ಶುಕ್ರವಾರ ಹಿಮಾಚಲ ಪ್ರದೇಶ ಸರ್ಕಾರದ ಬಜೆಟ್ ಅಧಿವೇಶನದ ವಿಧಾನಸಭೆ ಆವರಣದಲ್ಲಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಮೇಲೆ ಕಾಂಗ್ರೆಸ್ ಶಾಸಕರು ಶುಕ್ರವಾರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅಮಾನತು ಮಾಡಲಾಗಿದೆ.
ಅಧಿವೇಶನದ ನಂತರ ರಾಜ್ಯಪಾಲರು ತಮ್ಮ ವಾಹನದ ಬಳಿ ಹೋಗುವಾಗ ಅವರ ಮೇಲೆ ಪ್ರತಿಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಮತ್ತು ಶಾಸಕರಾದ ಹರ್ಷ್ ವರ್ಧನ್ ಚೌಹಾಣ್, ಸುಂದರ್ ಸಿಂಗ್ ಠಾಕೂರ್, ಸತ್ಪಾಲ್ ರಾಯ್ಜಾದ ಮತ್ತು ವಿನಯ್ ಕುಮಾರ್ ಹಲ್ಲೆ ಮಾಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಭರದ್ವಾಜ್ ಹೇಳಿದ್ದಾರೆ.
ನಂತರ ಘಟನೆಗೆ ಸಂಬಂಧಿಸಿದಂತೆ ಐದು ಕಾಂಗ್ರೆಸ್ ಶಾಸಕರನ್ನು ಈ ಬಜೆಟ್ ಅಧಿವೇಶನ ಮುಗಿಯುವವರೆಗೆ ಅಮಾನತುಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸ್ಪೀಕರ್ ವಿಪಿನ್ ಪರ್ಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!
ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಸೇರಿದ ಕೂಡಲೇ ಪ್ರತಿಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ನೇತೃತ್ವದ ಕಾಂಗ್ರೆಸ್ ಸದಸ್ಯರು ತಮ್ಮ ಸ್ಥಾನಗಳಿಂದ ಎದ್ದು ಘೋಷಣೆಗಳನ್ನು ಕೂಗಲು ಶುರು ಮಾಡಿದ್ದರು. ಇದರಿಂದ ರಾಜ್ಯಪಾಲರು ತಮ್ಮ ಭಾಷಣದ ಕೊನೆಯ ಸಾಲುಗಳನ್ನಷ್ಟೇ ಓದಿ ಭಾಷಣ ಮುಗಿಸಿದ್ದಾರೆ.
ಭಾಷಣ ಮುಗಿಸಿ ತೆರಳುತ್ತಿದ್ದಂತೆ ಕಾಂಗ್ರೆಸ್ ಶಾಸಕರು ರಾಜ್ಯಪಾಲರ ವಾಹನದತ್ತ ತೆರಳಿ ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಹಲ್ಲೆ ನಡೆಸಿದ್ದಾರೆ ಎಂದು ದು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಭರದ್ವಾಜ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಸಂಸದರು, ಸಚಿವರ ಕಾರು ಖರೀದಿಯ ಹಣ ಹೆಚ್ಚಿಸಿದ ಯಡಿಯೂರಪ್ಪ ಸರ್ಕಾರ!
