Homeಕರ್ನಾಟಕಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

- Advertisement -
- Advertisement -

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮಸೂದೆಯ ಮೂಲಕ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ತನ್ನ ಆದೇಶಕ್ಕೆ ಕಾನೂನು ಬಲ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು.

ಮಸೂದೆ ವಾಪಸ್ ಕಳುಹಿಸಿರುವ ರಾಜ್ಯಪಾಲರ ನಿರ್ಧಾರದ ಕುರಿತು ಒಳ ಮೀಸಲಾತಿ ಹೋರಾಟಗಾರರು ಮತ್ತು ದಲಿತ ಸಮುದಾಯದ ಮುಖಂಡರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಬಸವರಾಜ್ ಕೌತಾಳ್ ಅವರು, “ರಾಜ್ಯಪಾಲರು ಮಸೂದೆಯನ್ನು ತಿರಸ್ಕರಿಸಿಲ್ಲ, ಸರ್ಕಾರದಿಂದ ಕೆಲವೊಂದು ಸ್ಪಷ್ಟನೆಗಳನ್ನು ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಮಸೂದೆ ಪ್ರಸ್ತುತ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌.ಕೆ ಪಾಟೀಲ್ ಬಳಿ ಇದೆ ಎಂದು ಗೊತ್ತಾಗಿದೆ. ಸರ್ಕಾರ ತಕ್ಷಣ ರಾಜ್ಯಪಾಲರು ಕೇಳಿರುವ ಸ್ಪಷ್ಟನೆಯನ್ನು ಕೊಡಬೇಕು, ರಾಜ್ಯಪಾಲರು ರಾಜಕೀಯವನ್ನು ಬದಿಗಿಟ್ಟು ಅದಕ್ಕೆ ಅಂಕಿತ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಒಳ ಮೀಸಲಾತಿ ವಿಷಯ ತಾರ್ಕಿಕ ಅಂತ್ಯ ಕಾಣದೆ ನೇಮಕಾತಿಗಳು, ಬಡ್ತಿ ನಿಂತು ಹೋಗಿದೆ. ಇದರಿಂದ ಉದ್ಯೋಗಕಾಂಕ್ಷಿ ಯುವಜನತೆ ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. ಒಳಮೀಸಲಾತಿಯ ಸರಿಯಾದ ಹಂಚಿಕೆಗೆ ಸಂಬಂಧಿಸಿದಂತೆ ನಮ್ಮ ಹೋರಾಟಗಳು ಮುಂದುವರಿಯುತ್ತದೆ. ಸಣ್ಣಪುಟ್ಟ ವ್ಯತ್ಯಾಸಗಳನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಬಹುದು. ಹಾಗಾಗಿ, ಸರ್ಕಾರ ಮತ್ತು ರಾಜ್ಯಪಾಲರು ಸಮನ್ವಯ ಸಾಧಿಸಿಕೊಂಡು ತಕ್ಷಣಕ್ಕೆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಬಿಜೆಪಿಯವರು ನಾಗಮೋಹನ್‌ದಾಸ್ ಸಮಿತಿಯ ವರದಿಯನ್ನೇ ಅವೈಜ್ಞಾನಿಕ ಎಂದಿದ್ದರು. ಮಸೂದೆ ವಾಪಸ್ ಬಂದಿರುವುದರ ಹಿಂದೆ ಅವರ ಕ್ರೆಡಿಟ್ ವಾರ್‌ ಕೂಡ ಇರಬಹುದು ಎಂದಿದ್ದಾರೆ.

ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ನಿರ್ಧಾರ ತೆಗೆದುಕೊಳ್ಳುವ ಅವಕಾಶ ಈಗ ಸರ್ಕಾರದ ಹಂತದಲ್ಲಿದೆ. ರಾಜ್ಯಪಾಲರು ಏನು ಸ್ಪಷ್ಟನೆ ಕೇಳಿದ್ದಾರೋ, ಅದನ್ನು ಕೊಟ್ಟು ಸರ್ಕಾರ ಮಸೂದೆಗೆ ಅಂಕಿತ ಪಡೆಯುವ ಕೆಲಸ ತುರ್ತಾಗಿ ಮಾಡಬೇಕು. ಒಳಮೀಸಲಾತಿ ವಿಚಾರ ಬಗೆಹರಿಯದೆ ನೇಮಕಾತಿ ಮತ್ತು ಬಡ್ತಿಯಲ್ಲಿ ಸಮಸ್ಯೆ ಉಂಟಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಸೂದೆ ಕುರಿತು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಪ್ರಧಾನ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಮಾತನಾಡಿ, ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿರುವುದರ ಹಿಂದೆ ನೇರವಾಗಿ ಬಿಜೆಪಿಯವರ ಕೈವಾಡವಿದೆ. ಅವರು ರಾಜ್ಯಪಾಲರ ಮೇಲೆ ಒತ್ತಡ ಹೇರಿ ಅಂಕಿತ ಬೀಳದಂತೆ ಮಾಡಿದ್ದಾರೆ. ಬಿಜೆಪಿಯವರು ಒಳ ಮೀಸಲಾತಿ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂದಿದ್ದಾರೆ. ಸರ್ಕಾರ ರಾಜ್ಯಪಾಲರು ಕೇಳಿದ ಸ್ಪಷ್ಟನೆಯನ್ನು ಕೊಟ್ಟು ಕಾನೂನು ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...