HomeಮುಖಪುಟPM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

- Advertisement -
- Advertisement -

“ಪಿಎಂ ಕೇರ್ಸ್‌ ನಿಧಿಯ ಲೆಕ್ಕವನ್ನೇ ಕೊಡದವರು ರಾಮಮಂದಿರಕ್ಕಾಗಿ ಸಂಗ್ರಹಿಸುವ ದೇಣಿಗೆಯ ಲೆಕ್ಕ ಕೊಡುತ್ತಾರಾ” ಎಂದು ಜನರು ಪ್ರಶ್ನಿಸುತ್ತಿದ್ದಾರೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಸಾರ್ವಜನಿಕರಿಂದ ಹಣ ಸಂಗ್ರಹಿಸುವವರು ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಪಿಎಂ ಕೇರ್ಸ್ ನಿಧಿಯ ಲೆಕ್ಕವನ್ನೇ ಕೊಡದಿರುವ ಈಗಿನ ಬಿಜೆಪಿ ಸರ್ಕಾರ, ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹಿಸುವ ಹಣದ ಲೆಕ್ಕ ನೀಡುತ್ತಾ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ” ಎಂದು ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

“ರಾಮಮಂದಿರ ನಿರ್ಮಾಣಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಇದೇ ಬಿಜೆಪಿ ಹಿಂದೊಮ್ಮೆ ರಾಮ ಮಂದಿರ ನಿರ್ಮಾಣಕ್ಕಾಗಿ ಇಟ್ಟಿಗೆ-ಹಣ ಸಂಗ್ರಹಿಸಿತ್ತಲ್ಲಾ, ಅದು ಏನಾಯಿತೆಂದು ಯಾರಿಗೂ ಗೊತ್ತಿಲ್ಲ.‌ ಅದರ ಲೆಕ್ಕವನ್ನು ಬಿಜೆಪಿ ಮೊದಲು ಸಾರ್ವಜನಿಕರಿಗೆ ನೀಡಬೇಕಾಗುತ್ತದೆ” ಎಂದು ಆಗ್ರಹಿಸಿದ್ದಾರೆ.

ಇಂದು ನವದೆಹಲಿಗೆ ಭೇಟಿ ನೀಡಿರುವ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ವಿವಾದಿತ‌ ಭೂಮಿಯಲ್ಲಿ ನಿರ್ಮಿಸುವ‌ ಮಂದಿರದ ‌ಬದಲಿಗೆ ಬೇರೆ ಕಡೆ ಅಥವಾ ನಮ್ಮೂರಲ್ಲಿ ನಿರ್ಮಾಣ ಆಗುವ ರಾಮ ಮಂದಿರಕ್ಕೆ ದೇಣಿಗೆ ನೀಡುವೆ. ಬೇರೆ ಯಾವುದೇ ಸ್ಥಳದಲ್ಲಿ ಮಂದಿರ ‌ನಿರ್ಮಿಸಿದರೂ ಹಣ‌ ನೀಡಬಹುದು. ಈಗ ಆರ್‌ಎಸ್ಎಸ್‌ನವರು ಸಂಗ್ರಹಿಸುತ್ತಿರುವ ಹಣಕ್ಕೆ‌ ರಸೀದಿ ಕೊಟ್ಟು, ಲೆಕ್ಕ ನೀಡುತ್ತಾರೇನು?” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

0
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆರೋಪಿಸಿದ್ದ ಆಕೆಯ ತಂದೆ ನಿರಂಜನಯ್ಯ ಹಿರೇಮಠ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಮಾಹಿತಿಯ ಕೊರತೆಯಿಂದ ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು...