HomeUncategorizedರಾಜ್ಯಪಾಲರು ಅನಿರ್ದಿಷ್ಟಾವಧಿಗೆ ಮಸೂದೆ ಬಾಕಿ ಉಳಿಸುವಂತಿಲ್ಲ: ಸುಪ್ರೀಂ ಕೋರ್ಟ್

ರಾಜ್ಯಪಾಲರು ಅನಿರ್ದಿಷ್ಟಾವಧಿಗೆ ಮಸೂದೆ ಬಾಕಿ ಉಳಿಸುವಂತಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ರಾಜ್ಯಪಾಲರು ಅನಿರ್ಧಿಷ್ಟಾವಧಿಗೆ ಮಸೂದೆಗಳನ್ನು ತಡೆ ಹಿಡಿಯಬಾರದು. ಈ ಮೂಲಕ ಶಾಸಕಾಂಗದ ಕಾರ್ಯ ನಿರ್ವಹಣೆಗೆ ಅಡ್ಡಿಯಾಗಬಾರದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಜೆಬಿ ಪಾರ್ದೀವಾಲ ಮತ್ತು ಮನೋಜ್‌ ಮಿಶ್ರಾ ಅವರಿದ್ದ ಪೀಠ, ರಾಜ್ಯಪಾಲರು ರಾಜ್ಯದ ಸಾಂವಿಧಾನಿಕ ವ್ಯವಸ್ಥೆಯ ಮುಖ್ಯಸ್ಥರು. ಅವರು ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲು ಅವಕಾಶವಿದೆ. ಆದರೆ, ಮಸೂದೆಗಳನ್ನು ಅನಿರ್ಧಿಷ್ಟಾವಧಿಗೆ ಬಾಕಿ ಉಳಿಸಿಕೊಳ್ಳಬಾರದು. ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕದಿದ್ದರೆ ಅದನ್ನು ಮರು ಪರಿಶೀಲನೆಗೆ ಶಾಸಕಾಂಗಕ್ಕೆ ಹಿಂದಿರುಗಿಸಬೇಕು ಎಂದು ತಿಳಿಸಿದೆ.

ಕಳೆದ ಜೂನ್ 19 ಮತ್ತು 20ರಂದು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಗಳನ್ನು ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಇತ್ಯರ್ಥ ಮಾಡಿಲ್ಲ ಎಂದು ಪಂಜಾಬ್‌ನ ಆಮ್‌ ಆದ್ಮಿ ನೇತೃತ್ವದ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿಯನ್ನು ಇತ್ಯರ್ಥಪಡಿಸಿರುವ ನ್ಯಾಯಾಲಯ ನವೆಂಬರ್‌ 10 ರಂದು ತೀರ್ಪು ನೀಡಿದೆ. 27 ಪುಟಗಳ ಅದೇಶದ ಪ್ರತಿಯನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಗುರುವಾರ ಅಪ್ಲೋಡ್‌ ಮಾಡಲಾಗಿದೆ.

ಸಂವಿಧಾನದ 200ನೇ ವಿಧಿಯ ಪ್ರಕಾರ ರಾಜ್ಯಪಾಲರು ಮೂರು ಆಯ್ಕೆಗಳನ್ನು ಹೊಂದಿದ್ದಾರೆ. ಮಸೂದೆಗೆ ಅಂಕಿತ ಹಾಕುವುದು, ಅಂಕಿತ ಹಾಕುವುದನ್ನು ತಡೆಯುವುದು ಅಥವಾ ರಾಷ್ಟ್ರಪತಿಗಳು ಪರಿಶೀಲನೆ ನಡೆಸುವ ಸಂಬಂಧ ಮಸೂದೆಗಳನ್ನು ಕಾಯ್ದಿರಿಸುವುದು. ಆದರೆ, ಶಾಸಕಾಂಗದ ಕಾರ್ಯ ವಿಫಲಗೊಳಿಸುವ ರೀತಿಯಲ್ಲಿ ರಾಜ್ಯಪಾಲರು ಮಸೂದೆಗಳನ್ನು ತಡೆ ಹಿಡಿಯಬಾರದು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ: ಉ. ಪ್ರದೇಶದ ಗೋಹತ್ಯೆ ತಡೆ ಕಾಯ್ದೆ ಗೋಮಾಂಸ ಸಾಗಾಟ ನಿಷೇಧಿಸಿಲ್ಲ: ಅಲಹಾಬಾದ್ ಹೈಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...