Homeಮುಖಪುಟತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಸತತ 3ನೇ ಬಾರಿಗೆ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ...

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಸತತ 3ನೇ ಬಾರಿಗೆ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ ಆರ್‌.ಎನ್‌.ರವಿ

- Advertisement -
- Advertisement -

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ರಾಜ್ಯಪಾಲ ಆರ್‌.ಎನ್‌ ರವಿ ಮತ್ತು ಸರ್ಕಾರದ ನಡುವೆ ಜಟಾಪಟಿ ನಡೆದಿದೆ. ಸತತ 3ನೇ ಬಾರಿಗೆ ರಾಜ್ಯಪಾಲರು ಅಧಿವೇಶನದ ಆರಂಭದಲ್ಲಿ ಮಾಡಬೇಕಾದ ಸಾಂಪ್ರದಾಯಿಕ ಭಾಷಣ ಮಾಡದೆ ಮಂಗಳವಾರ (ಜ.20) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ಡಿಎಂಕೆ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ‘ತಪ್ಪುಗಳಿವೆ’ ಎಂದು ಆರೋಪಿಸಿ, ಅದನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದು, ವರ್ಷದ ಮೊದಲ ಅಧಿವೇಶನದ ಆರಂಭದಲ್ಲೇ ಗದ್ದಲ ಉಂಟಾಗಿದೆ.

ವರದಿಗಳ ಪ್ರಕಾರ, ಸದನಕ್ಕೆ ಪ್ರವೇಶಿಸಿದ ಕೂಡಲೇ, ರಾಷ್ಟ್ರಗೀತೆಗೆ ಸರಿಯಾದ ಗೌರವ ನೀಡಲಾಗಿಲ್ಲ ಎಂದು ರಾಜ್ಯಪಾಲ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನನಗೆ ನಿರಾಶೆಯಾಗಿದೆ. ರಾಷ್ಟ್ರಗೀತೆಯನ್ನು ಸರಿಯಾಗಿ ಗೌರವಿಸಬೇಕು” ಎಂದು ಹೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಅಪ್ಪಾವು ಅವರು, ರಾಜ್ಯ ಸರ್ಕಾರ ಸಿದ್ಧಪಡಿಸಿದ ಸಾಂಪ್ರದಾಯಿಕ ಭಾಷಣ ಓದುವುದಕ್ಕೆ ಮಾತ್ರ ರಾಜ್ಯಪಾಲರು ತಮ್ಮನ್ನು ಸೀಮಿತಗೊಳಿಸಬೇಕು. ಸದನದ ಸ್ಥಾಪಿತ ನಿಯಮಗಳು ಮತ್ತು ಸಂಪ್ರದಾಯಗಳನ್ನು ಅನುಸರಿಸಬೇಕು. ವಿಧಾನಸಭೆಯಲ್ಲಿ ಚುನಾಯಿತ ಸದಸ್ಯರು ಮಾತ್ರ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅನುಮತಿ ಇದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಪಾಲರು, “ನನ್ನ ಭಾಷಣಕ್ಕೆ ಅಡ್ಡಿಪಡಿಸಲಾಗಿದೆ. ಮೈಕ್ರೊಫೋನ್ (ಮೈಕ್) ಸ್ವಿಚ್ ಆಫ್ ಮಾಡಲಾಗಿದೆ. ಇದರಿಂದ ನನಗೆ ಅವಮಾನವಾಗಿದೆ. ತಪ್ಪುಗಳಿಂದ ತುಂಬಿರುವ ಭಾಷಣವನ್ನು ನಾನು ಓದಲು ಸಾಧ್ಯವಿಲ್ಲ” ಎಂದು ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯಪಾಲರ ನಡೆಯನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಟೀಕಿಸಿದ್ದು, ರಾಜ್ಯಪಾಲರು ಸಂಪ್ರದಾಯ ಮತ್ತು ನಿಯಮಗಳನ್ನು ಉಲ್ಲಂಘಿಸಿ ಹೊರನಡೆದಿದ್ದಾರೆ ಎಂದಿದ್ದಾರೆ. ನಂತರ ಭಾಷಣದ ಇಂಗ್ಲಿಷ್ ಆವೃತ್ತಿಯನ್ನು ಓದಲಾಗಿದೆ ಎಂದು ಭಾವಿಸಲಾಗಿದೆ ಎಂದು ಹೇಳುವ ನಿರ್ಣಯವನ್ನು ಮಂಡಿಸಿದ್ದಾರೆ.

“ರಾಜ್ಯಪಾಲರು ಸಂಪ್ರದಾಯಗಳು ಮತ್ತು ನಿಯಮಗಳನ್ನು ಉಲ್ಲಂಘಿಸಿ ಹೊರನಡೆದಿದ್ದಾರೆ. ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ, ರಾಜ್ಯಪಾಲರು ತಮ್ಮ ಅಭಿಪ್ರಾಯಗಳನ್ನು ಸೇರಿಸಲು ಅಥವಾ ಬೇರೆ ಏನನ್ನಾದರೂ ಹೇಳಲು ಯಾವುದೇ ಅವಕಾಶವಿಲ್ಲ” ಎಂದು ಸ್ಟಾಲಿನ್ ಹೇಳಿದ್ದಾರೆ.

ರಾಜ್ಯಪಾಲರ ರವಿ ಅವರು ಉದ್ದೇಶಪೂರ್ವಕವಾಗಿ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ನಡವಳಿಕೆ ಸದನವನ್ನು ಅವಮಾನಿಸಿದಂತೆ ಎಂದು ಸಿಎಂ ಸ್ಟಾಲಿನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರ ಅಗತ್ಯವಿಲ್ಲ ಎಂಬ ಆಡಳಿತಾರೂಢ ಡಿಎಂಕೆಯ ನಿಲುವನ್ನು ಸ್ಟಾಲಿನ್ ಪುನರುಚ್ಚರಿಸಿದ್ದು, ಈ ಹಿಂದಿನ ಮುಖ್ಯಮಂತ್ರಿಗಳಾದ ದಿವಂಗತ ಸಿಎನ್ ಅಣ್ಣಾದೊರೈ ಮತ್ತು ಎಂ ಕರುಣಾನಿಧಿ ಅವರು ರಾಜ್ಯಪಾಲರ ಸ್ಥಾನವನ್ನು ಗೌರವಿಸಿದ್ದರು. ಹಾಗಾಗಿ, ನಾವು ಅದನ್ನು ಅನುಸರಿಸುತ್ತಿದ್ದೇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ, ಪಕ್ಷ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡ ಅತ್ಯಂತ ಕಿರಿಯ ನಾಯಕ 

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾಗಿ 45 ವರ್ಷದ ನಿತಿನ್ ನಬಿನ್ 2026 ಜನವರಿ 20ರ, ಮಂಗಳವಾರ ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಕೇಂದ್ರ ಸಚಿವರಾಗಿರುವ ಜೆ.ಪಿ. ನಡ್ಡಾ ಅವರ ಸ್ಥಾನದಲ್ಲಿ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು, ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ಆಗಿದೆ ಎಂದು ಆರೋಪಿಸಿ ವಿಡಿಯೋ ಪೋಸ್ಟ್ ಮಾಡಿದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಕೇರಳದ ಮಹಿಳೆ ವಿರುದ್ದ ಪೊಲೀಸರು 'ಆತ್ಮಹತ್ಯೆಗೆ ಪ್ರಚೋದನೆ' ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಡಿಯೋ...

‘ಜಾತಿ ಪ್ರಾತಿನಿಧ್ಯ’ ವಿಚಾರದಿಂದ ಪಂಜಾಬ್ ಕಾಂಗ್ರೆಸ್‌ನಲ್ಲಿ ಬಿರುಕು?; ಭಾರೀ ಚರ್ಚೆಗೆ ಗ್ರಾಸವಾದ ಚನ್ನಿ ಹೇಳಿಕೆ

ಪಂಜಾಬ್ ಕಾಂಗ್ರೆಸ್‌ನಲ್ಲಿ ಜಾತಿ ಪ್ರಾತಿನಿಧ್ಯದ ಬಗ್ಗೆ ಸಂಘರ್ಷ ಭುಗಿಲೆದ್ದಿದೆ. ದಲಿತ ಮತ್ತು ಜಾಟ್ ಸಿಖ್ ಪ್ರಭಾವದ ನಡುವಿನ ಅಸಮತೋಲನದ ಮೇಲೆ ಕೇಂದ್ರೀಕೃತವಾಗಿರುವ ಈ ಘರ್ಷಣೆಯು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಲೋಕಸಭಾ ಸಂಸದ...

ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರ ರಾವ್ ಅಮಾನತು

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಡಿಜಿಪಿ ಕೆ.ರಾಮಚಂದ್ರ ರಾವ್ ಅವರನ್ನು ಕರ್ತವ್ಯದಿಂದ ಅಮಾತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Download ಈಗಾಗಲೇ ಈ...

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...