Homeರಾಜಕೀಯರಾಹುಲ್ ಗಾಂಧಿಗೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿ: ಮಧ್ಯಪ್ರದೇಶ ಗೃಹ ಸಚಿವ

ರಾಹುಲ್ ಗಾಂಧಿಗೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿ: ಮಧ್ಯಪ್ರದೇಶ ಗೃಹ ಸಚಿವ

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಶನಿವಾರ ಹೇಳಿದ್ದಾರೆ. ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರಿಗೆ ಇಂದೋರ್‌ನಲ್ಲಿ ಬಾಂಬ್ ಸ್ಫೋಟದ ಬೆದರಿಕೆಯ ಅನಾಮಧೇಯ ಪತ್ರ ಬಂದ ದಿನದ ಗೃಹ ಸಚಿವ ಈ ಹೇಳಿಕೆ ನೀಡಿದ್ದಾರೆ.

ನವೆಂಬರ್ 28 ರಂದು ಖಾಲ್ಸಾ ಸ್ಟೇಡಿಯಂನಲ್ಲಿ ನಡೆಯುವ ಭಾರತ್ ಜೋಡೋ ಯಾತ್ರೆಯನ್ನು ನಿಗದಿತ ರಾತ್ರಿ ಸ್ಥಗಿತಗೊಳಿಸದಿದ್ದರೆ ಇಂದೋರ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲಾಗುವುದು ಎಂದು ಅನಾಮಧೇಯ ಪತ್ರವು ಬೆದರಿಕೆ ಹಾಕಿದೆ. 1984 ರ ಸಿಖ್ ವಿರೋಧಿ ದಂಗೆಯನ್ನು ಉಲ್ಲೇಖಿಸಿರುವ ಪತ್ರವು ರಾಹುಲ್ ಗಾಂಧಿ ಮತ್ತು ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರ ಹತ್ಯೆಯ ಬೆದರಿಕೆಯನ್ನೂ ಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಧ್ಯಪ್ರದೇಶದ ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರಿಗೆ ದೋಷಾತೀತ ಭದ್ರತೆ ನೀಡುವುದು ಸರ್ಕಾರವು ಜವಾಬ್ದಾರವಾಗಿದೆ. ಅವರಿಗೆ ಭದ್ರತೆಯನ್ನು ಒದಗಿಸುವುದು ನಮ್ಮ ಬದ್ಧತೆಯಾಗಿದೆ ಎಂದು ನಾನು ಅವರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಬೆದರಿಕೆ ಪತ್ರದ ಬಗ್ಗೆ ಕೇಳಿದ್ದ ಪ್ರಶ್ನೆಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ: ದಲಿತರನ್ನು ಪ್ರಭಾವಿಸಲು ಭಾರತ್‌ ಜೋಡೋ ಯಾತ್ರೆ ಯತ್ನಿಸಿದ್ದು ಹೀಗೆ…

ಈ ತಿಂಗಳ ಆರಂಭದಲ್ಲಿ ಖಾಲ್ಸಾ ಕ್ರೀಡಾಂಗಣಕ್ಕೆ ಹೋಗುವ ಮೂಲಕ 1984 ರ ಸಿಖ್ ವಿರೋಧಿ ದಂಗೆ ಸಂತ್ರಸ್ತರ ಗಾಯಗಳಿಗೆ ಕಮಲ್ ನಾಥ್ ಅವರು ಗಾಯಗಳಿಗೆ ಉಪ್ಪು ಸವರಿದ್ದಾರೆ ಎಂದು ಸಚಿವರು ಆರೋಪಿಸಿದ್ದರು. ಬಹುಶಃ ರಾಹುಲ್ ಗಾಂಧಿ ಅವರ ಯಾತ್ರೆ ರಾಜ್ಯಕ್ಕೆ ಬರುವುದು ಕಮಲ್ ನಾಥ್ ಅವರಿಗೆ ಇಷ್ಟವಿಲ್ಲ ಎಂದು ನರೋತ್ತಮ್‌ ಮಿಶ್ರಾ ಹೇಳಿದ್ದಾರೆ.

ಗುರುವಾರ ಸಂಜೆ ನಗರದ ಜುನಿ ಪ್ರದೇಶದಲ್ಲಿನ ಸಿಹಿತಿಂಡಿ ಅಂಗಡಿಯೊಂದಕ್ಕೆ ಅನಾಮಧೇಯ ಬೆದರಿಕೆ ಪತ್ರ ಬಂದಿದೆ ಎಂದು ಇಂದೋರ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಬಗ್ಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 (ಅಪರಿಚಿತ ವ್ಯಕ್ತಿಯಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.

ನವೆಂಬರ್ 8 ರಂದು ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಕಮಲ್‌ ನಾಥ್ ಅವರನ್ನು ಸನ್ಮಾನಿಸುವುದರ ಕುರಿತು ವಿವಾದ ಉಂಟಾದ ನಂತರ ಇಂದೋರ್‌ನ ಖಾಲ್ಸಾ ಕ್ರೀಡಾಂಗಣವು ಈ ತಿಂಗಳ ಆರಂಭದಲ್ಲಿ ಸುದ್ದಿಯಲ್ಲಿದೆ.

ಇದನ್ನೂ ಓದಿ: ವಿಶ್ಲೇಷಣೆ: ಭಾರತ್‌ ಜೋಡೋ ನಂತರ ಕರ್ನಾಟಕ ಬಿಜೆಪಿಯ ಪ್ರತಿಕ್ರಿಯೆಗಳು

ಕೀರ್ತನ್ ಗಾಯಕ ಮನ್‌ಪ್ರೀತ್ ಸಿಂಗ್ ಕಾನ್ಪುರಿ ಅವರು 1984 ರ ಸಿಖ್ ವಿರೋಧಿ ಗಲಭೆಗಳನ್ನು ಉಲ್ಲೇಖಿಸಿ, ಗಲಭೆಯ ಆರೋಪ ಎದುರಿಸಿದ್ದ ಕಮಲ್‌ ನಾಥ್ ಅವರನ್ನು ಅಭಿನಂದಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಭಾರತ್ ಜೋಡೋ ಯಾತ್ರೆಯ ವೇಳೆ ಕಮಲ್‌ ನಾಥ್ ಕ್ರೀಡಾಂಗಣಕ್ಕೆ ಪ್ರವೇಶಿಸಿದರೆ ಕಪ್ಪು ಬಾವುಟ ತೋರಿಸಲಾಗುವುದು ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...