Homeಮುಖಪುಟವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

- Advertisement -
- Advertisement -

“ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ ಕೋರಿ ವಿಚಾರಣೆ ಮುಂದೂಡುವಂತೆ ಮಾಡುತ್ತಿದ್ದಾರೆ” ಎಂದು ಸೋನಮ್ ವಾಂಗ್‌ಚುಕ್ ಪತ್ನಿ ಗೀತಾಂಜಲಿ ಆಂಗ್ಮೋ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಮಾತನಾಡಿದ ಅವರು, “ಸೋನಮ್ ವಾಂಗ್‌ಚುಕ್ ಅವರ ಬಂಧನವು ದೇಶದಲ್ಲಿ ಪ್ರಜಾಪ್ರಭುತ್ವ ಯಾವ ಹಂತದಲ್ಲಿದೆ ಎಂಬುವುದನ್ನು ಪ್ರತಿಬಿಂಬಿಸುತ್ತದೆ. ಅಧಿಕಾರಿಗಳ ಕಾರ್ಯವಿಧಾನದ ಲೋಪಗಳಿಂದಾಗಿ ಸೋನಮ್ ಜೈಲಿನಲ್ಲಿದ್ದಾರೆ. ಇಲ್ಲವಾದಲ್ಲಿ ಈಗಾಗಲೇ ಜೈಲಿನಿಂದ ಹೊರಬರಬೇಕಾಗಿತ್ತು” ಎಂದಿದ್ದಾರೆ.

ದಂಪತಿ ಜೊತೆಯಾಗಿ ಸ್ಥಾಪಿಸಿರುವ ಲಡಾಖ್‌ನ ಹಿಮಾಲಯನ್ ಇನ್ಸಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) ವಿರುದ್ಧ ಇರುವ ವಿದೇಶಿ ದೇಣಿಗೆ ಪಡೆದ ಆರೋಪದ ಬಗ್ಗೆಯೂ ಗೀತಾಂಜಲಿ ಪ್ರತಿಕ್ರಿಯಿಸಿದ್ದು, “ಇದು ಸಂಪೂರ್ಣವಾಗಿ ಓಪನ್ ಅಂಡ್ ಶಟ್ ಕೇಸ್” ಎಂದು ಹೇಳಿದ್ದಾರೆ.

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು, ಲಡಾಖ್‌ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಹಲವು ವರ್ಷಗಳಿಂದ ನಡೆಸುತ್ತಿದ್ದ ಪ್ರತಿಭಟನೆ, 2025ರ ಸೆಪ್ಟೆಂಬರ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರ ಗುಂಡೇಟಿಗೆ ನಾಲ್ವರು ಬಲಿಯಾದರೆ, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಈ ಘಟನೆಯ ಬಳಿಕ ಹೋರಾಟ ನಿರತ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪರಿಸರವಾದಿ, ಶಿಕ್ಷಣತಜ್ಞ ಸೋನಮ್ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್ 26ರಂದು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ. ಸದ್ಯ ವಾಂಗ್‌ಚುಕ್ ಜೋಧ್‌ಪುರ ಜೈಲಿನಲ್ಲಿದ್ದಾರೆ. ವಾಂಗ್‌ಚುಕ್ ಬಂಧನಕ್ಕೆ ಹಲವು ಸಾಮಾಜಿಕ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ ತನ್ನ ವಿರುದ್ಧ ಹೋರಾಡುವವರನ್ನು ಹತ್ತಿಕ್ಕಲು ಎನ್‌ಎಸ್‌ಎ ಕಾಯ್ದೆಯ ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ತನ್ನ ಪತಿಯ ಪರ ವಾಂಗ್‌ಚುಕ್ ಪತ್ನಿ ಗೀತಾಂಜಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.

ಈ ದೇಶದಲ್ಲಿ, ದೇಶಕ್ಕಾಗಿ ಕೆಲಸ ಮಾಡುತ್ತಿರುವವರನ್ನು ಅಕ್ರಮವಾಗಿ ಬಂಧಿಸಲು ಅಧಿಕಾರವನ್ನು ದುರುಪಯೋಗ ಮಾಡಲಾಗುತ್ತಿದೆ. ದೇಶಕ್ಕಾಗಿ ಇಷ್ಟೊಂದು ಕೊಡುಗೆ ನೀಡಿದ ಸೋನಮ್‌ಗೆ ಹೀಗೆ ಆಗುವುದಾದರೆ, ಬೇರೆಯವರಿಗೆ ಯಾವ ರೀತಿಯ ಅನ್ಯಾಯವಾಗಬಹುದು? ಎಂದು ಗೀತಾಂಜಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಸೋನಮ್ ವಾಂಗ್‌ಚುಕ್ ಬಂಧನ ಬಗ್ಗೆ ನಿರೀಕ್ಷಿತ ವಿರೋಧ ವ್ಯಕ್ತವಾಗದಿರುವುದು ನನಗೆ ಸ್ವಲ್ಪ ನಿರಾಶೆಯಾಗಿದೆ. ಆದರೆ, ನಾವು ಮೌನವಾಗಿರಲು ಸಾಧ್ಯವಿಲ್ಲ. ನಾವು ಹೆಚ್ಚು ಸಂಯಮದಿಂದ ಮತ್ತು ಜೋರಾದ ಧ್ವನಿಯಲ್ಲಿ ಮಾತನಾಡಬೇಕಾಗಿದೆ, ವಿರೋಧಿಸಬೇಕಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಗೀತಾಂಜಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...