Homeಮುಖಪುಟಮಹಾರಾಷ್ಟ್ರದಲ್ಲಿ ನಿರ್ಣಾಯಕ ಹಂತ ತಲುಪಿದ ಸರ್ಕಾರ ರಚನೆ ಗುದ್ದಾಟ: ಸೇನಾಗೆ ಕಾಂಗ್ರೆಸ್‌ ಬೆಂಬಲ..!

ಮಹಾರಾಷ್ಟ್ರದಲ್ಲಿ ನಿರ್ಣಾಯಕ ಹಂತ ತಲುಪಿದ ಸರ್ಕಾರ ರಚನೆ ಗುದ್ದಾಟ: ಸೇನಾಗೆ ಕಾಂಗ್ರೆಸ್‌ ಬೆಂಬಲ..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಹಗ್ಗ-ಜಗ್ಗಾಟ ಕೊನೆಯ ಹಂತಕ್ಕೆ ಬಂದು ತಲುಪಿದೆ. ಶಿವಸೇನೆ ಜತೆ ಕಾಂಗ್ರೆಸ್‌ ಮತ್ತು ಎನ್‌ಸಿಪಿ, ಮೈತ್ರಿ ನಿರ್ಣಾಯಕ ಹಂತ ತಲುಪಿದೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್‌, ಸೇನಾ ನಾಯಕತ್ವದ ಸರ್ಕಾರ ರಚನೆಗೆ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ನವದೆಹಲಿಯಲ್ಲಿ ಸಿಡಬ್ಲ್ಯುಸಿ ಸಭೆ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕರು ಮತ್ತು ಪ್ರಮುಖರು ನಿರ್ಣಾಯಕ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೆ.ಸಿ.ವೇಣುಗೋಪಾಲ್, ಅಧೀರ್ ರಂಜನ್ ಚೌಧರಿ, ಅಂಬಿಕಾ ಸೋನಿ, ಅಹ್ಮದ್ ಪಟೇಲ್, ಎ.ಕೆ.ಆಂಟನಿ ಮತ್ತು ಇತರೆ ಕಾಂಗ್ರೆಸ್ ಮುಖಂಡರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ 10 ಜನಪಾತ್ ನಿವಾಸದಲ್ಲಿ ಸಭೆ ಸೇರಿದ್ದಾರೆ.

ದೇಶಾದ್ಯಂತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಚುನಾವಣಾ ಬಾಂಡ್‌ ವಿಷಯದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಇನ್ನು ಶಿವಸೇನೆ ನೇತೃತ್ವದ ಸರ್ಕಾರ ರಚನೆಗೆ ಕಾಂಗ್ರೆಸ್‌ ಮತ್ತು  ಎನ್‌ಸಿಪಿಯ ಶರದ್‌ ಪವಾರ್‌ ಒಪ್ಪಿಕೊಂಡ ನಂತರ ಸಿಡಬ್ಲ್ಯುಸಿ ಸಭೆ ಕರೆಯಲಾಗಿದೆ.

ಇದನ್ನೂ ಓದಿ: ಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

ಕಾಂಗ್ರೆಸ್ ಹಿರಿಯ ಮುಖಂಡ ಪೃಥ್ವಿರಾಜ್ ಚವಾಣ್ ಮಾತನಾಡಿ, ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಸ್ಥಿರ ಮತ್ತು ಜನಪರ ಸರ್ಕಾರ ಬರಲಿದೆ ಎಂದು ನಮಗೆ ಖಾತ್ರಿಯಿದೆ ಎಂದು ಹೇಳಿದರು. ನವದೆಹಲಿಯಲ್ಲಿ ಕಾಂಗ್ರೆಸ್‌ ಮತ್ತು ಎನ್‌ಸಿಪಿ ನಾಯಕರು ಐದು ಗಂಟೆಗಳ ಕಾಲ ಸಭೆ ನಡೆಸಿದ ನಂತರ ಪೃಥ್ವಿರಾಜ್‌ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ನಾಳೆ ( ಗುರುವಾರ) ಮತ್ತೆ ಉಭಯ ಪಕ್ಷಗಳು ಜಂಟಿ ಸಭೆ ನಡೆಸಲಿವೆ. ಇದಾದ ನಂತರ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ನಾಯಕರು ಮುಂಬೈನಲ್ಲಿ ಶುಕ್ರವಾರ ಶಿವಸೇನೆ ನಾಯಕತ್ವದೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸರ್ಕಾರ ರಚನೆಗೆ ಸಂಬಂಧಿಸಿದ ಪ್ರಕಟಣೆಗಳನ್ನು ನೀಡುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳ ಸರ್ಕಾರ ರಚನೆಯಾಗಲಿದೆ ಎಂದು ಕಾಂಗ್ರೆಸ್ ಸ್ಪಷ್ಟವಾಗಿ ಸೂಚಿಸಿದೆ. ಇದೇ ಮೊದಲ ಬಾರಿಗೆ ಸ್ಪಷ್ಟ ಮಾಹಿತಿ ನೀಡಿದೆ.

ನವೆಂಬರ್‌ ಅಂತ್ಯದ ವೇಳೆಗೆ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚಿಸಲಾಗುವುದು. ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ನಡೆದ ಸಭೆಯ ಬಳಿಕ ಸೋನಿಯಾ ಗಾಂಧಿ ಅವರು ಸೇನಾ ನೇತೃತ್ವದ ಸರ್ಕಾರ ರಚಿಸಲು ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್‌ಸಿಪಿ ಮುಖಂಡರ ಜತೆ ನಡೆದ ಸಭೆಗೂ ಮೊದಲು ಕಾಂಗ್ರೆಸ್ ಮುಖಂಡರು ಮತ್ತು ರಾಜ್ಯದ ಮುಖಂಡರು ಅರ್ಧಗಂಟೆಗಳ ಕಾಲ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸರ್ಕಾರ ರಚಿಸುವ ಔಪಚಾರಿಕ ಅನುಮೋದನೆ, ಅಧಿಕಾರ ಹಂಚಿಕೆ ಯೋಜನೆ ಮತ್ತು ಮೂರು ಪಕ್ಷಗಳ ಮಧ್ಯೆ ಸಿದ್ಧಗೊಂಡಿರುವ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ಕರಡಿಗೂ ಸೋನಿಯಾ ಗಾಂಧಿ ಅವರು ಅನುಮೋದನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...