Homeಕರ್ನಾಟಕನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ

ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ

- Advertisement -
- Advertisement -

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.

ಏಪ್ರಿಲ್ 18ರಂದು ಸಂಜೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಫಯಾಝ್ ಬಾಬಾಸಾಹೇಬ್ ಖೊಂಡಾನಾಯಕ್ ಎಂಬಾತನನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ವರದಿಗಳ ಪ್ರಕಾರ, ವಿದ್ಯಾರ್ಥಿನಿ ನೇಹಾಳ ಹತ್ಯೆ ಪ್ರಕರಣದ ತನಿಖೆಗೆ ಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ತನಿಖಾಧಿಕಾರಿಗಳು ಈಗಾಗಲೇ ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಆರೋಪಿ ಫಯಾಝ್‌ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ :

ನೇಹಾ ಹಿರೇಮಠ ಹತ್ಯೆ ಪ್ರಕರಣದ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಆದೇಶ ನೀಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಸರ್ಕಾರ ನೇಹಾ ಕುಟುಂಬದ ಪರವಾಗಿದೆ. ಸಚಿವರಾದ ಲಕ್ಷೀ ಹೆಬ್ಬಾಳ್ಕರ್, ಹೆಚ್‌.ಕೆ ಪಾಟೀಲ್, ಸಂತೋಷ್ ಲಾಡ್ ನೇಹಾ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ನಾನೂ ಆಕೆಯ ಮನೆಗೆ ಭೇಟಿ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಬಿಜೆಪಿಯಿಂದ ಉಚ್ಛಾಟನೆ: ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದ ಕೆಎಸ್ ಈಶ್ವರಪ್ಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪ್ರದೇಶ: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಢಿಕ್ಕಿ: ಇಬ್ಬರು ಮೃತ್ಯು

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಪುತ್ರ ಕೈಸರ್‌ಗಂಜ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್‌ ಭೂಷಣ್‌ ಸಿಂಗ್‌ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ...