Homeಮುಖಪುಟಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ 'ವೀಟೋ ಅಧಿಕಾರ' ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

- Advertisement -
- Advertisement -

ಚರ್ಚೆಗಳು ನಡೆದ ಬಳಿಕವೂ ಮಸೂದೆಯನ್ನು ತಡೆ ಹಿಡಿಯಲು ರಾಜ್ಯಪಾಲರು ಮುಂದಾದರೆ ಆ ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸಚಿವ ಸಂಪುಟ ಅವರನ್ನು ಒತ್ತಾಯಿಸಬಹುದು ಎಂದು ಕೇರಳ ಸರ್ಕಾರ ಮಂಗಳವಾರ (ಸೆ.9) ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಇದಕ್ಕೆ ಕರ್ನಾಟಕ ದನಿಗೂಡಿಸಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಡಿದ ಶಿಫಾರಸ್ಸನ್ನು ಆಲಿಸುವ ವೇಳೆ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ , ವಿಕ್ರಮ್ ನಾಥ್ , ಪಿ ಎಸ್ ನರಸಿಂಹ ಹಾಗೂ ಅತುಲ್ ಎಸ್ ಚಂದೂರ್ಕರ್ ಅವರಿದ್ದ ಸಾಂವಿಧಾನಿಕ ಪೀಠದೆದುರು ಕೇರಳ ವಾದ ಮಂಡಿಸಿದೆ.

ಕೇರಳ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಕೆ ವೇಣುಗೋಪಾಲ್ ಅವರು, ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಚರ್ಚೆಗಳ ನಂತರವೂ ಯಾವುದೇ ಒಮ್ಮತ ಏರ್ಪಡದಿದ್ದರೆ ಮತ್ತು ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯಲು ಉದ್ದೇಶಿಸಿದರೆ, ಸಚಿವ ಸಂಪುಟ ತಕ್ಷಣವೇ 163ನೇ ವಿಧಿಯಡಿ ಒಪ್ಪಿಗೆ ನೀಡುವಂತೆ ಸಲಹೆ ನೀಡಬಹುದು ಎಂದು ಹೇಳಿದರು.

“ರಾಜ್ಯಪಾಲರಿಗೆ ವಿಧಿ 163ರ ಅಡಿ ಅಂಕಿತವನ್ನು ನೀಡುವುದರ ಹೊರತಾದ ಯಾವುದೇ ಆಯ್ಕೆಗಳಿಲ್ಲ. ನನ್ನ ದೃಷ್ಟಿಕೋನದಲ್ಲಿ ಹೇಳಬೇಕೆಂದರೆ, ಶಾಸನಸಭೆಯಲ್ಲಿ ಮಸೂದೆಯು ಅಂಗೀಕಾರಗೊಂಡ ಬೆನ್ನಿಗೇ, ಚರ್ಚೆಗೆ ಆಸ್ಪದವನ್ನೂ ನೀಡದೆ ಮಂತ್ರಿಪರಿಷತ್ತು163ನೇ ವಿಧಿಯನ್ನು ಬಳಸುವ ಮೂಲಕ ಅಂಕಿತ ಹಾಕುವಂತೆ ರಾಜ್ಯಪಾಲರನ್ನು ಒತ್ತಾಯಿಸುವುದು ಸೂಕ್ತವಲ್ಲವೇನೋ. ರಾಜ್ಯಪಾಲರನ್ನು ಹಾಗೆ ಒತ್ತಾಯಿಸುವುದು… ರಾಜ್ಯದ ಮುಖ್ಯಸ್ಥರಾಗಿ ಅವರು ಹೊಂದಿರುವ ಉನ್ನತ ಸ್ಥಾನಕ್ಕೆ ತಕ್ಕುದಾದುದಲ್ಲ,” ಎಂದು ಅವರು ವಿವರಿಸಿದ್ದಾರೆ. ಆ ಮೂಲಕ 163ರ ಅಡಿ ರಾಜ್ಯಪಾಲರಿಗೆ ಅಂಕಿತ ಹಾಕುವುದರ ಹೊರತಾದ ಆಯ್ಕೆಗಳಿಲ್ಲ ಎನ್ನುವುದನ್ನು ಸ್ಪಷ್ಪಪಡಿಸುವುದರ ಜೊತೆಗೇ, ಸಾಂವಿಧಾನಿಕ ಔಪಚಾರಿಕತೆಯ ಬಗ್ಗೆಯೇ ತಿಳಿಸಿದ್ದಾರೆ.

ಹಣಕಾಸು ಮಸೂದೆಗೆ ಒಪ್ಪಿಗೆ ನೀಡದೆ ಇರುವ ಅಧಿಕಾರ ರಾಜ್ಯಪಾಲರಿಗೆ ಇದೆ ಎಂಬ ಪ್ರಶ್ನೆಯೇ ಇಲ್ಲ ಇದನ್ನು ಸಂವಿಧಾನ ಸ್ಪಷ್ಟಪಡಿಸಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣ್ಯಂ ಅವರು ಕೂಡ ವೇಣುಗೋಪಾಲ್ ಅವರ ವಾದಕ್ಕೆ ದನಿಗೂಡಿಸಿದ್ದಾರೆ. ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆ ಮೇಲೆ ರಾಜ್ಯಪಾಲರಿಗೆ ವೀಟೋ ಅಧಿಕಾರ ಇಲ್ಲ ಎಂದಿದ್ದಾರೆ.

ರಾಜ್ಯಪಾಲರಿಗೆ ತಕ್ಕುದಲ್ಲದ ವಿಟೋ ಅಧಿಕಾರ  ನೀಡುವಂತೆ ಮಾಡುವ ಯಾವುದೇ ವ್ಯಾಖ್ಯಾನ ಚುನಾಯಿತ ರಾಜ್ಯ ಶಾಸಕಾಂಗಗಳ ಅಸ್ತಿತ್ವಕ್ಕೆ ವಿರುದ್ಧ ಎಂದು ಹೇಳಿದ್ದಾರೆ.

ರಾಜ್ಯಪಾಲರು ಮಸೂದೆಯನ್ನು ಸಚಿವ ಸಂಪುಟದ ಸಲಹೆಯ ಮೇರೆಗೆ ಶಾಸನಸಭೆಗೆ ಹಿಂದಿರುಗಿಸಲು ಮಾತ್ರ ಅಧಿಕಾರ ಹೊಂದಿದ್ದು, ಮರುಪಾಸಾದ ನಂತರ ಅನಿವಾರ್ಯವಾಗಿ ಅನುಮೋದಿಸಬೇಕು ಎಂದು ಸುಬ್ರಮಣಿಯಂ ವಾದಿಸಿದ್ದಾರೆ.

ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರವಿಂದ್ ದಾತಾರ್ ಕೂಡ ರಾಜ್ಯಪಾಲರಿಗೆ 200ನೇ ವಿಧಿಯ ಅಡಿಯಲ್ಲಿ ಮಸೂದೆ ತಡೆಯುವ ಯಾವುದೇ ವಿವೇಚನಾಧಿಕಾರ ಇಲ್ಲ ಎಂದಿದ್ದಾರೆ.

ಹೊಸ ಉಪರಾಷ್ಟ್ರಪತಿ ಆಯ್ಕೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮಾತುಗಳನ್ನು ನೆನಪಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...