Homeಕರೋನಾ ತಲ್ಲಣಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ ಕಿಡಿ

ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ ಕಿಡಿ

ಕೊರೊನಾ ಪರೀಕ್ಷೆಯ ಒಟ್ಟು ಸಾಮರ್ಥ್ಯದ ಶೇಕಡಾ 44.7 ರಷ್ಟು ಮಾತ್ರ ಬಳಕೆ ಮಾಡುವ ರಾಜ್ಯ ಸರ್ಕಾರದ ಅಯೋಗ್ಯತೆಗೆ ಬೇರೆ ಸಾಕ್ಷಿ ಬೇಕೇ? ಎಂದು ಆಕ್ರೋಶ.

- Advertisement -
- Advertisement -

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಎಂದು ದಿನಕ್ಕೆರಡು ಬಾರಿ ಮುಖ್ಯಮಂತ್ರಿಗಳು ಮತ್ತು ಸಚಿವರು ಅಬ್ಬರಿಸುತ್ತಿದ್ದಾರೆ, ಸ್ಯಾಂಪಲ್‌ಗಾಗಿ ಒಂದೆರಡು ಆಸ್ಪತ್ರೆಗಳ ವಿರುದ್ಧ ‘ಕಠಿಣ ಕ್ರಮ’ ಕೈಗೊಳ್ಳಬಾರದೇಕೆ? ಸರ್ಕಾರ ಯಾರಿಗೆ ಮತ್ತು ಯಾಕೆ ಹೆದರುತ್ತಿದೆ? ಎಂದು ವಿರೋದ ಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗ ಎಂದರೆ ಸೋಂಕು ಪರೀಕ್ಷೆ ಎನ್ನುವುದನ್ನು ವಿಶ್ವದಾದ್ಯಂತ ವೈದ್ಯರು-ತಜ್ಞರು ಹೇಳುತ್ತಲೇ ಇದ್ದಾರೆ. ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆಯನ್ನು ಸರಿಯಾಗಿ ನಡೆಸಬೇಕೆಂದು ಮಾತ್ರ ಗೊತ್ತಾಗಿಲ್ಲ ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪರೀಕ್ಷಾ ಕೇಂದ್ರಗಳಿರುವುದು ಕೇವಲ 59. ಅವುಗಳ ದಿನದ ಪರೀಕ್ಷಾ ಸಾಮರ್ಥ್ಯ 31,116. ಈಗ ಪ್ರತಿದಿನ ನಡೆಯುತ್ತಿರುವುದು ಕೇವಲ 13,910 ಪರೀಕ್ಷೆ ಮಾತ್ರ. ಅಂದರೆ‌ ಒಟ್ಟು ಸಾಮರ್ಥ್ಯದ ಶೇಕಡಾ 44.7 ರಷ್ಟು ಮಾತ್ರ ಬಳಕೆ. ರಾಜ್ಯ ಸರ್ಕಾರದ ಅಯೋಗ್ಯತೆಗೆ ಬೇರೆ ಸಾಕ್ಷಿ ಬೇಕೇ?, ಎಂದು ಹೇಳಿದ್ದಾರೆ.

ಕೊರೊನಾ ಸೋಂಕು ಪರೀಕ್ಷೆ ಹೆಚ್ಚು ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಆಗ‌ ಅದೇ ಪ್ರಮಾಣದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿಗಳು ಸೋಂಕು ಪರೀಕ್ಷೆ ಹೆಚ್ಚು ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಜನರ ಸಾವಿಗೆ ಕಾರಣವಾದ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದು ಕರೆದರೆ ತಪ್ಪಾದೀತೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...