Homeಮುಖಪುಟಸೀಲ್‌ಡೌನ್‌ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು: ಎಚ್‌.ಡಿ.ಕೆ ಆಗ್ರಹ

ಸೀಲ್‌ಡೌನ್‌ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು: ಎಚ್‌.ಡಿ.ಕೆ ಆಗ್ರಹ

- Advertisement -
- Advertisement -

ಸೀಲ್‌ಡೌನ್‌ಗೆ ಸಂಬಂಧಿಸಿದಂತೆ ಬಗೆಬಗೆಯ ಸುದ್ದಿಗಳು ಹರಿದಾಡುತ್ತಿವೆ. ಜನರಲ್ಲಿ ಭೀತಿ ಆವರಿಸಿದ್ದು, ಸಮೂಹ ಸನ್ನಿಗೆ ಸಿಲುಕಿದ್ದಾರೆ. ಆಹಾರ, ಔಷಧ, ಅಗತ್ಯ ವಸ್ತುಗಳ ಲಭ್ಯತೆ ಬಗ್ಗೆ ಜನರಲ್ಲಿ ಅನುಮಾನಗಳು ಮೂಡಿದ್ದು, ಅವುಗಳ ದಾಸ್ತಾನಿಗೆ ಮುಂದಾಗಿದ್ದಾರೆ. ಇದು ಮತ್ತೊಂದು ಸಮಸ್ಯೆ ಸೃಷ್ಟಿಸುವ ಮುನ್ನ ಸರ್ಕಾರ ಅನುಮಾನಗಳನ್ನು ನೀಗಿಸಬೇಕು ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸೀಲ್‌ಡೌನ್‌ ಭೀತಿ ಜನರನ್ನು ಸಮೂಹಸನ್ನಿಗೆ ದೂಡಿರುವಾಗಲೇ, ದಿನಸಿ ಅಂಗಡಿ, ಔಷಧಾಲಯಗಳು ತೆರೆಯಬೇಕೋ ಬೇಡವೋ ಎಂಬ ಅನುಮಾನ ಮಾರಾಟಗಾರರಲ್ಲಿ ಮೂಡಿದೆ. ಹಾಗೇನಾದರೂ ದಿನಸಿ ಅಂಗಡಿಗಳು, ಔಷಧಾಲಯಗಳು ಭೀತಿಯಿಂದ ಮುಚ್ಚಿದರೆ, ಜನರಿಗೆ ಆಹಾರ, ಔಷಧಗಳ ಲಭ್ಯತೆಯಲ್ಲಿ ಸಮಸ್ಯೆ ಸೃಷ್ಟಿಯಾಗಲಿದೆ. ಈ ಬಗ್ಗೆ ಸರ್ಕಾರ ಎಚ್ಚರ ವಹಿಸುವ ತುರ್ತು ಎದುರಾಗಿದೆ ಎಂದಿದ್ದಾರೆ.

ಸೀಲ್‌ಡೌನ್‌ ಮಾಡಲು ಸರ್ಕಾರ ನಿರ್ಧರಿಸಿದೆಯೇ? ಮಾಡುವುದಿದ್ದರೆ ಯಾವ್ಯಾವ ಜಿಲ್ಲೆಗಳಿಗೆ ಇದು ಅನ್ವಯ? ಸೀಲ್‌ಡೌನ್‌ ಅವಧಿಯಲ್ಲಿ ಏನೆಲ್ಲ ಲಭ್ಯ, ಏನು ಲಭ್ಯವಿರದು ಎಂಬುದರ ಬಗ್ಗೆ ಸರ್ಕಾರ ಕೂಡಲೇ ಅಧಿಕೃತವಾಗಿ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಗಾಳಿ ಸುದ್ದಿಗಳು, ಸುಳ್ಳು ಮಾಹಿತಿಗಳು ಜನರ ದಿಕ್ಕು ತಪ್ಪಿಸಲಿವೆ. ಕೂಡಲೇ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಗುಜರಾತ್‌ ಹತ್ಯಾಕಾಂಡ ಮರಕಳಿಸಬೇಕು’ ಪೋಸ್ಟ್‌ ಹಾಕಿದ ಹಿಂದೂ ಮಹಾಸಭಾ ಮುಖಂಡನ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...