Homeಮುಖಪುಟ‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

ನಾಯಿ ಸತ್ತಾಗಲೂ ಸಂತಾಪ ಸೂಚಿಸಲಾಗುತ್ತದೆ ಆದರೆ 250 ರೈತರು ಸಾವನ್ನಪ್ಪಿದ್ದಾರೆ, ಯಾರೂ ಸಂತಾಪ ವ್ಯಕ್ತಪಡಿಸಲಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮತ್ತೇ ಬೆಂಬಲಿಸಿರುವ ಮೇಘಾಲಯ ರಾಜ್ಯಪಾಲ ಸತ್ಯ ಪಾಲ್ ಮಲಿಕ್, ಆಡಳಿತಾರೂಢ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ದೆಹಲಿಯ ಗಡಿಯ ಸುತ್ತ ನಾಲ್ಕು ತಿಂಗಳ ಕಾಲ ನಡೆಯುತ್ತಿರುವ ಆಂದೋಲನದಿಂದಾಗಿ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಹರಿಯಾಣದಲ್ಲಿ ಬಿಜೆಪಿಗೆ ಜನಬೆಂಬಲ ನಷ್ಟವಾಗಲಿದೆ ಎಂದು ಸತ್ಯ ಪಾಲ್ ಭವಿಷ್ಯ ನುಡಿದಿದ್ದಾರೆ.

“ನಾಯಿ ಸತ್ತಾಗಲೂ ಸಂತಾಪ ಸೂಚಿಸಲಾಗುತ್ತದೆ ಆದರೆ 250 ರೈತರು ಸಾವನ್ನಪ್ಪಿದ್ದಾರೆ. ಯಾರೂ ಸಂತಾಪ ವ್ಯಕ್ತಪಡಿಸಲಿಲ್ಲ. ಈ ಆಂದೋಲನವು ಈ ರೀತಿ ಮುಂದುವರಿದರೆ ದೀರ್ಘಾವಧಿಯಲ್ಲಿ, ಪಶ್ಚಿಮ ಯುಪಿ, ರಾಜಸ್ಥಾನ ಮತ್ತು ಹರಿಯಾಣಗಳಲ್ಲಿ ಬಿಜೆಪಿ ಸೋಲುತ್ತದೆ” ಎಂದು ರಾಜ್ಯಪಾಲರು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರ ವಿರುದ್ದ ಬಲ ಪ್ರಯೋಗಿಸಬೇಡಿ’- ರೈತರ ಬೆಂಬಲಕ್ಕೆ ನಿಂತ ಮೇಘಾಲಯ ರಾಜ್ಯಪಾಲ!

ರಾಜ್ಯಪಾಲ ಆಗಿ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನನ್ನ ಹೇಳಿಕೆಯಿಂದ ಅವರಿಗೆ ಹಾನಿ ಉಂಟಾಗುತ್ತದೆ ಎಂದು ಸರ್ಕಾರ ಭಾವಿಸಿದರೆ, ನಾನು ನನ್ನ ಸ್ಥಾನದಿಂದ ಇಳಿಯುತ್ತೇನೆ. ನಾನು ರಾಜ್ಯಪಾಲ ಅಲ್ಲದಿದ್ದರೂ ಈ ಬಗ್ಗೆ ಮಾತನಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಕಳೆದ ಭಾನುವಾರ ತಮ್ಮ ತವರು ಜಿಲ್ಲೆ ಬಾಘ್ಪತ್‌‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸತ್ಯ ಪಾಲ್, “ಕೇಂದ್ರ ಸರ್ಕಾರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯ ಕಾನೂನು ಖಾತರಿ ನೀಡಿದರೆ, ರೈತರು ತಮ್ಮ ಪಟ್ಟು ಸಡಿಲಿಸಲಿದ್ದಾರೆ. ರೈತರ ವಿರುದ್ಧ ಬಲವನ್ನು ಪ್ರಯೋಗಿಸಬೇಡಿ. ಅವರನ್ನು ದೆಹಲಿಯಿಂದ ಖಾಲಿ ಕೈಯಿಂದ ಮನೆಗೆ ಕಳುಹಿಸಬಾರದು ಎಂದು ಪ್ರಧಾನಿ ಮತ್ತು ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ” ಎಂದು ಸತ್ಯ ಪಾಲ್‌ ಹೇಳಿದ್ದರು.

ಅಂದು ಹೊಸ ಕೃಷಿ ಕಾನೂನುಗಳ ಪರವಾಗಿ ಮಂಡಿಸಿದ ವಾದಗಳನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ್ದ ಸತ್ಯ ಪಾಲ್, “ರೈತರು ಈಗ ಯಾವುದೇ ಸ್ಥಳದಲ್ಲಿ ಬೆಳೆಗಳನ್ನು ಮಾರಾಟ ಮಾಡಬಹುದೆಂದು ಸಾಕಷ್ಟು ಪ್ರಚಾರ ಮಾಡಲಾಯಿತು. ಆದರೆ ಇದು 15 ವರ್ಷಗಳ ಹಳೆಯ ಕಾನೂನು. ಇದರ ಹೊರತಾಗಿಯೂ, ಮಥುರಾದ ರೈತನು ಗೋಧಿಯೊಂದಿಗೆ ಪಾಲ್ವಾಲ್‌ಗೆ ಹೋದಾಗ, ಅವನ ಮೇಲೆ ಲಾಠಿಚಾರ್ಜ್ ಆಗುತ್ತದೆ. ಸೋನಿಪತ್‌ನಿಂದ ಒಬ್ಬ ರೈತ ನರೇಲಾಕ್ಕೆ ಬಂದಾಗ ಅವನ ಮೇಲೆಯು ಲಾಠಿಚಾರ್ಜ್ ಆಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...