Homeಕರ್ನಾಟಕ‘ಶಿಕ್ಷಣ, ಸಂಸ್ಕೃತಿ ಮೇಲಿನ ಅಸಂವಿಧಾನಿಕ ದಬ್ಬಾಳಿಕೆಗೆ ಸರ್ಕಾರ ಮೌನ’: ‘ರಾಷ್ಟ್ರಕವಿ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು...

‘ಶಿಕ್ಷಣ, ಸಂಸ್ಕೃತಿ ಮೇಲಿನ ಅಸಂವಿಧಾನಿಕ ದಬ್ಬಾಳಿಕೆಗೆ ಸರ್ಕಾರ ಮೌನ’: ‘ರಾಷ್ಟ್ರಕವಿ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು ಸದಸ್ಯರು ರಾಜೀನಾಮೆ

- Advertisement -
- Advertisement -

ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಗಳನ್ನು ಪ್ರತಿಭಟಿಸಿ ‘ರಾಷ್ಟ್ರಕವಿ ಡಾ. ಜಿಎಸ್‌ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು ಮೂವರು ಸದಸ್ಯರು ಸೋಮವಾರ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಕೋಮುದ್ವೇಷವನ್ನು ರಾಜಾರೋಷವಾಗಿ ಮಾತನಾಡುತ್ತಾ, ಆಟಾಟೋಪ ಮರೆಯುತ್ತಾ ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ ಸರ್ಕಾರ ಮೌನ ವಹಿಸಿರುವುದು ಆತಂಕ ಭಯ ಉಂಟು ಮಾಡುತ್ತಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಪ್ರೊಫೆಸರ್‌ ಎಸ್‌.ಜಿ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪ್ರತಿಷ್ಠಾನದ ಸದಸ್ಯರುಗಳಾದ ಡಾ. ಎಚ್‌.ಎಸ್‌. ರಾಘವೇಂದ್ರ ರಾವ್‌, ಡಾ. ಚಂದ್ರ ಶೇಖರ ನಂಗಲಿ, ಡಾ. ನಟರಾಜ ಬೂದಾಳು ಅವರು ಕೂಡಾ ರಾಜೀನಾಮೆಗೆ ನೀಡುವುದಾಗಿ ಪತ್ರದಲ್ಲಿ ಹೇಳಿದ್ದಾರೆ.

“ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಗಳನ್ನು ಕಂಡು ಆತಂಕ ಭಯ ಉಂಟಾಗಿದೆ. ಕೋಮುದ್ವೇಷವನ್ನು ರಾಜಾರೋಷವಾಗಿ ಮಾತನಾಡುತ್ತಾ ಆಟಾಟೋಪ ಮರೆಯುತ್ತಾ ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ ಸರ್ಕಾರ ಮೌನ ವಹಿಸಿರುವುದು ಇನ್ನೂ ಹೆಚ್ಚಿನ ಆತಂಕ ಭಯ ಉಂಟು ಮಾಡುತ್ತಿದೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸೆತ್ತು ‘ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಅವರು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದು, ರಾಜೀನಾಮೆ ಒಪ್ಪಿಕೊಂಡು ಈ ಕೂಡಲೇ ಕಾರ್ಯ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕೆಂದು ವಿನಂತಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌ | Naanu Gauri

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

0
ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ...