Homeಕರ್ನಾಟಕಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಬಿಜೆಪಿ ವಿರುದ್ಧ ಮತ ಚಲಾಯಿಸುವ ಅಲ್ಪಸಂಖ್ಯಾತ, ದಲಿತ ಮತ್ತು ಹಿಂದುಳಿದ ಸಮುದಾಯಗಳ ಹೆಚ್ಚಿನ ಸಂಖ್ಯೆಯ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಬಿಜೆಪಿ ಸರ್ಕಾರ ಕೈಬಿಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಚುನಾವಣೆಯಲ್ಲಿ ಮೇಲುಗೈ ಸಾಧಿಸಲು ಈ ರೀತಿ ಮಾಡಲಾಗಿದೆ. ಹೀಗೆ ಡಿಲೀಟ್ ಮಾಡಲಾದ ಮತದಾರರ ಸಂಖ್ಯೆ ಲಕ್ಷದಷ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

“ನಾವು ಮುಂದಿನ ದಿನಗಳಲ್ಲಿ (ಡಿಲೀಟ್ ಮಾಡಲಾದ ಮತದಾರರ) ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ನಮ್ಮ ಬಳಿ ಅಧಿಕೃತ ಪಟ್ಟಿ ಇದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನೇಕ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬೂತ್ ಮಟ್ಟದಲ್ಲಿ ಮತದಾರರನ್ನು ಮೌಲ್ಯಮಾಪನ ಮಾಡಲು ಮತ್ತು ತೆಗೆದುಹಾಕಲಾದ ಹೆಸರುಗಳನ್ನು ಗುರುತಿಸಲು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದಿದ್ದಾರೆ.

ರಾಜ್ಯಾದ್ಯಂತ ಮತ್ತು ಬಿಬಿಎಂಪಿಯ 243 ವಾರ್ಡ್‌ಗಳಲ್ಲಿ ವಿಶೇಷವಾಗಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು ಮತ್ತು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಅನೇಕ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಬಿಎಂಪಿ ವಾರ್ಡ್‌ಗಳ ಮೀಸಲಾತಿ ಪಟ್ಟಿಯನ್ನು ಕಾಂಗ್ರೆಸ್‌ಗೆ ಹಿನ್ನಡೆಯಾಗುವಂತೆ ಸಿದ್ಧಪಡಿಸಲಾಗಿದೆ. ಕರಡು ಮೀಸಲಾತಿ ಪಟ್ಟಿಯ ವಿರುದ್ಧ ಸಲ್ಲಿಸಲಾದ 3,000 ಆಕ್ಷೇಪಣೆಗಳಲ್ಲಿ ಯಾವುದನ್ನೂ ಪರಿಗಣಿಸಲಾಗಿಲ್ಲ ಎಂದು ದೂರಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ವಾರ್ಡ್‌ಗಳಲ್ಲಿ 9, ಜಯನಗರದ ಒಂಬತ್ತರಲ್ಲಿ 8, ಬಿಟಿಎಂ ಲೇಔಟ್‌ನ ಎಲ್ಲಾ 8 ಮತ್ತು ಗಾಂಧಿನಗರದ 7 ವಾರ್ಡ್‌ಗಳು ಮಹಿಳೆಯರಿಗೆ ಮೀಸಲಿಡಲಾಗಿದೆ. ಕಾಂಗ್ರೆಸ್ ಪ್ರತಿನಿಧಿಸುವ ಕ್ಷೇತ್ರಗಳ 93 ವಾರ್ಡ್‌ಗಳಲ್ಲಿ 76 ಮಹಿಳೆಯರಿಗೆ ಮೀಸಲಿಡಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

“ಮಹಿಳೆಯರಿಗೆ ನೀಡುವ ಮೀಸಲಾತಿಯನ್ನು ನಾವು ವಿರೋಧಿಸುವುದಿಲ್ಲ. ಅವರನ್ನು ರಾಜಕೀಯವಾಗಿ ಸಬಲೀಕರಣಗೊಳಿಸಲು ಬದ್ಧರಾಗಿದ್ದೇವೆ. ಆದರೆ ಮಹಿಳೆಯರಿಗೆ ನೀಡುವ ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕು. ನಿರ್ದಿಷ್ಟ ಕ್ಷೇತ್ರಗಳಲ್ಲಿ ಮಾತ್ರ ಕೇಂದ್ರೀಕರಿಸುವುದು ಅನ್ಯಾಯ” ಎಂದು ಸ್ಪಷ್ಟಪಡಿಸಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ರಾಜ್ಯ ಕಾಂಗ್ರೆಸ್ ಯೋಜಿಸಿರುವ ‘ಸ್ವಾತಂತ್ರ್ಯ ಮೆರವಣಿಗೆ’ಯಲ್ಲಿ ಭಾಗವಹಿಸಲು 29,000 ಜನರು ನೋಂದಾಯಿಸಿಕೊಂಡಿದ್ದಾರೆ ಎಂದಿರುವ ಅವರು, ಭಾಗವಹಿಸುವವರು ಸಾರ್ವಜನಿಕ ಸಾರಿಗೆಯಲ್ಲಿ ಬರಬೇಕೆಂದು ಕೋರಿದ್ದಾರೆ

ಆಗಸ್ಟ್ 15 ರಂದು ಬೆಂಗಳೂರಿನಲ್ಲಿ ಮೆಟ್ರೋ ರೈಲು ಬಳಕೆದಾರರಿಗೆ 50% ರಿಯಾಯತಿ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...