Homeಮುಖಪುಟಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಆದೇಶ : ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ

ಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಆದೇಶ : ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ

- Advertisement -
- Advertisement -

ಕಾಶ್ಮೀರದ ಪಿರ್ ಪಂಜಾಲ್ ಕಣಿವೆಯ ಪೂಂಚ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಯೋಜಿಸಿದ್ದ ತಿರಂಗಾ ರ‍್ಯಾಲಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕಳುಹಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಸರ್ಕಾರ ಆದೇಶಿಸಿರುವುದಕ್ಕೆ ರಾಜಕೀಯ ಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಪೂಂಚ್‌ನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ನೀಡಿದ್ದ ಆದೇಶದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 23ರಂದು ಎಬಿವಿಪಿ ಆಯೋಜಿಸಿದ್ದ ರ‍್ಯಾಲಿಗೆ ಅನುಮತಿ ನೀಡಲಾಗಿತ್ತು. ಅಲ್ಲದೆ, ಕೆಲ ಸರ್ಕಾರಿ ಪ್ರೌಢ ಶಾಲೆಗಳು, ಪೂಂಚ್‌ನ ಕ್ರೈಸ್ಟ್ ಶಾಲೆ ಮತ್ತು ರಝಾವುಲ್ ಉಲೂಮ್ ಹೈಯರ್ ಸೆಕೆಂಡರಿ ಶಾಲೆಗಳಿಗೆ ’40-50′ ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರನ್ನು ಕಳುಹಿಸಲು ನಿರ್ದೇಶಿಸಲಾಗಿತ್ತು ಎಂದು ವರದಿಗಳು ಹೇಳಿವೆ.

ಸರ್ಕಾರದ ಆದೇಶವು ರಾಜಕೀಯ ಪಕ್ಷಗಳ ಟೀಕೆಗೆ ಗುರಿಯಾಗಿದೆ. “ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರದ ಅಡಿಯಲ್ಲಿ ಜಮ್ಮು ಕಾಶ್ಮೀರದ ಶಿಕ್ಷಣ ಇಲಾಖೆಯು ಪೂಂಚ್‌ನಾದ್ಯಂತ ಖಾಸಗಿ ಮತ್ತು ಸರ್ಕಾರಿ ಶಾಲಾ ಮಕ್ಕಳು ಎಬಿವಿಪಿ ಆಯೋಜಿಸಿರುವ ರ‍್ಯಾಲಿಯಲ್ಲಿ ಭಾಗವಹಿಸುವುದನ್ನು ಕಡ್ಡಾಯಗೊಳಿಸಿತ್ತು. ಇದು ಮುಸ್ಲಿಂ ವಿರೋಧಿ ಧರ್ಮಾಂಧತೆಯನ್ನು ಸಾಮಾನ್ಯಗೊಳಿಸುತ್ತದೆ. ವಿದ್ಯಾರ್ಥಿಗಳನ್ನು ಸೈದ್ಧಾಂತಿಕ ಕಾರ್ಯಕ್ರಮಗಳಿಗೆ ಹಾಜರಾಗುವಂತೆ ಒತ್ತಾಯಿಸುವ ಮೂಲಕ ಶಿಕ್ಷಣವನ್ನು ಪ್ರಚಾರ ಸಾಧನವಾಗಿ ಬಳಸುವುದು ಸ್ವೀಕಾರಾರ್ಹವಲ್ಲ” ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕಿ ಇಲ್ತಿಜಾ ಮುಫ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ವಿದ್ಯಾರ್ಥಿಗಳು ಎಬಿವಿಪಿ ರ‍್ಯಾಲಿಯಲ್ಲಿ ಭಾಗವಹಿಸಬೇಕೆಂಬ ಆದೇಶ ಅತ್ಯಂತ ಕಳವಳಕಾರಿ ಮತ್ತು ಸ್ವೀಕಾರಾರ್ಹವಲ್ಲ” ಎಂದು ಜೆ & ಕೆ ವಿದ್ಯಾರ್ಥಿ ಸಂಘದ ವಕ್ತಾರರು ಹೇಳಿದ್ದಾರೆ. ಎಬಿವಿಪಿಯದ್ದು ಗಣರಾಜ್ಯೋತ್ಸವ ಆಚರಣೆಗಿಂತ ಹೆಚ್ಚಾಗಿ ಸೈದ್ಧಾಂತಿಕ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಯಾವ ರಾಜಕೀಯ ಅಥವಾ ಸೈದ್ಧಾಂತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ನಿರ್ದೇಶಿಸುವ ಹಕ್ಕು ಸರ್ಕಾರಕ್ಕೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣವು ತಟಸ್ಥವಾಗಿರಬೇಕು, ಬಲವಂತ ಅಥವಾ ಬಾಹ್ಯ ಪ್ರಭಾವದಿಂದ ಮುಕ್ತವಾಗಿರಬೇಕು. ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ನಿರ್ಧರಿಸುವ ಸ್ವಾತಂತ್ರ್ಯವನ್ನು ನೀಡಬೇಕು. ಇಂತಹ ಆದೇಶಗಳನ್ನು ಹೊರಡಿಸುವ ಮೂಲಕ ಸರ್ಕಾರವು ವಿದ್ಯಾರ್ಥಿಗಳ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ. ಮಾತ್ರವಲ್ಲದೆ ಶಿಕ್ಷಣ ಸಂಸ್ಥೆಗಳಲ್ಲಿ ರಾಜಕೀಯ ಧ್ರುವೀಕರಣವನ್ನು ಪ್ರೋತ್ಸಾಹಿಸುತ್ತಿದೆ” ಎಂದು ವಿದ್ಯಾರ್ಥಿ ಸಂಘ ಹೇಳಿದೆ.

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್‌ ಬೆಂಬಲದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚಿಸಿದೆ. ಉಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿದ್ದಾರೆ. ಹೀಗಿರುವಾಗ, ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳನ್ನು ಕಳುಹಿಸುವಂತೆ ಆದೇಶಿಸಿರುವುದು ಹಲವರನ್ನು ಆಶ್ಚರ್ಯಗೊಳಿಸಿದೆ.

ಮಧ್ಯಪ್ರದೇಶ | ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ 17 ಪಟ್ಟಣಗಳಲ್ಲಿ ಮದ್ಯ ಮಾರಾಟ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...