HomeUncategorized11 ತಿಂಗಳು ಕಳೆದರೂ ನೇಮಕಾತಿ ಆದೇಶ ನೀಡದ ಸರ್ಕಾರ; ಅನಿರ್ಧಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ ಸಹಾಯಕ ಪ್ರಾಧ್ಯಾಪಕರು

11 ತಿಂಗಳು ಕಳೆದರೂ ನೇಮಕಾತಿ ಆದೇಶ ನೀಡದ ಸರ್ಕಾರ; ಅನಿರ್ಧಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ ಸಹಾಯಕ ಪ್ರಾಧ್ಯಾಪಕರು

- Advertisement -
- Advertisement -

ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿ 11 ತಿಂಗಳು ಕಳೆದರೂ ನೇಮಕಾತಿ ಆದೇಶ ನೀಡುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಅಭ್ಯರ್ಥಿಗಳು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ.

ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ಇಂದಿನಿಂದ (ಜುಲೈ 19, 2024) ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಸತ್ಯಾಗ್ರಹ ಆರಂಭವಾಗಿದ್ದು, ‘ನೇಮಕಾತಿ ಆದೇಶಗಳು, ನೇಮಕಾತಿ ಪತ್ರಗಳು ಮತ್ತು ಸಹಾಯಕ ಪ್ರಾಧ್ಯಾಪಕರ ಕೌನ್ಸೆಲಿಂಗ್ ವೇಳಾಪಟ್ಟಿಯ ಗೆಜೆಟ್ ಹೊರಡಿಸುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾದ್ಯಾಪಕರಾಗಿ 26 ವಿಷಯಗಳ 1242 ಹುದ್ದೆಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಕಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿದ್ದು, ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯ ನಂತರ 1208 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು 02-02-2023ರಂದು ಕೆಇಎ ಪ್ರಕಟಿಸಿದೆ.

ಈ ಅಂತಿಮ ಆಯ್ಕೆಪಟ್ಟಿಯನ್ನು ರಾಜ್ಯ ಸರ್ಕಾರವು ತನ್ನ ರಾಜ್ಯ ಪತ್ರದಲ್ಲಿ ದಿನಾಂಕ:03-11-2023 ರಂದು ಪ್ರಕಟಿಸಿದೆ. ಅದರಂತೆ 1208 ಅಭ್ಯರ್ಥಿಗಳಲ್ಲಿ 1000 ಕ್ಕಿಂತ ಹೆಚ್ಚು ಅಭ್ಯರ್ಥಿಗಳ ಎಲ್ಲ ರೀತಿಯ ನೈಜ ಪರೀಶೀಲನೆ ಮುಕ್ತಾಯವಾಗಿದ್ದು ಇಲಾಖೆಗೆ ಸಲ್ಲಿಕೆಯಾಗಿದೆ. ಅಂತಿಮ ಆಯ್ಕೆಪಟ್ಟಿ ಪ್ರಕಟವಾಗಿ 11 ತಿಂಗಳಾದರೂ ಆಯ್ಕೆಯಾದ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳಿಗೆ ಸರ್ಕಾರವು ನೇಮಕಾತಿ ಆದೇಶ ನೀಡುವಲ್ಲಿ ವಿಳಂಬ ಮಾಡಿದೆ.

ಆಯ್ಕೆಯಾಗಿರುವ ಬಹುತೇಕ ಅಭ್ಯರ್ಥಿಗಳು ಗ್ರಾಮೀಣ ಭಾಗದ ಬಡವರ್ಗದ ನಿರುದ್ಯೋಗಿಗಳಾಗಿದ್ದು, ನೇಮಕಾತಿ ಆದೇಶ ನೀಡುವಲ್ಲಿ ವಿಳಂಬವಾಗಿರುವುದರಿಂದಾಗಿ, ನಾವು ಯಾವುದೇ ಕೆಲಸವಿಲ್ಲದೇ ಮಾನಸಿಕವಾಗಿ ಕುಗ್ಗಿಹೋಗಿದ್ದೇವೆ ಎಂದು ಅಭ್ಯರ್ಥಿಗಳು ಅಸಹಾಯಕತೆ ಹೊರಹಾಕಿದ್ದಾರೆ.

ಇದೀಗ, ನೇಮಕಾತಿ ಆದೇಶ ನೀಡುವಂತೆ ಆಯ್ಕೆಯಾಗಿರುವ ಸಹಾಯಕ ಪ್ರಾಧ್ಯಾಪಕರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಶಾಂತಿಯುತ, ಅಹಿಂಸಾತ್ಮಕ ಸತ್ಯಾಗ್ರಹ ಆರಂಭಿಸಿದ್ದಾರೆ. ಆ ಮೂಲಕ, ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

ಇದನ್ನೂ ಓದಿ; ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...