Homeಕರ್ನಾಟಕರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, 'ಜೈ ಸಂವಿಧಾನ' ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಮಾತಾಡುವಾಗ ನನ್ನನ್ನು “ಅಸಹಾಯಕ ಮುಖ್ಯಮಂತ್ರಿ” ಎಂದು ಕರೆದಿದ್ದಾರೆ. ಕೆಲವು ಬಾರಿ, “ಅಸತ್ಯದ ಎದುರು ಸತ್ಯ ಅಸಹಾಯಕವಾಗಿಬಿಡುತ್ತದೆ” ಎಂದರು.

ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ. ಮನರೇಗಾ ಬದಲಾಯಿಸಿ “ವಿಬಿ ಜಿ ರಾಮ್ ಜಿ” ಎಂದು ಮಾಡಿದ್ದಾರೆ. ಇದರಲ್ಲಿರುವ ರಾಮ, ಧಶರಥ ರಾಮನೂ ಅಲ್ಲ. ಅಯೋಧ್ಯೆ ರಾಮನೂ ಅಲ್ಲ. ಹೆಸರು ಬದಲಾಯಿಸುವುದಕ್ಕೇ ಕೆಲವರನ್ನು ಅವರು ಇಟ್ಟುಕೊಂಡಿದ್ದಾರೆ ಅನಿಸುತ್ತೆ ಎಂದು ಹೇಳಿದರು.

ಸಂವಿಧಾನದ ವಿಧಿ 176 ಓದಿದ್ದರೆ ಚೆನ್ನಾಗಿರುತ್ತಿತ್ತು. ಸಂವಿಧಾನ ಜಾರಿಯಾದ ದಿನದಿಂದ ಇವತ್ತಿನವರೆಗೆ ಜಂಟಿ ಅಧಿವೇಶನಗಳು ನಡೆದುಕೊಂಡು ಬಂದಿವೆ. ಇದು ಸಂವಿಧಾನದ ಪ್ರಕಾರ ನಡೆದುಕೊಂಡು ಬರುತ್ತಿರುವ ಪದ್ಧತಿ ಎಂದು ತಿಳಿಸಿದರು.

ಹೆಚ್‌ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ “ನರೇಗ ಉದ್ಯೋಗ ಸಂಜೀವಿನಿ” ಎಂದು ಕರೆದಿದ್ದರು. ಈಗ ಬಿಜೆಪಿ ಜೊತೆ ಸೇರಿ ನರೇಗಾ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯಪಾಲರ ಭಾಷಣದ ಮೇಲೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ 15 ಜನ ಸದಸ್ಯರು ಮಾತನಾಡಿದ್ದಾರೆ. ಕಾಂಗ್ರೆಸ್‌ನ ವಂದನಾ ನಿರ್ಣಯ ಮಂಡಿಸಿದ ಪೊನ್ನಣ್ಣ ಮತ್ತು ಪ್ರದೀಪ್ ಈಶ್ವರ್ ಅವರು ಅನುಮೋದನೆ ಮಾಡಿದ್ದಾರೆ. ಸುಮಾರು 9 ಜನ ಮಾತನಾಡಿದ್ದು, ಜೆಡಿಎಸ್‌ನಿಂದ ಸುರೇಶ್ ಬಾಬುರವರು ಮತ್ತು ಪಕ್ಷೇತರರಲ್ಲಿ ಇಬ್ಬರು ಸೇರಿದಂತೆ ಒಟ್ಟು 27 ಜನ ಮಾತನಾಡಿದ್ದಾರೆ. ಕಾಂಗ್ರೆಸ್ 5 ಗಂಟೆ 18 ನಿಮಿಷ, ಬಿಜೆಪಿಯವರು 8 ಗಂಟೆ 53 ನಿಮಿಷ , ಜೆಡಿಎಸ್‌ನವರು 12 ನಿಮಿಷ ಮತ್ತು ಪಕ್ಷೇತರರು 54 ನಿಮಿಷ ಮಾತನಾಡಿದ್ದು, ಹೀಗೆ ಒಟ್ಟು 15 ಗಂಟೆ 17 ನಿಮಿಷ ಚರ್ಚೆ ನಡೆದಿದೆ ಎಂದು ತಿಳಿಸಿದರು.

ರಾಜ್ಯಪಾಲರು ಪೂರ್ಣ ಭಾಷಣವನ್ನು ಓದದೇ, ಮೊದಲನೇ ಹಾಗೂ ಕಡೆಯ ಜೈಹಿಂದ್, ಜೈಕರ್ನಾಟಕ ಎಂದು ಓದಿದರು. ಭಾಷಣದಲ್ಲಿ ಬರೆದುಕೊಡಲಾಗಿದ್ದ ‘ಜೈಸಂವಿಧಾನ’ವನ್ನು ಹೇಳಿಲ್ಲ. ರಾಷ್ಟ್ರಗೀತೆ ಮುಗಿದ ಬಳಿಕ ರಾಜ್ಯಪಾಲರು ತೆರಳಬಹುದಿತ್ತು. ಈ ಬಗ್ಗೆ ಸಂವಿಧಾನದ ಕಲಂ 176 , 163 ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ ಎಂದರು.

ಶಾಸಕ ಸುನಿಲ್ ಕುಮಾರ್ ಅವರು ‘ಸರ್ಕಾರ ಆಡಳಿತ ಹದಗೆಟ್ಟಿದೆ ಮತ್ತು ಸಂವಿಧಾನರಹಿತ ಸರ್ಕಾರ’ , ‘ಅಸಹಾಯಕ ಮುಖ್ಯಮಂತ್ರಿ’ ಎಂದಿದ್ದಾರೆ. ಕೆಲವೊಮ್ಮ ಅಸತ್ಯದ ಎದುರು ಸತ್ಯ ಅಸಹಾಯಕವಾಗುತ್ತದೆ. ಜನರು ನಮ್ಮನ್ನು ಅವರ ಪ್ರತಿನಿಧಿಯಾಗಿ ಆಯ್ಕೆ ಮಾಡುತ್ತಾರೆ. ವಿರೋಧಪಕ್ಷದವರ ಮತ್ತು ಸರ್ಕಾರದವರ ಸಿದ್ಧಾಂತಗಳು ವಿಭಿನ್ನವಾಗಿರುತ್ತವೆ. ನಾವಿಬ್ಬರೂ ಪರಸ್ಪರ ಒಪ್ಪಲೇಬೇಕೆಂಬ ಷರತ್ತಿಲ್ಲ. ಆದರೆ ನಾವೆಲ್ಲರೂ ಸಂವಿಧಾನ ಒಪ್ಪಲೇಬೇಕು. ಸಂವಿಧಾನಬದ್ಧವಾಗಿ ಸರ್ಕಾರ, ಆಡಳಿತ ನಡೆಯಲೇಬೇಕು. ಸಂವಿಧಾನವನ್ನು ಯಾವುದೇ ಕಾರಣಕ್ಕೂ ವಿರೋಧಿಸಬಾರದು. ರಾಜ್ಯಪಾಲರು ಮೂಲತ: ಉತ್ತಮ ವ್ಯಕ್ತಿಯೇ. ನಾವು ರಾಜ್ಯಪಾಲರ ವಿರುದ್ಧವಿಲ್ಲ. ಆದರೆ ಕೇಂದ್ರ ಸರ್ಕಾರಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದರು.

ಭಾಷಣದಲ್ಲಿ ಮನರೇಗಾ ರದ್ದುಪಡಿಸಿ ವಿಬಿ-ಜಿರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ)ವನ್ನು ಕೇಂದ್ರ ಜಾರಿಗೊಳಿಸಿದೆ. ಅದರಲ್ಲಿ ‘ಗ್ರಾಮ’ ಎನ್ನುವ ಪದವೂ ಇಲ್ಲ. ಈ ಕಾಯ್ದೆ ಜಾರಿಗೆ ಮುನ್ನ 176 ಕಲಂ ಅನ್ನು ಕೇಂದ್ರ ವಿಶ್ಲೇಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...