Homeಮುಖಪುಟಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

- Advertisement -
- Advertisement -

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು ಅಥವಾ ಗಂಭೀರ ಗಾಯಗಳಾಗಿವೆ ಎಂದು ಆರೋಪಿಸುವ ಕುಟುಂಬಗಳ ಬಗ್ಗೆ ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾಗಿ livelaw.in ವರದಿ ಮಾಡಿದೆ.

ಸಂವಿಧಾನವು ಬದುಕುವ ಹಕ್ಕನ್ನು ಕೇವಲ ‘ತಪ್ಪು ಯಾರದ್ದು’ ಎಂಬ ದೃಷ್ಟಿಕೋನದಿಂದ ಮಾತ್ರ ನೋಡುವುದಿಲ್ಲ ಎಂದು ಅವಲೋಕಿಸಿದ ನ್ಯಾಯಾಲಯವು, ಸಂತ್ರಸ್ತ ಕುಟುಂಬಗಳು ಯಾವುದೇ ಸುಲಭವಾಗಿ ಲಭ್ಯವಿರುವ ಪರಿಹಾರ ವ್ಯವಸ್ಥೆಯಿಲ್ಲದೆ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳುವ ಸಕಾರಾತ್ಮಕ ಜವಾಬ್ದಾರಿಯನ್ನು ವಿಧಿ 21 ರಾಜ್ಯದ ಮೇಲೆ ಹೇರುತ್ತದೆ ಎಂದು ತಿಳಿಸಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು, ಕೋವಿಡ್-19 ಲಸಿಕೆ ಪಡೆದ ನಂತರ ಸಂಭವಿಸುವ ಗಂಭೀರ ಪ್ರತಿಕೂಲ ಘಟನೆಗಳಿಗೆ ಸಂಬಂಧಿಸಿದಂತೆ ‘ಯಾರದ್ದೇ ತಪ್ಪಿಲ್ಲದಿದ್ದರೂ ಪರಿಹಾರ ನೀಡುವ’ ನೀತಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿ ಹೇಳಿದೆ.

ಕೋವಿಡ್-19 ಲಸಿಕೆ ಪಡೆದ ನಂತರ ಸಾವು ಸಂಭವಿಸಿದೆ ಅಥವಾ ತೀವ್ರ ಅನಾರೋಗ್ಯ ಉಂಟಾಗಿದೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬಗಳು ಸಲ್ಲಿಸಿದ್ದ ‘ರಚನಾ ಗಂಗು ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಸೇರಿದಂತೆ ಹಲವು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ಮೇಲಿನ ಮಹತ್ವದ ನಿರ್ದೇಶನಗಳನ್ನು ನೀಡಿದೆ.

“ತಾನು ಲಸಿಕೆಗಳ ಸಾಮರ್ಥ್ಯವನ್ನಾಗಲಿ ಅಥವಾ ಅವುಗಳಿಗೆ ನೀಡಲಾದ ನಿಯಂತ್ರಕ ಅನುಮೋದನೆಯ ಪ್ರಕ್ರಿಯೆಯನ್ನಾಗಲಿ ಪರಿಶೀಲಿಸುತ್ತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬದಲಾಗಿ, ಸರ್ಕಾರದ ನೇತೃತ್ವದ ಲಸಿಕಾ ಕಾರ್ಯಕ್ರಮದ ಸಮಯದಲ್ಲಿ ಹಾನಿಗೊಳಗಾದ ವ್ಯಕ್ತಿಗಳಿಗೆ ವ್ಯವಸ್ಥಿತವಾದ ಪರಿಹಾರ ಕಾರ್ಯವಿಧಾನ ಇಲ್ಲದಿರುವುದು ಸಾಂವಿಧಾನಿಕವಾಗಿ ಮಧ್ಯಪ್ರವೇಶಿಸಬೇಕಾದ ಅಗತ್ಯವನ್ನು ಉಂಟುಮಾಡುತ್ತದೆಯೇ ಎಂಬುದು ಮಾತ್ರ ತನ್ನ ಮುಂದಿದ್ದ ಪ್ರಶ್ನೆಯಾಗಿತ್ತು” ಎಂದಿದೆ.

ಅನಿರೀಕ್ಷಿತ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಿನ ಸಮಯದಲ್ಲಿ (ಕೋವಿಡ್ ಸಮಯದಲ್ಲಿ) ನಡೆಸಿದ ಲಸಿಕಾ ಅಭಿಯಾನವು ಸರ್ಕಾರದ ನೇತೃತ್ವದ ಉಪಕ್ರಮವಾಗಿತ್ತು ಎಂದು ಒತ್ತಿ ಹೇಳಿದ ನ್ಯಾಯಾಲಯ, ಈ ಅಭಿಯಾನದ ನಂತರ ಉಂಟಾದ ಅಡ್ಡಪರಿಣಾಮಗಳ ಜವಾಬ್ದಾರಿಯಿಂದ ಸರ್ಕಾರ ತನ್ನನ್ನು ತಾನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಕೋವಿಡ್ ಲಸಿಕೆ ಪಡೆದ ನಂತರ ಮೃತಪಟ್ಟ ಇಬ್ಬರು ಯುವತಿಯರ ಪೋಷಕರು ಸಲ್ಲಿಸಿದ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ. ಇಂತಹ ಸಾವುಗಳನ್ನು ಪರೀಕ್ಷಿಸಲು ಸ್ವತಂತ್ರ ವೈದ್ಯಕೀಯ ಮಂಡಳಿಯನ್ನು ರಚಿಸುವುದು, ಲಸಿಕೆ ಹಾಕಿಸಿಕೊಂಡ ನಂತರದ ಪ್ರತಿಕೂಲ ಘಟನೆಗಳನ್ನು ಗುರುತಿಸಲು ಪ್ರೋಟೋಕಾಲ್‌ಗಳನ್ನು ರೂಪಿಸುವುದು ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಒದಗಿಸುವಂತೆ ಈ ಅರ್ಜಿಯಲ್ಲಿ ಕೋರಲಾಗಿತ್ತು.

ಕೇರಳ ಹೈಕೋರ್ಟ್‌ನಲ್ಲೂ ಇಂತಹದ್ದೇ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಂತಹ ಒಂದು ಪ್ರಕರಣದಲ್ಲಿ, ಲಸಿಕಾಕರಣದ ನಂತರದ ಪ್ರತಿಕೂಲ ಘಟನೆಗಳನ್ನು ಗುರುತಿಸಲು ಮತ್ತು ಲಸಿಕೆಯಿಂದ ಮೃತಪಟ್ಟಿದ್ದಾರೆ ಎನ್ನಲಾದ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡಲು ನೀತಿಯೊಂದನ್ನು ರೂಪಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ಕೇರಳ ಹೈಕೋರ್ಟ್ ನೀಡಿದ್ದ ಆ ಮಧ್ಯಂತರ ನಿರ್ದೇಶನವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಇದರೊಂದಿಗೆ, ಕೇರಳ ಹೈಕೋರ್ಟ್‌ನಲ್ಲಿದ್ದ ಇದೇ ರೀತಿಯ ಹಲವಾರು ಪ್ರಕರಣಗಳನ್ನು ಸಹ ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಲಾಗಿತ್ತು.

COURTESY : livelaw.in


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...