Homeಕರೋನಾ ತಲ್ಲಣಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

"ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ’- ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್

- Advertisement -
- Advertisement -

ಕೊರೊನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಇಡೀ ದೇಶದ ಜನರಿಗೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಂಗಳವಾರ ಸ್ಪಷ್ಟನೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೇಶದ ಇಡೀ ಜನಸಂಖ್ಯೆಗೆ ಲಸಿಕೆ ಹಾಕುವ ಅವಶ್ಯಕತೆಯಿಲ್ಲದಿರಬಹುದು ಎಂದು ಹೇಳಿದ್ದಾರೆ.

“ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಂತಹ ವೈಜ್ಞಾನಿಕ ವಿಚಾರಗಳನ್ನು ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕು, ಒಟ್ಟಾರೆ ಮಾತನಾಡಬಾರದು” ಎಂದು ರಾಜೇಶ್ ಭೂಷಣ್ ತಿಳಿಸಿದರು.

ಆದರೆ ನವೆಂಬರ್ 24 ರಂದು ರಾಜ್ಯಗಳನ್ನುದ್ದೇಶಿಸಿ ಮಾತನಾಡಿದ ದೇಶದ ಪ್ರಧಾನಿ, ದೇಶದ ಪ್ರತಿಯೊಬ್ಬ ಪ್ರಜೆಗೆ ವ್ಯಾಕ್ಸೀನ್ ತಲುಪಲಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ನಡೆದಿದೆ ಎಂದು ಭರವಸೆ ನೀಡಿದ್ದರು. ಸ್ವತಃ ಪ್ರಧಾನಮಂತ್ರಿಗಳ ಕಚೇರಿಯಿಂದ ಬಂದ ಸರ್ಕಾರಿ PIB ಪತ್ರಿಕಾ ಪ್ರಕಟಣೆ ಇದನ್ನು ಹೇಳಿತ್ತು. ಆದರೆ ಈಗ ಇದಕ್ಕೆ ಉಲ್ಟಾ ಹೊಡೆಯುತ್ತಿರುವುದೇಕೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

ಐಸಿಎಂಆರ್ ನ ಡಿಜಿ ಬಾಲರಾಮ್ ಭಾರ್ಗವ ಕೂಡ “ಇದು ಲಸಿಕೆಯ ಪರಿಣಾಮಕಾರಿತ್ವವನ್ನು ಅವಲಂಬಿಸಿರುತ್ತದೆ ಮತ್ತು ವೈರಸ್ ಹರಡುವ ಸರಪಳಿ ಮುರಿಯುವುದು ನಮ್ಮ ಉದ್ದೇಶ. ಸೋಂಕು ಹರಡುವುದನ್ನು ತಡೆಯುವುದು ಸಾಧ್ಯವಾದರೇ ನಾವು ಎಲ್ಲರಿಗೂ ಲಸಿಕೆ ನೀಡಬೇಕಾಗಿಲ್ಲ” ಎಂದಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಯುವಲ್ಲಿ ಮಾಸ್ಕ್‌ಗಳ ಪಾತ್ರವು ಬಹಳ ಮುಖ್ಯವಾಗಿದೆ. ವ್ಯಾಕ್ಸಿನೇಷನ್ ನಂತರವೂ ಮಾಸ್ಕ್‌ಗಳ ಬಳಕೆ ಮುಂದುವರಿಯುತ್ತದೆ. ಸೋಂಕು ಹರಡುವುದನ್ನು ತಡೆಯುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಬಾಲರಾಮ್ ಭಾರ್ಗವ ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಎಲ್ಲರಿಗೂ ಉಚಿತ ಕೊರೊಣಾ ಲಸಿಕೆ ನೀಡುವ ಭರವಸೆ ನೀಡಿತ್ತು.

ಕಳೆದ ಕೆಲ ದಿನಗಳ ಹಿಂದೆ ’2024 ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ನೀಡಲಾಗುವುದು’ ಎಂದು ಕೊರೊನಾ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ, ಆದರ್‌ ಪೂನವಾಲ್ಲಾ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ (HTLS) ಹೇಳಿದ್ದರು. ಆದರೆ ಈಗ ಇದೆಲ್ಲದ್ದಕ್ಕೂ ಉಲ್ಟಾ ಹೊಡೆದಿದ್ದು ಎಲ್ಲರಿಗೂ ಲಸಿಕೆ ಹಾಕುತ್ತೇವೆಂದು ನಾವು ಹೇಳಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.


ಇದನ್ನೂ ಓದಿ: ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...