Homeಕರ್ನಾಟಕಕಾಲ್ತುಳಿತ| ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ವಜಾ; ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ಕಾಲ್ತುಳಿತ| ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ವಜಾ; ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

- Advertisement -
- Advertisement -

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದಲೇ ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಆರ್‌ಸಿಬಿ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಕೆ. ಗೋವಿಂದರಾಜ್ ಅವರು ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗಲೂ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿದ್ದರು.

ಅಲ್ಲದೆ, 2023ರಿಂದ 2027ರವರೆಗೆ ದಕ್ಷಿಣಾ ಏಷ್ಯಾ ಬಾಸ್ಕೇಟ್ ಬಾಲ್‌ ಅಸೋಸಿಯೇಷನ್‌ನ ನಾಮನಿರ್ದೇಶಿತರಾಗಿ FIBA ಎಷ್ಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಗೋವಿಂದರಾಜ್ ಅವರು 2023ರಿಂದ 2024ರವರೆಗೆ ಭಾರತೀಯ ಬಾಸ್ಕೇಟ್‌ಬಾಲ್ ಫೆಡರೇಶನ್‌ನ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್‌ಗೆ ಅವರು ಕ್ರೀಡಾ ಆಡಳಿತಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಬಾಸ್ಕೇಟ್‌ಬಾಲ್ ಅಸೋಸಿಯೇಷನ್‌ನ ಕಾರ್ಯದರ್ಶಿ ಮತ್ತು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಸದಸ್ಯರೂ ಆಗಿದ್ದರು.

ಆರ್‌ಸಿಬಿ ಗೆಲ್ಲುತ್ತಿದ್ದಂತೆ ಸರ್ಕಾರದಿಂದ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದು ಗೋವಿಂದರಾಜ್ ಅವರೇ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆದಿಯಾಗಿ ವಿಪಕ್ಷ ನಾಯಕರು ಆರೋಪಿಸಿದ್ದರು.

ಲಕ್ಷಾಂತರ ಜನರು ಸೇರುವ ಬಗ್ಗೆ ಮಾಹಿತಿ ನೀಡುವಲ್ಲಿ ಗುಪ್ತಚರ ಇಲಾಖೆಯು ವಿಫಲವಾಗಿತ್ತು ಎಂದೂ ವಿರೋಧಪಕ್ಷಗಳು ಆರೋಪಿಸಿದ್ದವು. ಈ ಕಾರಣಕ್ಕೆ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

ಕೆಪಿಎಸ್‌ಸಿ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕಾತಿ ಅಧಿಸೂಚನೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...