Homeಮುಖಪುಟವಿರೋಧಕ್ಕೆ ಮಣಿದ ಸರ್ಕಾರ: ಶಾಲಾ ಪೋಷಕರಿಂದ 100 ರೂ ದೇಣಿಗೆ ಆದೇಶ ವಾಪಸ್

ವಿರೋಧಕ್ಕೆ ಮಣಿದ ಸರ್ಕಾರ: ಶಾಲಾ ಪೋಷಕರಿಂದ 100 ರೂ ದೇಣಿಗೆ ಆದೇಶ ವಾಪಸ್

- Advertisement -
- Advertisement -

ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ನಿರ್ವಹಿಸುವುದಕ್ಕಾಗಿ ಮಕ್ಕಳ ಪೋಷಕರಿಂದ ಮಾಸಿಕ 100 ರೂ ದೇಣಿಗೆ ಸಂಗ್ರಹಿಸುವುದಕ್ಕೆ ತೀವ್ರ ವಿರೋಧ ಬಂದ ಬೆನ್ನಲ್ಲೆ ಆ ಸುತ್ತೋಲೆಯನ್ನು ಕರ್ನಾಟಕ ಸರ್ಕಾರ ವಾಪಸ್ ಪಡೆದಿದೆ.

ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ರವರು ಸುತ್ತೋಲೆ ವಾಪಸ್ ಪಡೆಯುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದು, ಈ ಬಗ್ಗೆ ಮತ್ತೊಂದು ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಅಕ್ಟೋಬರ್ 19 ರಂದು ಸುತ್ತೋಲೆಯೊಂದನ್ನು ಹೊರಡಿಸಿ,  ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆ ಘೋಷಿಸಿದ್ದರು. ಆ ಮೂಲಕ ಪೋಷಕರು ನೀಡುವ ದೇಣಿಗೆಯನ್ನು ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಎಸ್‌ಡಿಎಂಸಿಗಳು ದೇಣಿಗೆ ಸಂಗ್ರಹಿಸಬೇಕೆಂದು ಈ ಮೊದಲು ಸರ್ಕಾರ ಸೂಚಿಸಿತ್ತು.

ಈ ಯೋಜನೆಗೆ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆ ಮುಖಂಡರು, ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಮಠಗಳಿಗೆ, ವಿವಾದಾತ್ಮಕ ಸ್ವಾಮೀಜಿಗಳಿಗೆ ನೂರಾರು ಕೋಟಿ ಹಣ ನೀಡುವ ಸರ್ಕಾರ ಬಡಮಕ್ಕಳ ಶಿಕ್ಷಣಕ್ಕೆ ಕೊಡಲು ಹಣವಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಶಾಲೆಗಳಲ್ಲಿ ಅಗತ್ಯವಿರುವ ಖರ್ಚು ವೆಚ್ಚಗಳಿಗಾಗಿ ಪೋಷಕರಿಂದ 100 ರೂ ದೇಣಿಗೆ ಸಂಗ್ರಹಿಸಲು ಎಸ್‌ಡಿಎಂಸಿಗಳಿಗೆ ಅನುಮತಿ ನೀಡಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದರಲ್ಲಿ ಮುಖ್ಯಮಂತ್ರಿಗಳ ಅಥವಾ ನನ್ನ ಪಾತ್ರವಿಲ್ಲ ಎಂದು ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಹೇಳಿದ್ದರು.

ಮುಂದುವರಿದು ಈ ರೀತಿ ದೇಣಿಗೆ ಸಂಗ್ರಹಿಸಿಲು ಆರ್‌ಟಿಇ ಕಾಯ್ದೆಯಲ್ಲಿ ಅವಕಾಶವಿದೆ. ಎಸ್‌ಡಿಎಂಸಿಯವರು ಮನವಿ ಮಾಡಿದ್ದರು. ಈ ರೀತಿ ಸುತ್ತೋಲೆ ಹೊರಡಿಸುವುದಕ್ಕೆ ಅಧಿಕಾರಿಗಳಿಗೆ ಕಾನೂನಿನಲ್ಲಿ ಅವಕಾಶವಿದೆ. ಎಲ್ಲವನ್ನು ಸರ್ಕಾರದ ಗಮನಕ್ಕೆ ತರಬೇಕಾಗಿಲ್ಲ ಎಂದು ಸಹ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಸಚಿವರ ಈ ದ್ವಂದ್ವ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. “ಸಚಿವರಾಗಿ ಆಡಳಿತದ ಮೇಲೆ ಹಿಡಿತವಿಲ್ಲವೆಂದರೆ ಹೇಗೆ? ನಿಮಗಿಲ್ಲದಿದ್ದರೆ ಮುಖ್ಯಮಂತ್ರಿಗಳಿಗೂ ಇಲ್ಲವೇ? ಸರ್ಕಾರಿ ಶಾಲೆಗಳನ್ನು ನಡೆಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೋಗಿ” ಎಂಬು ಅಭಿಪ್ರಾಯಗಳು ಕೇಳಿಬಂದಿವೆ.

ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿರುವವರು ಬಡವರು, ದಲಿತರು ಮತ್ತು ಹಿಂದುಳಿದ ಸಮುದಾಯಗಳೆ ಹೆಚ್ಚಿದ್ದಾರೆ. ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗದಿಂದ ಬಸವಳಿದಿರುವ ಅಂತವರ ಹೊಟ್ಟೆ ಮೇಲೆ ಹೊಡೆಯಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ: ನಮ್ಮ ಪಾತ್ರವಿಲ್ಲವೆಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಇಂತಾ ಅಯ್ಯೊಗ್ಯ ,ನಾಲಾಯಕ್ ಶಿಕ್ಷಣ ಸಚಿವನಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಮತ್ತಿನ್ನೇನು ನಿರೀಕ್ಷೆ ಮಾಡೋಕೆ ಸಾಧ್ಯ?

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

0
2024ರ ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳ ಮತದಾನದ ಪ್ರತಿ ರಾತ್ರಿ ಚುನಾವಣಾ ಆಯೋಗ ನೀಡಿದ ಮತದಾನದ ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿದಾಗ ಮೊದಲ ನಾಲ್ಕು ಹಂತಗಳಲ್ಲಿ ಸುಮಾರು 1.07 ಕೋಟಿ ಮತಗಳ ವ್ಯತ್ಯಾಸವನ್ನು...