Homeಮುಖಪುಟರಾಜ್ಯಪಾಲರು ಬಿಲ್‌ಗೆ ಅಂಕಿತ ಹಾಕಲು ವಿಳಂಬದ ಬಗ್ಗೆ ಸುಪ್ರೀಂ ಅಸಮಾಧಾನ

ರಾಜ್ಯಪಾಲರು ಬಿಲ್‌ಗೆ ಅಂಕಿತ ಹಾಕಲು ವಿಳಂಬದ ಬಗ್ಗೆ ಸುಪ್ರೀಂ ಅಸಮಾಧಾನ

- Advertisement -
- Advertisement -

ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ, ವಿಷಯ ಸುಪ್ರೀಂಕೋರ್ಟ್‌ಗೆ ತಲುಪುವ ಮುನ್ನವೇ ಆಯಾ ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ರಾಜ್ಯಪಾಲರು ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.

ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ವಿಧೇಯಕಗಳನ್ನು ಅನುಮೋದಿಸುವಲ್ಲಿ ವಿಳಂಬ ಮಾಡಿದ್ದರ ವಿರುದ್ಧ ಪಂಜಾಬ್ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ತನ್ನ ಕಳವಳ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಪೀಠ, ಈ ಬಗ್ಗೆ ಪಂಜಾಬ್ ರಾಜ್ಯಪಾಲರು ಕೈಗೊಂಡ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.

ಬಿಲ್‌ ವಿಚಾರ ಸುಪ್ರೀಂಕೋರ್ಟ್‌ಗೆ ಬರುವ ಮೊದಲೇ ರಾಜ್ಯಪಾಲರು ಅದಕ್ಕೆ ಸಹಿ ಮಾಡಿ ವಿಲೇವಾರಿ ಮಾಡಬೇಕು. ರಾಜ್ಯಪಾಲರು ಸ್ವಲ್ಪ ಆತ್ಮವಲೋಕನ ಮಾಡುವ ಅಗತ್ಯವಿದೆ. ಅವರು ಜನರ ಚುನಾಯಿತ ಪ್ರತಿನಿಧಿಗಳಲ್ಲ ಎಂದು ಸುಪ್ರೀಂ ಕೋರ್ಟ್ ಪೀಠವು ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.

ಪ್ರಸ್ತುತ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಂಜಾಬ್ ವಿಧಾನಸಭೆ ಅಂಗೀಕರಿಸಿದ 27 ಮಸೂದೆಗಳಲ್ಲಿ 22ಕ್ಕೆ ಪುರೋಹಿತ್ ತಮ್ಮ ಒಪ್ಪಿಗೆ ನೀಡಿದ್ದಾರೆ. ರಾಜ್ಯಪಾಲ ಪುರೋಹಿತ್ ಮತ್ತು ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರದ ನಡುವಿನ ಇತ್ತೀಚಿನ ಕಿತ್ತಾಟದ ಬಳಿಕ ಅ.19 ರಂದು ಪಂಜಾಬ್ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ರಾಜ್ಯಪಾಲರು 3 ಮಸೂದೆಗಳಿಗೆ ತಮ್ಮ ಅನುಮೋದನೆಯನ್ನು ತಡೆಹಿಡಿದಿದ್ದರು.

ಪುರೋಹಿತ್ ಅವರು ಪಂಜಾಬ್ ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ ತಿದ್ದುಪಡಿ ಮಸೂದೆ- 2023, ಪಂಜಾಬ್ ಸರಕು ಮತ್ತು ಸೇವಾ ತೆರಿಗೆ ತಿದ್ದುಪಡಿ ಮಸೂದೆ- 2023 ಮತ್ತು ಇಂಡಿಯನ್ ಸ್ಟ್ಯಾಂಪ್ (ಪಂಜಾಬ್ ತಿದ್ದುಪಡಿ) ಮಸೂದೆ 2023ಕ್ಕೆ ಅನುಮೋದನೆ ನೀಡಿಲ್ಲ.

ವಿಚಾರಣೆಯ ಸಂದರ್ಭದಲ್ಲಿ ಪಂಜಾಬ್ ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಮೆಹ್ತಾ, ಪುರೋಹಿತ್ ಅವರು ತಮ್ಮ ಮುಂದೆ ಇಟ್ಟಿರುವ ಮಸೂದೆಗಳ ಮೇಲೆ ಕ್ರಮ ಕೈಗೊಂಡಿದ್ದಾರೆ ಮತ್ತು ರಾಜ್ಯ ಸರ್ಕಾರದ ಮನವಿಯು ಅನಗತ್ಯ ದಾವೆಯಾಗಿದೆ ಎಂದು ಸುಪ್ರೀಂಕೋರ್ಟ್ ಪೀಠಕ್ಕೆ ತಿಳಿಸಿದ್ದರು.

ಇದನ್ನು ಓದಿ:ಭಾರತದ ವಿರುದ್ಧ ಹೀನಾಯ ಸೋಲು: ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ಶ್ರೀಲಂಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...