Homeಮುಖಪುಟಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

ಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

- Advertisement -
- Advertisement -

ದೇಶದಲ್ಲಿ ಕೊರೋನಾ ಸೃಷ್ಟಿಸಿರುವ ಆತಂಕವನ್ನು ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಲಾಕ್‍ಡೌನ್‍ನಿಂದ ಹಿರಿಯ ನಾಗರೀಕರು, ಕೂಲಿ ಕಾರ್ಮಿಕರು ಹಾಗೂ ಹಮಾಲಿಗಳು ಸಂಕಷ್ಟದಲ್ಲಿ ಸಿಲುಕಿದ್ದು ಸೂಕ್ತ ನೆರವು ಕಲ್ಪಿಸಬೇಕೆಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಒತ್ತಾಯಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಹಮಾಲಿಗಳು ಸಂಕಷ್ಟದಲ್ಲಿದ್ದಾರೆ. ಅವರ ಸಂಕಟವನ್ನು ನಿವಾರಿಸುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಆಸ್ಪತ್ರೆ ಸಿಬ್ಬಂದಿಗೆ ವಿಮೆ ಹಾಗೂ ಸುರಕ್ಷ ಸಾಧನ ನೀಡಬೇಕು ಎಂದು ಆಗ್ರಹಿಸಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಮಹೇಶ್ ಮಾತನಾಡಿ ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಅವಶ್ಯಕತೆ ಇದೆ, ಆದರೆ ಮಾಸ್ಕ್ ಸಿಗದಿದ್ದರೆ ಬಟ್ಟೆ ಬಳಸಬೇಕು, ರೋಗ ಹರಡದಂತೆ ಸಹಕರಿಸಬೇಕು ಎಂದು ತಿಳಿಸಿದರು.

ಖಾಸಗಿ ಕ್ಲಿನಿಕ್‍ಗಳ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದ ಸೇವೆ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ, ಖಾಸಗಿ ಕ್ಲಿನಿಕ್ ಪ್ರಪಂಚದಲ್ಲೆಡೆ ಸ್ಥಗಿತಗೊಳಿಸಲಾಗಿದೆ. ವೈದ್ಯರಿಗೆ ಸೋಂಕು ತಗುಲಿದರೆ ಕಷ್ಟವಾಗಲಿದೆ, ಇಪ್ಪತ್ತು ಲಕ್ಷ ಜನರಿಗೆ ಒಂದು ಸಾವಿರ ವೈದ್ಯರಿದ್ದು, ಟೆಲಿ ಮೆಡಿಸನ್ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದ ಅವರು, ಜನರಿಗೆ ತೊಂದರೆಯಾಗಬಾರದು ಎಂದು ಕ್ಲಿನಿಕ್ ಮುಚ್ಚುವ ನಿರ್ಧಾರ ಮಾಡಲಾಗಿದೆ ಎಂದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ ಜನರು ಭೀತಿಯಿಂದ ಹೊರಬರುವಂತೆ ನೋಡಿಕೊಳ್ಳಬೇಕು. ಕಾಯಿಲೆಯು ವೈಜ್ಞಾನಿಕವಾಗಿ ಗುಣವಾಗುತ್ತದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಆದರೆ ಜನರಲ್ಲಿ ವಿಶ್ವಾಸ ತುಂಬಬೇಕಾಗಿರುವ ಜನಪ್ರತಿನಿಧಿಗಳು ಮತ್ತು ವೈದ್ಯರು ಅಡಗುತಾಣಗಳಲ್ಲಿ ಹುದುಗಿಕೊಂಡಿದ್ದಾರೆ. ಅವರು ಹೊರಬಂದು ಜನರಲ್ಲಿ ಆತ್ಮವಿಶ್ವಾಸ ತುಂಬಿದರೆ ಜನರು ಭಯದಿಂದ ಹೊರಬರಲು ಸಾಧ್ಯ ಎಂದು ಸಲಹೆ ಮಾಡಿದರು.

ಜಿಲ್ಲಾಡಳಿತ ಜನರ ಅಗತ್ಯಗಳೇನೆಂಬುದನ್ನು ಕಂಡುಕೊಳ್ಳಬೇಕು. ಈ ಮೂಲಕ ವಿಕೇಂದ್ರೀಕರಣದ ನೀರು, ಆಹಾರ  ಮತ್ತು ಔಷಧಿಯಂತಹ ಅಗತ್ಯವಸ್ತುಗಳನ್ನು ವಿತರಣೆ ಮಾಡಿದರೆ ಜನರು ಗುಂಪುಗೂಡುವುದು ತಪ್ಪಿಸಬಹುದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬಹುದು. ಕೊರೊನ ಸೋಂಕನ್ನು ನಿಯಂತ್ರಿಸಬಹುದು. ಎಂದು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಕೊರೋನಾದಿಂದ ಬೀಡಿ ಕಾರ್ಮಿಕ ಉದ್ಯಮ ಸಂಕಷ್ಟದಲ್ಲಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಅವರೇ ಸುರಕ್ಷಿತವಲ್ಲ. ಹಾಗಾಗಿ ಇಲಾಖೆ ಮೂಲಕ ಗ್ರಾಮಮಟ್ಟದಲ್ಲಿ ಹೊರಗಿನಿಂದ ಬಂದವರು ಯಾರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ, ದುಡಿಯುವ ವರ್ಗ ಸಂಕಷ್ಟದಲ್ಲಿ ಸಿಲುಕಿದೆ. ಜನರು ಮನೆಯಿಂದ ಹೊರ ಬಾರದಂತೆ ಅಗತ್ಯವಾದ ಆಹಾರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ರೆಡ್‍ಕ್ರಾಸ್ ಸೊಸೈಟಿಯ ಚಂದ್ರ, ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ,   ಟೂಡಾ ಮಾಜಿ ಅಧ್ಯಕ್ಷ ರೆಡ್ಡಿಚಿನ್ನಯಲ್ಲಪ್ಪ, ಗಾಂಧಿವಾದಿ ಎನ್.ಬಸವಯ್ಯ,    ರೈತ ಸಂಘದ ಜಿಲ್ಲಾಧ್ಯಕ್ಷ  ಗೋವಿಂದರಾಜು, ಮುಖಂಡ ಬೆಳ್ಳಿಲೊಕೇಶ್, ಸಿದ್ಧಗಂಗಾ ಆಸ್ಪತ್ರೆ ವ್ಯವಸ್ಥಾಪಕ ಡಾ.ಪರಮೇಶ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...