Homeಮುಖಪುಟರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಶಿಫಾರಸು: ಮುಂದೇನು..?

ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಶಿಫಾರಸು: ಮುಂದೇನು..?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಸರ್ಕಸ್‌ ಮುಂದುವರೆದಿರುವಾಗಲೇ ರಾಷ್ಟ್ರಪತಿ ಆಡಳಿತ ಜಾರಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಸರ್ಕಾರ ರಚನೆ ಮಾಡುವಲ್ಲಿ ಪಕ್ಷಗಳು ವಿಫಲವಾದ ಹಿನ್ನೆಲೆ ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಬಗ್ಗೆ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿ, ತೀರ್ಮಾನಿಸಿದೆ. ಆದರೆ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿದೆ. ಚುನಾವಣೆಯಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಎನ್‌ಸಿಪಿ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನಿಸಲಾಗಿದೆ. ರಾತ್ರಿ ೮:೩೦ರವರೆಗೆ ಸಮಯಾವಕಾಶವನ್ನೂ ನೀಡಲಾಗಿದೆ. ಹೀಗಿದ್ದಾಗಲೂ ಸಹ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿರುವ ಕ್ರಮಕ್ಕೆ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಸರ್ಕಾರ ರಚನೆಯ ಕಸರತ್ತು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಶಿವಸೇನೆ

ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ೩ ದಿನದ ಗಡುವು ನೀಡಿದ್ದರು. ಆದರೆ ಶಿವಸೇನೆಗೆ ಒಂದು ದಿನ ಮಾತ್ರ ಸಮಯ ನೀಡಿದ್ದರು. ಅವಧಿ ವಿಸ್ತರಿಸುವಂತೆ ಮನವಿ ಮಾಡಿದರೂ, ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ಶಿವಸೇನೆ ಸುಪ್ರೀಂಕೋರ್ಟ್‌‌ಗೆ ಮೊರೆ ಹೋಗಿದೆ.

ಇನ್ನು ಸರ್ಕಾರ ರಚಿಸುವ ಬಗ್ಗೆ ಕಾಂಗ್ರೆಸ್‌ ನಾಯಕರ ಜತೆ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಸಭೆ ನಡೆಸಲಿದ್ದಾರೆ. ಕಾಂಗ್ರೆಸ್‌ನ ಕೆ.ಸಿ.ವೇಣುಗೋಪಾಲ್‌, ಮಲ್ಲಿಕಾರ್ಜುನ ಖರ್ಗೆ, ಅಹಮದ್‌ ಪಟೇಲ್‌ ಸೇರಿದಂತೆ ಹಲವು ನಾಯಕರೊಂದಿಗೆ ಸಂಜೆ ೫ ಗಂಟೆಗೆ ಮಹತ್ವದ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...