಿಬಿಟ್ಟಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಉದ್ಯೋಗದ ವಿಚಾರದಲ್ಲಿ ಖಾಲಿ ಉದ್ಯೋಗಗಳನ್ನು ತುಂಬುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಗುರುವಾರ ಹೇಳಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಎರಡನೇ ದಿನದ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ

“ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಕೃಷಿಯಿಂದ ಯುವಜನರು ವಲಸೆ ಹೋಗುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತಿಲ್ಲ. ಕೃಷಿ ವಲಯವನ್ನು ಗಟ್ಟಿ ಮಾಡಿದರೆ ವಲಸೆ ಕಡಿಮೆ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ಕೂಲಿಕಾರರು ಇಲ್ಲದೆ ಭೂಮಿ ಬೀಳು ಬಿದ್ದಿದೆ. ಈ ಕೂಲಿಕಾರರಿಗೆ ಸರ್ಕಾರ ಪ್ರೋತ್ಸಾಹ ಮಾಡಬೇಕು.‌ ಆರೊಗ್ಯ, ಶಿಕ್ಷಣ, ಕೃಷಿಯನ್ನು ಖಾಸಗಿಗೆ ವಹಿಸುವುದು ಎಂದರೆ ಅದೊಂದು ಹುನ್ನಾರ ಆಗಿದೆ” ಎಂದು ಹೇಳಿದರು. ಸರ್ಕಾರಿ ಶಾಲೆ

ವಿಚಾರಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್, “ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ 2.5% ಶಿಕ್ಷಣಕ್ಕಾಗಿ ಮೀಸಲಿಟ್ಟರೆ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ 10% ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದೆ. ವಿಶ್ವದ ಸಣ್ಣ ಸಣ್ಣ ದೇಶಗಳು ತನ್ನ ಬಜೆಟ್‌ನಲ್ಲಿ 15% ದಿಂದ 20%ದ ವರೆಗೆ ಶಿಕ್ಷಣಕ್ಕಾಗಿ ಮೀಸಲಿಡುತ್ತಿದೆ” ಎಂದು ಹೇಳಿದರು.

ಕೋಲಾರದಲ್ಲಿ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸುತ್ತಿದೆ. ಆದರೆ ಈ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದು. ಅದನ್ನು ಸರ್ಕಾರವೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್

“ಶಾಲೆಗಳನ್ನು ಮುಚ್ಚಲು ಬಿಜೆಪಿಯ ಸುನಿಲ್ ಕುಮಾರ್ ಮತ್ತು ಕಾಂಗ್ರೆಸ್‌ನ ಶಿವಲಿಂಗೇಗೌಡ ಅವರು ಬೆಂಬಲ ನೀಡುತ್ತಿದ್ದಾರೆ. ಖಾಸಗಿ ಅನಧೀಕೃತ ಶಾಲೆಗಳನ್ನು ಮುಚ್ದಲು ಧಮ್ ಇಲ್ಲದ ಸರ್ಕಾರ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಅದು ಅವರ ಅಪ್ಪನದ್ದಾ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೈಲಿನಲ್ಲಿರುವ ಖೈದಿಗಳ ಆಹಾರಕ್ಕೆ 75 ರೂ. ಕೊಡುವ ಸರ್ಕಾರ, ಹಾಸ್ಟೆಲ್‌ನಲ್ಲಿ ಓದುವ ವಿದ್ಯಾರ್ಥಿಗಳಿಗೆ 61 ರೂ. ನೀಡುತ್ತಿದೆ. ಬಜೆಟ್‌ನ ಮೊತ್ತದಲ್ಲಿ ಏನೂ ಅಲ್ಲದ, 150 ಕೋಟಿ ರೂ. ನೀಡಿ ಸೈಕಲ್ ವಿತರಣೆ ಮಾಡಲು ಕೂಡಾ ಸರ್ಕಾರ ಮುಂದಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಐಎಸ್‌ಎ ರಾಷ್ಟ್ರೀಯ ಕಾರ್ಯದರ್ಶಿ ಲೇಖಾ ಅಡವಿ ಮಾತನಾಡಿ, ಶಿಕ್ಷಣದ ಕೇಂದ್ರಿಕರಣ, ಕೋಮುವಾದಿಕರಣ ಮತ್ತು ಕಾರ್ಪೋರೇಟೀಕರಣ ಬಗ್ಗೆ ನಾವು ಮಾತಾಡಬೇಕಾಗುತ್ತದೆ. ಬಿಜೆಪಿ ತಂದ ಎನ್‌ಇಪಿಯನ್ನು ಕಾಂಗ್ರೆಸ್ ಸರ್ಕಾರ ಹಿಂಬಾಗಿಲಿನ ಮೂಲಕ ಜಾರಿ ಮಾಡುತ್ತಿದೆ. ಕೇಂದ್ರದಂತೆ ರಾಜ್ಯ ಸರ್ಕಾರ ಕೂಡಾ ಸಾಲ ಮಾಡಿ ಯುನಿವರ್ಸಿಟಿಗಳನ್ನು ನಡೆಸಲು ಮುಂದಾಗುತ್ತಿದೆ. ಆದರೆ, ಈ ಸಾಲವನ್ನು ಭರಿಸಬೇಕಾದವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟಿಸ್ ಜಾರಿ ಕೂಡಾ ಅಪಾಯಕಾರಿಯಾಗಿದೆ. ರಾಜ್ಯದ ವಿಶ್ವವಿದ್ಯಾಲಯದಲ್ಲಿ ಅನುದಾನಗಳು ಇಲ್ಲ, ಕಾಲೇಜುಗಳಲ್ಲಿ ಮೂಲಭೂತವಾಗಿ ಸೌಕರ್ಯಗಳು ಇಲ್ಲ. ಸರ್ಕಾರ ಬಿಡಗಡೆ ಮಾಡುತ್ತಿರುವ ಅನುದಾನ ಈ ಮೂಲ ಸೌಕರ್ಯಕ್ಕಾಗಿ ಬಳಸಲಾಗುತ್ತಿಲ್ಲ. ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿ ಸಂಘಟನೆಗಳು ಫೀಸ್ ಹೆಚ್ಚಳದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿಯಿದೆ” ಎಂದು ಅವರು ಹೇಳಿದರು.

“ಉತ್ತಮ ಶಿಕ್ಷಣ ಪಡೆಯುವುದರಲ್ಲಿ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಸರ್ಕಾರ ಖಾಸಗಿ ವಿಶ್ವವಿದ್ಯಾಲಯಗಳ ಪ್ರಾರಂಭಕ್ಕೆ ಪ್ರೋತ್ಸಾಹ ನೀಡುತ್ತಿದೆ. ಈ ಖಾಸಗಿ ಸಂಸ್ಥೆಯಲ್ಲಿ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯವನ್ನು ಎಷ್ಟು ಮಟ್ಟಿಗೆ ಪಾಲಿಸಲಾಗುತ್ತಿದೆ ಎಂಬ ಮಾಹಿತಿಯಿಲ್ಲ” ಎಂದು ಅವರು ಹೇಳಿದರು.

“ಶಿಕ್ಷಣದ ಕೋಮುವಾದಿಕರಣ ಆಗುತ್ತಿದ್ದು, ಬಿಜೆಪಿ ಸರ್ಕಾರ ಇದ್ದಾಗ, ಹಿಜಾಬ್ ಮತ್ತು ಮುಸ್ಲಿಂ ಮೀಸಲಾತಿ ರದ್ದಿ ಮಾಡಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರ ಈ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸಲು, ವೈಜ್ಞಾನಿಕ ಚಿಂತನೆಗಳನ್ನು ಪ್ರತಿಪಾದಿಸಲು ಸರ್ಕಾರ ಏನು ಮಾಡತ್ತಿವೆ ಎಂದು ನಾವು ಪ್ರಶ್ನಿಸಬೇಕಾಗಿದೆ. ಜೊತೆಗೆ, ವೈಚಾರಿಕತೆ ಬೆಳೆಯಲು ಗ್ರಂಥಾಲಯಗಳ ನಿರ್ಮಾಣಕ್ಕೆ ಸರ್ಕಾರ ಯಾವುದೇ ಅನುದಾನ ಈ ಬಜೆಟ್‌ನಲ್ಲಿ ನೀಡಿಲ್ಲ” ಎಂದು ಲೇಖಾ ಅಡವಿ ದೂರಿದರು.

ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅವರು ಮಾತನಾಡಿ, “500 ಪಬ್ಲಿಕ್ ಶಾಳೆಗಳನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಹೇಳುವ ಸರ್ಕಾರ, ಅದೇ ವೇಳೆ ವಿದ್ಯಾರ್ಥಿಗಳು ಇಲ್ಲ ಎಂದು 6000 ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದು ನೆಗಡಿ ಬಂದರೆ ಮೂಗು ಕತ್ತರಿಸಿದಂತೆ ಆಗಲಿದೆ. ಆದರೆ, ಈ ಶಾಲೆಗಳಿಗೆ ಯಾಕೆ ಮಕ್ಕಳು ಬರುತ್ತಿಲ್ಲ ಎಂದು ಸರ್ಕಾರ ಯೋಚಿಸುತ್ತಿಲ್ಲ” ಎಂದು ಹೇಳಿದರು.

“ಸಾವಿರಾರು ಏಕೋಪಧ್ಯಾ ಯ ಶಾಲೆಗಳಿವೆ, ಸರಿಯಾದ ಅಧ್ಯಾಪಕರಿಲ್ಲದ ಹಲವಾರು ಶಾಲೆಗಳು ಇಲ್ಲ. ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅದೇ ಸರ್ಕಾರ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎಂದು ಹೇಳುತ್ತಿದೆ. ಸರ್ಕಾರಿ ಶಾಲೆಗಳನ್ನು, ವಿಶ್ವವಿದ್ಯಾಲಗಳನ್ನು ಬಂದ್ ಮಾಡಿ ಶಿಕ್ಷಣ ನಮ್ಮ ಜವಾಬ್ದಾರಿ ಅಲ್ಲ ಎಂದು ಪ್ರತಿಪಾದಿಸುತ್ತದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ ಯಾವುದೇ ಉದ್ದೇಶ ಆಳುವ ಸರ್ಕಾರಗಳಿಗೆ ಇಲ್ಲ” ಎಂದು ಅವರು ಹೇಳಿದರು. ಸರ್ಕಾರಿ ಶಾಲೆ

ಶಾಲೆಗಳನ್ನು ಮುಚ್ಚಲು ಹೊರಟಿದ್ದ ಬೊಮ್ಮಾಯಿ ಅವರು ಪ್ರತಿಭಟನೆ ಕಾರಣಕ್ಕೆ ಆ ಆದೇಶವನ್ನು ವಾಪಾಸು ಪಡೆದರು. ಆದರೆ ಈಗ ಸಿದ್ದರಾಂಯ್ಯ ಅವರು ಅದೇ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ, “ಶಿಕ್ಷಣಕ್ಕೆ ಇಟ್ಟ ಮೊತ್ತದಲ್ಲಿ ಕಳೆದ ಬಾರಿಗಿಂತ 2% ಕಡಿತ ಮಾಡಿದ್ದಾರೆ. ತಜ್ಞರು ಶಿಕ್ಷಣಕ್ಕಾಗಿ ಕನಿಷ್ಠ 15 ರಿಂದ 20% ಇಡಬೇಕು ಎಂದು ಹೇಳುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮತ್ತು ಖಾಸಗಿ ಶಾಲೆಗೆ ಹೋಗುವ ಮಕ್ಕಳಿಗೆ ನಾವು ಯಾಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗೆ ಹೋಗುತ್ತಿದ್ದೇವೆ ಎಂದು ಅವರಿಗೆ ತಿಳಿಯುತ್ತಿದೆ. ಬಡತನ ಮತ್ತು ಶ್ರೀಮಂತಿಕೆ ಕಾರಣಕ್ಕಾಗಿ ನಾವು ಇಲ್ಲಿದ್ದೇವೆ ಎಂದು ಅವರಲ್ಲಿ ಅಸಮಾನತೆಯನ್ನು ಸರ್ಕಾರವೆ ಪೋಷಿಸುತ್ತಿದೆ” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...