Homeಕರ್ನಾಟಕಆಳಂದ ಸೇರಿ ರಾಜ್ಯದ ಎಲ್ಲಾ 'ಮತಗಳ್ಳತನ' ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

- Advertisement -
- Advertisement -

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಶನಿವಾರ (ಸೆ.20) ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

2023ರಲ್ಲಿ ಆಳಂದ ವಿಧಾನಸಭಾ ಕ್ಷೇತ್ರದ 256 ಮತಗಟ್ಟೆಗಳ ವ್ಯಾಪ್ತಿಯಲ್ಲಿನ 6 ಸಾವಿರಕ್ಕೂ ಹೆಚ್ಚು ಮತದಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಿದ ಪ್ರಕರಣವನ್ನು ಮುಖ್ಯವಾಗಿ ಪರಿಗಣಿಸಲಾಗಿದೆ.

ಒಳಾಡಳಿತ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರು ಎಸ್‌ಐಟಿ ರಚನೆ ಬಗ್ಗೆ ಆದೇಶ ಹೊರಡಿಸಿದ್ದು, ಸಿಐಡಿ ಘಟಕದ ಅಪರ ಪೋಲೀಸ್ ಮಹಾನಿರ್ದೇಶಕ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಸಿಸಿಡಿ, ಸಿಐಡಿ ಪೊಲೀಸ್ ಅಧೀಕ್ಷಕ ಸೈದುಲ್ ಅದಾವತ್, ಎಸ್‍ಇಡಿ ಸಿಐಡಿಯ ಪೊಲೀಸ್ ಅಧೀಕ್ಷಕಿ ಶುಭಾನ್ವಿತ ಅವರು ಸದಸ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6,018 ಮತದಾರರ ಹೆಸರುಗಳನ್ನು ಅನಧಿಕೃತವಾಗಿ ಅಳಿಸಲು ಯತ್ನಿಸಲಾಗಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಎಸ್‌ಐಟಿಗೆ ಪೊಲೀಸ್‌ ಠಾಣೆಯ ಸ್ಥಾನ ನೀಡಿ, ಇಡೀ ರಾಜ್ಯದ ವ್ಯಾಪ್ತಿಯಲ್ಲಿ ತನಿಖೆ ನಡೆಸುವ ಅಧಿಕಾರ ನೀಡಲಾಗಿದೆ. ಆಳಂದ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ (26/2023), ಬೇರೆ ಠಾಣೆಗಳಲ್ಲಿ ಈಗಾಗಲೇ ದಾಖಲಾಗಿರುವ ದೂರುಗಳು ಮತ್ತು ಮುಂದೆ ದಾಖಲಾಗಿರುವ ದೂರುಗಳನ್ನು ಎಸ್‌ಐಟಿ ತನಿಖೆಗೆ ಒಳಪಡಿಸಲಿದೆ.

ಆಳಂದ ಮತಗಳ್ಳತನ ಪ್ರಕರಣ 2023ರ ವಿಧಾನಸಭಾ ಚುನಾವಣೆಗೆ ಮುನ್ನ ನಕಲು ಫಾರ್ಮ್ 7ರ ಮೂಲಕ ಮತದಾರರ ಹೆಸರುಗಳನ್ನು ತೆಗೆದುಹಾಕಲು ನಡೆಸಿದ್ದ ಪಿತೂರಿಗೆ ಸಂಬಂಧಿಸಿದೆ. ಈ ಪ್ರಕರಣದ ಆರೋಪಿಗಳನ್ನು ಬಂಧಿಸಲು ಅಗತ್ಯವಾದ ನಿರ್ಣಾಯಕ ದತ್ತಾಂಶಗಳನ್ನು ಚುನಾವಣಾ ಆಯೋಗ ಸಿಐಡಿ ಜೊತೆ ಇನ್ನೂ ಹಂಚಿಕೊಳ್ಳದ ಕಾರಣ ಪ್ರಕರಣ ಬಹುತೇಕ ಹಳ್ಳಹಿಡಿದಂತೆ ಕಾಣುತ್ತಿದೆ ಎಂದು ದಿ ಹಿಂದೂ ಪತ್ರಿಕೆ ಭಾನುವಾರ (ಸೆ.7) ವಿಸ್ತೃತ ವರದಿ ಪ್ರಕಟಿಸಿತ್ತು.

ಸೆಪ್ಟೆಂಬರ್ 18ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ ಆಳಂದ ಪ್ರಕರಣದ ದಾಖಲೆ ಬಿಡುಗಡೆ ಮಾಡಿದ್ದರು.

ಆಳಂದ ಮತಗಳ್ಳತನ ಕುರಿತ ಸಂಪೂರ್ಣ ವಿವರಗಳನ್ನು ಈ ಕೆಳಗಿನ ವರದಿಗಳಲ್ಲಿ ಓದಿ

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....