Homeಚಳವಳಿರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ರೈತವಿರೋಧಿ ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು: ಬೆಂಗಳೂರಿನಲ್ಲಿ ರೈತರು ಗುಡುಗು

ಈ ಜನವಿರೋಧಿ ಕಾಯ್ದೆಗೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಸಹಿ ಹಾಕಬಾರದು. ಒಂದು ವೇಳೆ ಸಹಿ ಹಾಕಿದ್ದೆ ಆದಲ್ಲಿ ದೆಹಲಿ ರೈತರ ಮಾದರಿಯಲ್ಲಿ ಬೆಂಗಳೂರನ್ನು ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕರ್ನಾಟಕದಲ್ಲಿನ ರೈತರ ಹೋರಾಟ ಮುಂದುವರೆದಿದೆ. ಭೂ ಸುಧಾರಣಾ ಮಸೂದೆಯನ್ನು ವಿಧಾನಪರಿಷತ್‌ನಲ್ಲಿ ಅಂಗೀಕರಿಸಿದ್ದನ್ನು ವಿರೋಧಿಸಿ, ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯಿಂದ ಇಂದು ರಾಜಭವನ ಚಲೋ ಹೋರಾಟ ಆರಂಭವಾಗಿದೆ.

ಇಂದು ಬೆಳಿಗ್ಗೆಯೇ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿ ಜಮಾಯಿಸಿದ ಸಾವಿರಾರು ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲು ನಿಲ್ದಾಣದಿಂದ ಕೆ.ಆರ್ ಸರ್ಕಲ್ ಮತ್ತು ವಿಧಾನಸೌಧದ ಮುಂಭಾಗದಿಂದ ರಾಜಭವನ ತಲುಪಲು ಯೋಜಿಸಿದ್ದ ರೈತರನ್ನು ಸದ್ಯಕ್ಕೆ ಫ್ರೀಡಂ ಪಾರ್ಕ್‌ ಬಳಿ ಪೊಲೀಸರು ತಡೆದಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಲವನ್ನು ನಿಯೋಜಿಸಲಾಗಿದೆ. ಫ್ರೀಡಂ ಪಾರ್ಕ್ ರಸ್ತೆಯಲ್ಲಿ ವಾಹನ ಸಂಚಾರ ಸ್ತಭ್ದಗೊಂಡಿದೆ.

ಕಬ್ಬು ಬೆಳೆಗಾರರ ಸಂಘದ ಕುರುಬೂರು ಶಾಂತಕುಮಾರ್ ಮಾತನಾಡಿ “ಈ ಜನವಿರೋಧಿ ಕಾಯ್ದೆಗೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಸಹಿ ಹಾಕಬಾರದು. ಒಂದು ವೇಳೆ ಸಹಿ ಹಾಕಿದ್ದೆ ಆದಲ್ಲಿ ದೆಹಲಿ ರೈತರ ಮಾದರಿಯಲ್ಲಿ ಬೆಂಗಳೂರನ್ನು ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ. ಇನ್ನು ಮಾಜಿ ಸಿಎಂ ಕುಮಾರಸ್ವಾಮಿಯವರು ನಾಟಕ ನಿಲ್ಲಿಸಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ “ಸರ್ಕಾರ ಕಾಯ್ದೆಯನ್ನು ಅಂಗೀಕರಿಸಿ ನಮ್ಮನ್ನು ಮಾತುಕತೆಗೆ ಕರೆದಿದೆ. ಇದು ಸರ್ಕಾರದ ಪೂರ್ವಯೋಜಿತ ನಾಟಕ. ಹಾಗಾಗಿ ನಾವು ಮಾತುಕತೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಹೋರಾಟ ಮುಂದುವರೆಸುತ್ತೇವೆ” ಎಂದಿದ್ದಾರೆ.

ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು, ಯುವಜನರು ಜೊತೆಗೂಡಿ “ದೇಶ ಮಾರುವ ಪ್ರಧಾನಿ ಮಂತ್ರಿಗೆ ಧಿಕ್ಕಾರ” ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ. ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಐಕ್ಯ ಹೋರಾಟ ಸಮಿತಿಯ ವತಿಯಿಂದ ಡಾ.ಪ್ರಕಾಶ್ ಕಮ್ಮರಡಿ, ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಕುರುಬುರು ಶಾಂತಕುಮಾರ್, ಕುಮಾರ್ ಸಮತಳ, ಡಿ.ಎಚ್ ಪೂಜಾರ್ ಮುಂತಾದವರು ಹೋರಾಟದ ನೇತೃತ್ವ ವಹಿಸಿದ್ದಾರೆ.


ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...