Homeರಾಜಕೀಯಸಚಿವ ಬಾಲಗೋಪಾಲ್ ಅವರನ್ನು ವಜಾಗೊಳಿಸುವಂತೆ ಕೇಳಿದ ರಾಜ್ಯಪಾಲ; ನಿರಾಕರಿಸಿದ ಸಿಎಂ ಪಿಣರಾಯಿ!

ಸಚಿವ ಬಾಲಗೋಪಾಲ್ ಅವರನ್ನು ವಜಾಗೊಳಿಸುವಂತೆ ಕೇಳಿದ ರಾಜ್ಯಪಾಲ; ನಿರಾಕರಿಸಿದ ಸಿಎಂ ಪಿಣರಾಯಿ!

- Advertisement -
- Advertisement -

ಕೇರಳ ಸರ್ಕಾರದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರನ್ನು ಸಂಪುಟದಿಂದ ಕೈಬಿಡುವಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ. “ಸಚಿವರು ತಮ್ಮ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದು, ಭಾರತದ ಏಕತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸಿದ್ದಾರೆ” ಎಂದು ರಾಜ್ಯಪಾಲರು ಹೇಳಿದ್ದಾರೆ.

ರಾಜ್ಯಪಾಲರ ವಿರುದ್ಧ ಸಚಿವರು ಇತ್ತೀಚೆಗೆ ಮಾಡಿದ ಟೀಕೆಗಳನ್ನು ಉಲ್ಲೇಖಿಸಿರುವ ಅವರು ಬಾಲಗೋಪಾಲ್ ಅವರು ಸಚಿವರಾಗಿ ಮುಂದುವರೆಯುವುದರ ಬಗ್ಗೆ ಭರವಸೆ ಕಳೆದುಕೊಂಡಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತೀಯ ಸಂವಿಧಾನದ 164 ನೇ ವಿಧಿಯ ಪ್ರಕಾರ, ಮುಖ್ಯಮಂತ್ರಿಯನ್ನು ರಾಜ್ಯಪಾಲರು ನೇಮಕ ಮಾಡುತ್ತಾರೆ. ಇತರ ಮಂತ್ರಿಗಳನ್ನು ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ನೇಮಕ ಮಾಡುತ್ತಾರೆ. ರಾಜ್ಯಪಾಲರಿಗೆ ಭರವಸೆ ಹೊಂದಿರುವವರೆಗೆ ಮಂತ್ರಿಗಳು ಅಧಿಕಾರವನ್ನು ಹೊಂದಿರುತ್ತಾರೆ.

ಇದನ್ನೂ ಓದಿ: ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ರಾಜ್ಯಪಾಲರ ಬೇಡಿಕೆಯನ್ನು ಕೇಳರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಾರಾಸಗಟಾಗಿ ನಿರಾಕರಿಸಿದ್ದಾರೆ ಎಂದು ಕೇರಳದ ಮಾಧ್ಯಮಗಳು ವರದಿ ಮಾಡಿವೆ.

ಸಚಿವ ಕೆ.ಎನ್. ಬಾಲಗೋಪಾಲ್ ಅವರು ವಿಶ್ವವಿದ್ಯಾಲಯದಲ್ಲಿ ಮಾತನಾಡುತ್ತಾ, ರಾಜ್ಯಪಾಲರನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಅವರು ತಮ್ಮ ಭಾಷಣದಲ್ಲಿ, “ಉತ್ತರ ಪ್ರದೇಶದಿಂದ ಬಂದವರಿಗೆ ಕೇರಳದ ಶಿಕ್ಷಣ ಸಂಸ್ಥೆಗಳನ್ನು ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ” ಎಂದು ಕಿಡಿ ಕಾರಿದ್ದರು. ಸಚಿವರ ಈ ಹೇಳಿಕೆ ರಾಜ್ಯಪಾಲರನ್ನು ಕೆರಳಿಸಿದೆ ಎನ್ನಲಾಗಿದೆ.

ರಾಜ್ಯಪಾಲ ಆರಿಫ್ ಖಾನ್ ಅವರು ಕಳೆದ ವಾರ ಮುಖ್ಯಮಂತ್ರಿ ಮತ್ತು ಕ್ಯಾಬಿನೆಟ್ ಮಂತ್ರಿಗಳನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕಿದ್ದರು. “ರಾಜ್ಯದ ಕ್ಯಾಬಿನೆಟ್ ಸಚಿವರು ಮತ್ತು ಮುಖ್ಯಮಂತ್ರಿ ರಾಜ್ಯಪಾಲರ ಕಚೇರಿಯ ಘನತೆಗೆ ಕುಂದುಂಟು ಮಾಡುವ ಹೇಳಿಕೆಗಳನ್ನು ನೀಡಿದರೆ ಕಠಿಣ ಕ್ರಮ ಅನುಸರಿಸಲಾಗುವುದು” ಎಂದು ಎಚ್ಚರಿಸಿದ್ದರು.

“ರಾಜ್ಯಪಾಲರಿಗೆ ಸಲಹೆ ನೀಡಲು ಸಿಎಂ ಮತ್ತು ಮಂತ್ರಿ ಮಂಡಳಕ್ಕೆ ಎಲ್ಲ ಹಕ್ಕುಗಳಿವೆ. ಆದರೆ ರಾಜ್ಯಪಾಲರ ಕಚೇರಿಯ ಘನತೆಗೆ ಕುಂದುಂಟು ಮಾಡುವ ಸಚಿವರ ವೈಯಕ್ತಿಕ ಹೇಳಿಕೆಗಳು ಅವರನ್ನು ಅಧಿಕಾರದಿಂದ ವಜಾಗೊಳಿಸುವುದು ಸೇರಿದಂತೆ ಇತರ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ರಾಜ್ಯಪಾಲರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ರಾಜ್ಯಪಾಲರ ಈ ಹೇಳಿಕೆಯ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್ ಅವರು,“ರಾಜ್ಯಪಾಲರನ್ನು ರಾಜಕೀಯಕ್ಕೆ ಬಳಸುವುದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಇತ್ತೀಚೆಗೆ ಕೇರಳ, ತಮಿಳುನಾಡು, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಕೂಡಾ ಹೀಗೆ ಮಾಡಲಾಗಿದೆ. ರಾಜ್ಯಪಾಲರು ಸರ್ವಾಧಿಕಾರಿಗಳಲ್ಲ, ಅವರು ರಾಜ್ಯ ಸರ್ಕಾರಕ್ಕೆ ಸಲಹೆಗಳನ್ನು ಮಾತ್ರ ನೀಡಬಹುದಷ್ಟೆ” ಎಂದು ಹೇಳಿದ್ದಾರೆ.

“ಭರವಸೆ ಕಳೆದುಕೊಂಡಿದ್ದೇನೆ ಎಂದು ರಾಜ್ಯಪಾಲರು ತನಗೆ ಇಷ್ಟ ಬಂದ ಹಾಗೆ ಸಚಿವರನ್ನು ವಜಾಗೊಳಿಸುವ ಹಾಗೆ ಇಲ್ಲ. ಅವರನ್ನು ವಜಾಗೊಳಿಸಬೇಕು ಎಂದರೆ ಅದಕ್ಕೊಂದು ವಿಧಾನವಿದೆ. ರಾಜ್ಯಪಾಲರು ನಿರಂಕುಶವಾಗಿ ವರ್ತಿಸುವ ಹಾಗೆ ಇಲ್ಲ” ಎಂದು ಜಸ್ಟಿಸ್ ನಾಗಮೋಹನ್‌ ದಾಸ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...