Homeಕರೋನಾ ತಲ್ಲಣಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಬೇಕು: ಸೋನು ಸೂದ್ ಆಗ್ರಹ

ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಬೇಕು: ಸೋನು ಸೂದ್ ಆಗ್ರಹ

ಮನೆಯ ಏಕೈಕ ದುಡಿಯುವ ವ್ಯಕ್ತಿಗಳನ್ನು ಕಳೆದುಕೊಂಡ ಕುಟುಂಬಗಳು ಹೇಗೆ ಬದುಕಬೇಕು? ಹಾಗಾಗಿ ಇಂತಹ ಕುಟುಂಬಗಳಿಗೆ ಸಾಮಾಜಿಕ ಸಂಘಟನೆಗಳು, ವ್ಯಕ್ತಿಗಳು ಸಹಾಯ ಮಾಡಬೇಕು.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕದ ಕಾರಣಕ್ಕೆ ಹೇರಲಾಗಿದ್ದ ಲಾಕ್‌ಡೌನ್‌ ಸಮಯದಲ್ಲಿ ಸಾವಿರಾರು ವಲಸೆ ಕಾರ್ಮಿಕರ ಪಾಲಿಗೆ ದೇವರಂತೆ ಬಂದು ಸಹಾಯ ಮಾಡಿ ಶ್ಲಾಘನೆಗೊಳಗಾದವರು ಬಾಲಿವುಡ್ ನಟ ಸೋನು ಸೂದ್. ಅವರು ‘ಈಗ ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ವಿಡಿಯೋ ಮೂಲಕ ಮನವಿ ಮಾಡಿರುವ ಅವರು, “ಕೋವಿಡ್ ಎರಡನೇ ಅಲೆಯಿಂದಾಗಿ ಬಹುತೇಕ ಜನರು ಮೃತಪಟ್ಟಿದ್ದಾರೆ. ಅದರಲ್ಲಿ ಕೆಲವು ಮಕ್ಕಳಂತೂ ತಮ್ಮ ಪೋಷಕರನ್ನು, ತಂದೆ-ತಾಯಿಗಳನ್ನು ಕಳೆದುಕೊಂಡಿದ್ದಾರೆ. ಹಾಗಾದರೆ ಅವರ ಮುಂದಿನ ಶಿಕ್ಷಣದ ಕಥೆ ಏನು? ವಿಶೇಷವಾಗಿ 8-10-12 ವರ್ಷದ ಮಕ್ಕಳ ತಂದೆ ತಾಯಿಗಳು ನಿಧನರಾಗಿದ್ದರೆ ಅವರ ಭವಿಷ್ಯ ಏನಾಗುತ್ತದೆ? ಹಾಗಾಗಿ ಇಂತಹ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಸರ್ಕಾರ ನಿಯಮ ರೂಪಿಸಬೇಕೆಂದು” ಅವರು ಒತ್ತಾಯಿಸಿದ್ದಾರೆ.

ಆ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿರಲಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿರಲಿ. ಅವರು ಎಲ್ಲಿವರೆಗೂ ಓದಲು ಬಯಸುತ್ತಾರೋ (ಪದವಿ, ಇಂಜಿನಿಯರಿಂಗ್, ಮೆಡಿಕಲ್) ಅಲ್ಲಿಯವರೆಗೂ ಅವರಿಗೆ ಉಚಿತ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು. ಅದಕ್ಕಾಗಿ ವಿಶೇಷ ನಿಯಮ ರೂಪಿಸಬೇಕು. ಸಾರ್ವಜನಿಕರು ಇದರಲ್ಲಿ ನೆರವಾಗಬಹುದು ಎಂದು ಅವರು ಸಲಹೆ ನೀಡಿದ್ದು ತಮ್ಮ ವಿಡಿಯೋವನ್ನು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದಾರೆ.

ಅಲ್ಲದೇ ನೂರಾರು ಕುಟುಂಬಗಳಲ್ಲಿ ಮನೆಯ ಆಧಾರಸ್ಥಂಭವಾಗಿದ್ದ ವ್ಯಕ್ತಿಗಳೇ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಮನೆಯ ಏಕೈಕ ದುಡಿಯುವ ವ್ಯಕ್ತಿಗಳನ್ನು ಕಳೆದುಕೊಂಡ ಕುಟುಂಬಗಳು ಹೇಗೆ ಬದುಕಬೇಕು? ಹಾಗಾಗಿ ಇಂತಹ ಕುಟುಂಬಗಳಿಗೆ ಸಾಮಾಜಿಕ ಸಂಘಟನೆಗಳು, ವ್ಯಕ್ತಿಗಳು ಸಹಾಯ ಮಾಡಬೇಕು. ಸರ್ಕಾರವು ಇತ್ತ ಗಮನ ಹರಿಸಬೇಕು ಎಂದು ಸೋನು ಸೂದ್ ಮನವಿ ಮಾಡಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಅಕ್ಷರಶಃ ಲಕ್ಷಾಂತರ ಜನರಿಗೆ ಸೋನು ಸೂದ್ ತಮ್ಮ ಫೌಂಡೇಶನ್ ವತಿಯಿಂದ ಸಹಾಯ ಮಾಡಿದ್ದಾರೆ. ಈ ಬಾರಿಯೂ ಆಕ್ಸಿಜನ್, ಔಷಧಿ, ಬೆಡ್‌ಗಾಗಿ ಪ್ರಯತ್ನಿಸಿ ಸಹಾಯ ಮಾಡಿದ್ದಾರೆ. ಅಂತವರು ಸರ್ಕಾರಕ್ಕೆ ಮೊದಲ ಬಾರಿ ಸಾಮಾಜಿಕ ಕಾಳಜಿಯ ಕುರಿತು ಒತ್ತಾಯ ಮಾಡಿದ್ದಾರೆ. ಇದನ್ನು ಸರ್ಕಾರ ನೆರವೇರಿಸುತ್ತದೆಯೇ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ರೈತರು ನಡುಕ ಹುಟ್ಟಿಸುವ ಚಳಿಯಲ್ಲಿ ಕುಳಿತಿದ್ದಾರೆ; ಇನ್ನೆಷ್ಟು ದಿನ ಇದನ್ನು ನೋಡುತ್ತಿರಬೇಕು: ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...