Homeಮುಖಪುಟಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

- Advertisement -
- Advertisement -

ಕಾಸರಗೋಡಿನ ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಲೋತ್ಸವದ ವೇಳೆ ಗಾಝಾ ನರಮೇಧ ಕುರಿತ ವಿದ್ಯಾರ್ಥಿಗಳ ಮೂಕಾಭಿನಯ ಪ್ರದರ್ಶನವನ್ನು ಶಿಕ್ಷಕರು ತಡೆದಿರುವ ಘಟನೆ ಶುಕ್ರವಾರ (ಅ.3) ನಡೆದಿದ್ದು, ಈ ಬಗ್ಗೆ ತುರ್ತು ತನಿಖೆಗೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಆದೇಶಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದಿರುವ ಸಚಿವ ಶಿವನ್‌ಕುಟ್ಟಿ, “ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ವಿರುದ್ಧ ಕೇರಳವು ಯಾವಾಗಲೂ ದೃಢವಾಗಿ ನಿಂತಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಬೇಟೆಯಾಡುತ್ತಿರುವ ಮಕ್ಕಳೊಂದಿಗೆ ಕೇರಳ ನಿಲ್ಲುತ್ತದೆ” ಎಂದು ತಿಳಿಸಿದ್ದಾರೆ.

“ಪ್ಯಾಲೆಸ್ತೀನ್ ವಿಷಯದ ಕುರಿತ ಮೂಕಾಭಿನಯ ಪ್ರದರ್ಶನವನ್ನು ತಡೆಯಲು ಅಧಿಕಾರ ಕೊಟ್ಟವರು ಯಾರು? ಎಂದು ಪ್ರಶ್ನಿಸಿರುವ ಸಚಿವರು, ಕುಂಬಳೆ ಶಾಲೆಯ ವಿದ್ಯಾರ್ಥಿಗಳಿಗೆ ವೇದಿಕೆಯ ಮೇಲೆ ಮತ್ತೆ ತಮ್ಮ ಮೂಕಾಭಿನಯ ಪ್ರದರ್ಶಿಸಲು ಅವಕಾಶ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಸೇಕರ್ ಅವರು ಘಟನೆಯ ಕುರಿತು ಜಿಲ್ಲಾ ಪೊಲೀಸ್ ಮತ್ತು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಂದ ವರದಿಗಳನ್ನು ಕೇಳಿದ್ದಾರೆ.

ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಕಲೋತ್ಸವ’ವನ್ನು ಶಿಕ್ಷಕರು ಮೂಕಾಭಿನಯ ಪ್ರದರ್ಶನ ತಡೆದ ಹಿನ್ನೆಲೆ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಶಿಕ್ಷಕರ ನಡೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಾದ ಎಂಎಸ್‌ಎಫ್‌ ಮತ್ತು ಎಸ್‌ಎಫ್‌ಐ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿವೆ.

ಇಸ್ರೇಲ್‌ ಬಾಂಬ್ ದಾಳಿಗೆ ಗಾಝಾದ ಅಮಾಯಕ ಕಂದಮ್ಮವೊಂದು ಬಲಿಯಾಗುವುದನ್ನು ಮತ್ತು ಗಾಝಾದ ಮಕ್ಕಳ ನೋವನ್ನು ಮೂಕಾಭಿನಯದ ಮೂಲಕ ವಿದ್ಯಾರ್ಥಿಗಳು ಪ್ರದರ್ಶಿಸುತ್ತಿದ್ದರು. ಅರ್ಧ ಪ್ರದರ್ಶನ ಮುಗಿಯುವಾಗ ಶಿಕ್ಷಕರೊಬ್ಬರು ಹಠಾತ್ ಪರದೆ ಎಳೆಸಿದ್ದಾರೆ. ಆದರೂ, ವಿದ್ಯಾರ್ಥಿಗಳು ಪ್ಯಾಲೆಸ್ತೀನ್‌ ಜೊತೆ ಒಗ್ಗಟ್ಟು ಪ್ರದರ್ಶಿಸುವ ಪೋಸ್ಟರ್ ಮತ್ತು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ್ದಾರೆ.

ಶಿಕ್ಷಕನ ನಡೆ ಖಂಡಿಸಿ ವೇದಿಕೆ ಮುಂಭಾಗದಲ್ಲಿದ್ದ ವಿದ್ಯಾರ್ಥಿಗಳು ಕೂಡ ವೇದಿಕೆ ಬಳಿಗೆ ತೆರಳಿ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ್ದರು.

“ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳು ಮೂಕಾಭಿನಯ ಪ್ರದರ್ಶನ ಮಾಡಿದ್ದಾರೆ. ಅವರು ಜಿಲ್ಲಾ ಕ್ರೀಡಾಕೂಟ ಇದ್ದ ಕಾರಣ ಒಂದು ದಿನ ಮೊದಲೇ ಈ ಪ್ರದರ್ಶನ ನೀಡಲು ಅವಕಾಶ ಕೇಳಿದ್ದರು. ಈ ಪ್ರದರ್ಶನದಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದರು ಮತ್ತು ಮೃದು ಆಟಿಕೆ, ದುಃಖದಲ್ಲಿರುವ ಪ್ಯಾಲೆಸ್ತೀನ್ ತಾಯಿಯ ಚಿತ್ರದಂತಹ ವಸ್ತುಗಳನ್ನು ಬಳಸಿದ್ದರು. ಇವುಗಳು ಮೂಕಾಭಿನಯ ಪ್ರದರ್ಶನ ಸ್ಪರ್ಧೆಯ ನಿಯಮಗಳಿಗೆ ವಿರುದ್ದವಾಗಿ” ಎಂದು ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ವಿ.ಆರ್ ಸಮರ್ಥಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಆಯೋಜಕರು ಆರಂಭದಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ಅವಕಾಶ ನೀಡಿದ್ದರು. ಆದರೆ, ಭಾವಚಿತ್ರವನ್ನು ಪ್ರದರ್ಶಿಸಿದಾಗ ಪರದೆಯನ್ನು ಇಳಿಸಲಾಯಿತು, ಇದು ವಿವಾದಕ್ಕೆ ಕಾರಣವಾಯಿತು ಎಂದು ವರದಿಗಳು ಹೇಳಿವೆ.

ಶಾಲೆಯಲ್ಲಿ ನಡೆದ ಘಟನೆಯನ್ನು ತಪ್ಪಾಗಿ ಚಿತ್ರಿಸಲಾಗಿದೆ. ಅದನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿ ಸಂಘಟನೆಗಳು ಮತ್ತು ಸರ್ಕಾರ ಪ್ರತಿಕ್ರಿಯಿಸಿದೆ ಎಂದು ಶಾಲೆಯ ಶಿಕ್ಷಕರು ಹೇಳಿದ್ದಾರೆ.

ಮುಸ್ಲಿಂ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ವಿದ್ಯಾರ್ಥಿ ಒಕ್ಕೂಟದ (ಎಂಎಸ್‌ಎಫ್‌) ಸದಸ್ಯರು ಶುಕ್ರವಾರ ಸಂಜೆಯೇ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪರದೆ ಇಳಿಸಿದ ಇಬ್ಬರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಪೊಲೀಸರು ಮಧ್ಯಪ್ರವೇಶಿಸಿದ್ದರು.

ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವವರೆಗೆ ಶಾಲೆಯಿಂದ ಕದಲುವುದಿಲ್ಲ ಎಂದು ಎಂಎಸ್‌ಎಫ್ ನಾಯಕರು ಪಟ್ಟು ಹಿಡಿದು ಕುಳಿತಿದ್ದರು. ಪರಿಸ್ಥಿತಿ ಹತೋಟಿಗೆ ತರಲು ಕುಂಬಳೆ ಪೊಲೀಸರು ಕೆಲ ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಕೂಡ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು.

ನಂತರ, ಕೇರಳದ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ವಿಭಾಗವಾದ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಎಸ್‌ಡಿಪಿಐ ಕೂಡ ಶಾಲೆಯ ಹೊರಗೆ ಪ್ರತಿಭಟನೆ ಹಮ್ಮಿಕೊಂಡಿತ್ತು.

ಆರೋಪಿ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಕರು ಮತ್ತು ಪೋಷಕರ ಒಕ್ಕೂಟ (ಪಿಟಿಎ) ಅಧ್ಯಕ್ಷರು ತಿಳಿಸಿದ್ದಾರೆ. ಮೂಕಾಭಿನಯ ಸೇರಿದಂತೆ ಇತರ ಸ್ಪರ್ಥೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ದೇಶದ್ರೋಹದ ಕೃತ್ಯವಲ್ಲ, ಪ್ಯಾಲೆಸ್ತೀನ್‌ ಜೊತೆಗಿನ ಒಗ್ಗಟ್ಟಿನ ಸಂಕೇತವಾಗಿದೆ” ಎಂದು ಒತ್ತಿ ಹೇಳಿರುವ ಪಿಟಿಎ ಅಧ್ಯಕ್ಷರು, ಯುವಜನೋತ್ಸವಗಳು ಪ್ರಸ್ತುತ ಮತ್ತು ಸಮಕಾಲೀನ ವಿಷಯಗಳನ್ನು ಒಳಗೊಂಡಿರುತ್ತವೆ ಎಂದಿದ್ದಾರೆ.

ಕುಂಬಳೆ ಘಟನೆಯ ಒಂದು ದಿನ ಮೊದಲು ಕಣ್ಣೂರಿನಲ್ಲಿ ತಲಶ್ಶೇರಿಯ ಅಂಚರಕಂಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು, ಕೋಲ್ಕಲಿ (ಜಾನಪದ ಕಲೆ) ಪ್ರದರ್ಶನದ ವೇಳೆ ಪ್ಯಾಲೆಸ್ತೀನ್‌ ಪರ ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕಾಗಿ ಅವರ ಪ್ರದರ್ಶನವನ್ನು ಮಧ್ಯದಲ್ಲಿಯೇ ನಿಲ್ಲಿಸಲಾಗಿತ್ತು ಎಂದು ವರದಿಯಾಗಿದೆ.

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...