Homeಮುಖಪುಟ'ಸರ್ಕಾರ ಕೋರ್ಟ್ ಆದೇಶ ಪಾಲಿಸುತ್ತದೆ': ಕರ್ನಲ್ ಖುರೇಷಿ ವಿರುದ್ಧದ ಸಚಿವರ ಹೇಳಿಕೆ ಬಗ್ಗೆ ಮಧ್ಯಪ್ರದೇಶ ಸಿಎಂ...

‘ಸರ್ಕಾರ ಕೋರ್ಟ್ ಆದೇಶ ಪಾಲಿಸುತ್ತದೆ’: ಕರ್ನಲ್ ಖುರೇಷಿ ವಿರುದ್ಧದ ಸಚಿವರ ಹೇಳಿಕೆ ಬಗ್ಗೆ ಮಧ್ಯಪ್ರದೇಶ ಸಿಎಂ ಪ್ರತಿಕ್ರಿಯೆ

- Advertisement -
- Advertisement -

ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕ ಸಹೋದರಿ ಎಂದು ಹೇಳಿದ್ದ ತನ್ನ ಸಚಿವರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ತಮ್ಮ ಸರ್ಕಾರವು ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಿದ್ದು, ಅದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ‘ಸರ್ಕಾರ ಕೋರ್ಟ್

ಗುರುವಾರ ರೋಶನ್‌ಪುರ ಚೌಕದಲ್ಲಿ ಬಿಜೆಪಿಯ ತಿರಂಗ ಯಾತ್ರೆಯ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಕರ್ನಲ್ ಖುರೇಷಿ ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಶಾ ಅವರ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದ್ದು, ಕಾಂಗ್ರೆಸ್ ಈ ಬಗ್ಗೆ ತೀವ್ರವಾಗಿ ಒತ್ತಾಯಿಸುತ್ತಿದೆ.

ಈ ಬಗ್ಗೆ ಮಾತನಾಡಿದ ಅವರು, ಅಂತಹ ವಿನಂತಿಗಳನ್ನು ಮಾಡಲು ಕಾಂಗ್ರೆಸ್‌ಗೆ ನೈತಿಕ ಅಧಿಕಾರವಿಲ್ಲ ಎಂದು ಪ್ರತಿಪಾದಿಸಿದ್ದಾರೆ. “ನಮ್ಮ ಸರ್ಕಾರ ಎಲ್ಲಾ ನ್ಯಾಯಾಂಗ ಆದೇಶಗಳನ್ನು ಪಾಲಿಸಿದೆ ಮತ್ತು ನ್ಯಾಯಾಲಯದ ನಿರ್ಧಾರಗಳನ್ನು ಗೌರವಿಸುವುದನ್ನು ಮುಂದುವರಿಸುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಚಿವ ಶಾ ರಾಜೀನಾಮೆ ನೀಡಬೇಕೆಂಬ ವಿರೋಧ ಪಕ್ಷದ ಬೇಡಿಕೆಯ ಬಗ್ಗೆ ಹೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಅಂತಹ ಬೇಡಿಕೆಗಳನ್ನು ಮಾಡುತ್ತಲೇ ಇದೆ. ಅವರು ಮೊದಲು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡುವಂತೆ ಕೇಳಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ದ್ವಿಮುಖ ನೀತಿಯನ್ನು ಹೊಂದಿದ್ದು, (ದೆಹಲಿ ಮಾಜಿ ಸಿಎಂ) ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದಾಗಲೂ ಕಾಂಗ್ರೆಸ್ ಅವರ ಬೆಂಬಲಕ್ಕೆ ನಿಂತಿತ್ತು. ಆಗ ಅವರ ಆಕ್ರೋಶ ಎಲ್ಲಿತ್ತು? ನೈತಿಕತೆಯ ಬಗ್ಗೆ ಮಾತನಾಡುವ ಹಕ್ಕು ಅವರಿಗೆ ಇಲ್ಲ. ಕಾಂಗ್ರೆಸ್‌ನಷ್ಟು ನಾಚಿಕೆಯಿಲ್ಲದ ನಡವಳಿಕೆಯನ್ನು ಯಾವುದೇ ಪಕ್ಷ ಪ್ರದರ್ಶಿಸಿಲ್ಲ” ಎಂದು ಹೇಳಿದ್ದಾರೆ.

ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಸುಪ್ರೀಂ ಕೋರ್ಟ್ ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ಅವರ ಹೇಳಿಕೆ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿದ ಮಧ್ಯಪ್ರದೇಶ ಹೈಕೋರ್ಟ್‌ನ ಮೇ 14 ರ ಆದೇಶವನ್ನು ಪ್ರಶ್ನಿಸಿ ಸಚಿವ ಶಾ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅವರ ಅರ್ಜಿಯ ವಿಚಾರಣೆ ನಡೆಯಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಶಾ ಅವರ ಹೇಳಿಕೆಗಳನ್ನು “ಸ್ವೀಕಾರಾರ್ಹವಲ್ಲ ಮತ್ತು ಸಂವೇದನಾಶೀಲವಲ್ಲ” ಎಂದು ಕರೆದಿದ್ದಾರೆ. ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳು ತಮ್ಮ ಸಾರ್ವಜನಿಕ ಹೇಳಿಕೆಗಳಲ್ಲಿ ಎಚ್ಚರಿಕೆ ಮತ್ತು ಸಂಯಮವನ್ನು ವಹಿಸಬೇಕು ಎಂದು ಅವರು ಹೇಳಿದ್ದಾರೆ.

“ನೀವು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಿ? ನೀವು ಸ್ವಲ್ಪ ಸಂವೇದನಾಶೀಲತೆಯನ್ನು ತೋರಿಸಬೇಕು. ಹೋಗಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿ” ಎಂದು ಸಿಜೆಐ ಟೀಕಿಸಿದ್ದಾರೆ. ಅವರ ಹೇಳಿಕೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪರಿಗಣಿಸಿ, ಬುಧವಾರ ಪೊಲೀಸರಿಗೆ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿತ್ತು.

ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಆದೇಶವನ್ನು ವಿಳಂಬವಿಲ್ಲದೆ ಪಾಲಿಸುವಂತೆ ಹೈಕೋರ್ಟ್ ಸೂಚಿಸಿದ್ದು, ಹಾಗೆ ಮಾಡದಿದ್ದರೆ ನ್ಯಾಯಾಂಗ ನಿಂದನೆ ಪ್ರಕರಣಗಳು ದಾಖಲಾಗಲಿದೆ ಎಂದು ಎಚ್ಚರಿಸಿತ್ತು. ಇದರ ಬೆನ್ನಲ್ಲೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152, 196(1)(ಬಿ), ಮತ್ತು 197(1)(ಸಿ) ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಹೈಕೋರ್ಟ್ ನಿರ್ದೇಶನದ ನಂತರ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕಚೇರಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶದ ನಂತರ, ಮುಖ್ಯಮಂತ್ರಿಗಳು ಕ್ಯಾಬಿನೆಟ್ ಸಚಿವ ವಿಜಯ್ ಶಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಿದ್ದಾರೆ.” ಎಂದು ಹೇಳಿತ್ತು. ‘ಸರ್ಕಾರ ಕೋರ್ಟ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....