HomeಮುಖಪುಟCSIR-UGC NET ಪರೀಕ್ಷೆ ಮಂದೂಡಿಕೆ: ಮತ್ತೊಂದು ಪ್ರಶ್ನೆ ಪತ್ರಿಕೆ ಸೋರಿಕೆ?

CSIR-UGC NET ಪರೀಕ್ಷೆ ಮಂದೂಡಿಕೆ: ಮತ್ತೊಂದು ಪ್ರಶ್ನೆ ಪತ್ರಿಕೆ ಸೋರಿಕೆ?

- Advertisement -
- Advertisement -

ಅಕ್ರಮ ನಡೆದಿರುವ ಶಂಕೆ ಮೇಲೆ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್‌-ಯುಜಿಸಿ ನೆಟ್) ಪರೀಕ್ಷೆಯನ್ನು ಮುಂದೂಡಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚಿಸಿದೆ.

ಜೂನ್‌ 25ರಿಂದ 27ರವರೆಗೆ ಪರೀಕ್ಷೆ ನಿಗದಿಯಾಗಿತ್ತು. ಆದರೆ, ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯೂ ಡಾರ್ಕ್‌ ವೆಬ್‌ನಲ್ಲಿ ಸೋರಿಕೆಯಾಗಿರಬಹುದು ಎಂಬ ಅನುಮಾನದ ಮೇಲೆ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆ ಮುಂದೂಡಲು ಸೂಚಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಯುಜಿಸಿ ಅಧ್ಯಕ್ಷ ಎಂ ಜಗದೇಶ್ ಕುಮಾರ್ ಮತ್ತು ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಸೇರಿದಂತೆ ಪ್ರಮುಖ ಜೊತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸರಣಿ ಸಭೆಗಳನ್ನು ನಡೆಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

ಫೆಬ್ರವರಿಯಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಕೇಂದ್ರದ ಹೊಸ ಪರೀಕ್ಷಾ ಅಕ್ರಮ ತಡೆ ಕಾನೂನು ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯ್ದೆ-2024ರ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಸೂಚನೆ ಹೊರಡಿಸಿದ ದಿನವೇ ಪರೀಕ್ಷೆ ಮುಂದೂಡಲು ಸೂಚಿಸಲಾಗಿದೆ.

ಡಿಸೆಂಬರ್ 2019 ರಿಂದ ಯುಜಿಸಿ ಮತ್ತು ಕೌನ್ಸಿಲ್ ಫಾರ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಪರವಾಗಿ ಎನ್‌ಟಿಎ ಆನ್‌ಲೈನ್ ಮೋಡ್‌ನಲ್ಲಿ ಸಿಎಸ್‌ಐಆರ್-ಯುಜಿಸಿ ನೆಟ್ ಪರೀಕ್ಷೆ ನಡೆಸುತ್ತಿದೆ.  ನಿರೀಕ್ಷೆಯಿತ್ತು.

ಸಿಎಸ್‌ಐಆರ್-ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸಂದೇಶ ಮೆಸೇಜಿಂಗ್ ಆ್ಯಪ್‌ಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಶುಕ್ರವಾರ ಶಿಕ್ಷಣ ಸಚಿವರಿಗೆ ಮಾಹಿತಿ ನೀಡಲಾಗಿದೆ. ಶಿಕ್ಷಣ ಸಚಿವಾಲಯ ಈ ಕುರಿತು ಗೃಹ ಸಚಿವಾಲಯ ಅಥವಾ ಐ4ಸಿ (ಸೈಬರ್ ಅಪರಾಧದ ವಿರುದ್ಧ ಹೋರಾಡುವ ಗೃಹ ಇಲಾಖೆಯ ಕೇಂದ್ರ) ಯಿಂದ ಯಾವುದೇ ಮಾಹಿತಿ ಸ್ವೀಕರಿಸದಿದ್ದರೂ ನೆಟ್ ವಿಷಯದಲ್ಲಿ ಮಾಡಿದಂತೆ ಖಚಿತಪಡಿಸಿಕೊಳ್ಳಲು ಪರೀಕ್ಷೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಆದರೆ, ಲಾಜಿಸ್ಟಿಕ್ ಸಮಸ್ಯೆಗಳಿಂದ ಪರೀಕ್ಷೆ ಮುಂದೂಡಲಾಗುತ್ತಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ ಮೂಲಕ ತಿಳಿಸಲಾಗುವುದು ಎಂದು ಎನ್‌ಟಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸಿಎಸ್‌ಐಆರ್‌-ಯುಜಿಸಿ ನೆಟ್ ಜೂನ್ ಮತ್ತು ಡಿಸೆಂಬರ್‌ನಲ್ಲಿ ನಡೆಯುವ ದ್ವೈವಾರ್ಷಿಕ ಪರೀಕ್ಷೆಯಾಗಿದೆ. ಜೂನಿಯರ್ ರಿಸರ್ಚ್ ಫೆಲೋಶಿಪ್ (ಜೆಆರ್‌ಎಫ್‌) ಮತ್ತು ಭಾರತೀಯ ವಿಶ್ವವಿದ್ಯಾನಿಲಯಗಳಲ್ಲಿ ವಿಜ್ಞಾನದಲ್ಲಿ ಉಪನ್ಯಾಸಕರ ಅರ್ಹತೆಯನ್ನು ನಿರ್ಧರಿಸಲು ಇದನ್ನು ನಡೆಸಲಾಗುತ್ತದೆ. ಇದು ಪಿಹೆಚ್‌ಡಿ ಪ್ರವೇಶಕ್ಕೆ ನಿರ್ಣಾಯಕ ಮಾನದಂಡವಾಗಿದೆ.

ಪ್ರತಿಷ್ಠಿತ ಸಂಸ್ಥೆಗಳಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ಐಐಟಿಗಳು ಕೂಡ ಪಿಹೆಚ್‌ಡಿ ಅಧ್ಯಯನಕ್ಕೆ ಅರ್ಜಿ ಸಲ್ಲಿಸಲು ಸಿಎಸ್‌ಐಆರ್‌-ಯುಜಿಸಿ ನೆಟ್ ಫಲಿತಾಂಶವನ್ನು ಅರ್ಹತೆಯಾಗಿ ಸ್ವೀಕರಿಸುತ್ತವೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಪರೀಕ್ಷೆಗೆ 1.75 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ವರ್ಷ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...