Homeಮುಖಪುಟ'ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ' ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

- Advertisement -
- Advertisement -

ಜಮ್ಮು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಭಟ್ ನೇತೃತ್ವದ ಮುಸ್ಲಿಂ ಲೀಗ್ ಸಂಘಟನೆಯನ್ನು ಕೇಂದ್ರ ಸರ್ಕಾರವು ದೇಶ ವಿರೋಧಿ ಸಂಘಟನೆ ಎಂದು ಘೋಷಿಸಿದ್ದು, ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ 5 ವರ್ಷಗಳವರೆಗೆ ನಿಷೇಧಿಸಿ ಆದೇಶಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ಸಂಘಟನೆಯ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ)/ಎಂಎಲ್‌ಜೆಕೆ-ಎಂಎಯನ್ನು ಯುಎಪಿಎ ಅಡಿಯಲ್ಲಿ ಅಕ್ರಮ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಅಮಿತ್ ಶಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ರಾಷ್ಟ್ರದ ಏಕತೆ, ಸಾರ್ವಭೌಮತ್ವ ಮತ್ತು ಸಮಗ್ರತೆಗೆ ವಿರುದ್ಧವಾಗಿ ವರ್ತಿಸುವ ಯಾರೇ ಆಗಲಿ ಅವರನ್ನು ಬಿಡುವುದಿಲ್ಲ. ಅವರು ಕಾನೂನಿನ ಸಂಪೂರ್ಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂಬ ಮೋದಿ ಸರ್ಕಾರದ ಸಂದೇಶವು ಸ್ಪಷ್ಟವಾಗಿದೆ ಎಂದು ಅಮಿತ್‌ ಶಾ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಈ ಕುರಿತು ಅಧಿಸೂಚನೆಯನ್ನು ಹೊರಡಿಸಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯವನ್ನು ಪಡೆಯುವುದು, ಅದನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸುವುದು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವುದು ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರದ (ಮಸರತ್ ಆಲಂ ಬಣ) ಉದ್ದೇಶವಾಗಿದೆ. ಸಂಘಟನೆಯ ಸದಸ್ಯರು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ, ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟವನ್ನು ಬೆಂಬಲಿಸಲು ಪಾಕಿಸ್ತಾನದ ಸಂಘಟನೆಗಳು ಸೇರಿದಂತೆ ವಿವಿಧ ಮೂಲಗಳ ಮೂಲಕ ಹಣವನ್ನು ಸಂಗ್ರಹಿಸುತ್ತಿದ್ದಾರೆ. ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ) ಮತ್ತು ಅದರ ಸದಸ್ಯರು ದೇಶದ ಸಾಂವಿಧಾನಿಕ ಸಂಸ್ಥೆಗಳಿಗೆ ಅಗೌರವಿಸುತ್ತಾರೆ ಎಂದು ಗೃಹ ಸಚಿವಾಲಯ ಹೇಳಿದೆ.

ಸಂಘಟನೆಯ ಕಾನೂನುಬಾಹಿರ ಚಟುವಟಿಕೆಗಳು ಭಾರತದ ಸಮಗ್ರತೆ, ಸಾರ್ವಭೌಮತೆ, ಭದ್ರತೆ ಮತ್ತು ಕೋಮು ಸೌಹಾರ್ದತೆಯನ್ನು ಹಾಳುಮಾಡುತ್ತವೆ. ಇದಲ್ಲದೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ) ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಎಂದು ಸಚಿವಾಲಯ ಹೇಳಿದೆ.

ಈ ಸಂಘಟನೆ ಮತ್ತು ಅದರ ಸದಸ್ಯರು ದೇಶದಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವ ಉದ್ದೇಶದಿಂದ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ. ಇದು ದೇಶದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಅಪಾಯವನ್ನುಂಟುಮಾಡುತ್ತದೆ. ಈ ಸಂಘಟನೆಯು ಭಾರತದಿಂದ ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕಿಸುವುದನ್ನು ಪ್ರತಿಪಾದಿಸುವುದನ್ನು ಮುಂದುವರಿಸುವ ಸಾಧ್ಯತೆಯಿದೆ. ಸುಳ್ಳುಗಳನ್ನು ಬಿತ್ತರಿಸಿ ಆ ಪ್ರದೇಶದ ಜನರಲ್ಲಿ ರಾಷ್ಟ್ರವಿರೋಧಿ ಭಾವನೆಗಳನ್ನು ಪ್ರಚೋದಿಸುತ್ತದೆ. ಆದ್ದರಿಂದ, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ- 1967ರಡಿಯಲ್ಲಿ ಕೇಂದ್ರ ಸರ್ಕಾರವು ಮುಸ್ಲಿಮ್ ಲೀಗ್ ಜಮ್ಮು ಕಾಶ್ಮೀರವನ್ನು (ಮಸರತ್ ಆಲಂ ಬಣ) ಕಾನೂನುಬಾಹಿರ ಸಂಘ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಘೋಷಿಸಿದೆ. ನಿಷೇಧವು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಗೃಹ ಇಲಾಖೆಯು ತನ್ನ ಆದೇಶದಲ್ಲಿ ತಿಳಿಸಿದೆ.

ಸೈಯದ್ ಅಲಿ ಶಾ ಗಿಲಾನಿಯವರ ಮರಣದ ನಂತರ ಮಸರತ್ ಆಲಂ ಭಟ್ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಸಂಘಟನೆಯ ಮುಂದಾಳತ್ವ ವಹಿಸಿದ್ದರು. ಕಾಶ್ಮೀರ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಟ್ 2010ರಿಂದ ಜೈಲಿನಲ್ಲಿದ್ದಾರೆ. 2010ರಲ್ಲಿ ಕಾಶ್ಮೀರದಲ್ಲಿ 100ಕ್ಕೂ ಹೆಚ್ಚು ಯುವಕರ ಸಾವಿಗೆ ಕಾರಣವಾದ ಹಿಂಸಾತ್ಮಕ ಪ್ರತಿಭಟನೆಗಳನ್ನು ಸಂಘಟಿಸುವಲ್ಲಿ ಭಟ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

2015ರಲ್ಲಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಅವರನ್ನು ಬಿಡುಗಡೆ ಮಾಡಿದ್ದರು. ಇದು ಪಿಡಿಪಿ-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿಯ ಒತ್ತಡದ ಮೇರೆಗೆ, ಅಂದಿನ ರಾಜ್ಯ ಸರ್ಕಾರವು ರ್ಯಾಲಿಯಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಎತ್ತಿದ ಆರೋಪದಲ್ಲಿ ದೇಶದ್ರೋಹದ ಮತ್ತು ರಾಜ್ಯದ ವಿರುದ್ಧ ಯುದ್ಧಕ್ಕೆ ಪ್ರೇರಣೆ ಆರೋಪದ ಮೇಲೆ ಅವರನ್ನು ಪುನಃಬಂಧಿಸಿತ್ತು.

ಇದನ್ನು ಓದಿ: ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...