Homeಕರ್ನಾಟಕಕೆಪಿಎಸ್‌ಸಿ ನೇಮಕಾತಿ ಜಟಾಪಟಿ: ಕಾರ್ಯದರ್ಶಿ ಲತಾ ಕುಮಾರಿಗೆ 10 ದಿನ ರಜೆ ನೀಡಿದ ಸರ್ಕಾರ

ಕೆಪಿಎಸ್‌ಸಿ ನೇಮಕಾತಿ ಜಟಾಪಟಿ: ಕಾರ್ಯದರ್ಶಿ ಲತಾ ಕುಮಾರಿಗೆ 10 ದಿನ ರಜೆ ನೀಡಿದ ಸರ್ಕಾರ

- Advertisement -
- Advertisement -

ಕೆಪಿಎಸ್‌ಸಿ ಅಧ್ಯಕ್ಷ, ಕೆಲ ಸದಸ್ಯರು ಹಾಗೂ ಕಾರ್ಯದರ್ಶಿ ಕೆ.ಎಸ್‌ ಲತಾ ಕುಮಾರಿ ನಡುವೆ ಜಟಾಪಟಿಯ ಮಧ್ಯೆ, ಲತಾ ಕುಮಾರಿ ಅವರಿಗೆ ಸರ್ಕಾರ 10 ದಿನಗಳ ರಜೆ ನೀಡಿದೆ.

ಕೆ.ಎಸ್.ಲತಾ ಕುಮಾರಿ ಅವರಿಗೆ ಫೆಬ್ರವರಿ 7ರಿಂದ 17ರವರೆಗೆ ಗಳಿಕೆ ರಜೆ ನೀಡಲಾಗಿದೆ. ಈ ಅವಧಿಗೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್ ಕುಮಾರ್ ಕೆ ಅವರನ್ನು ಕೆಪಿಎಸ್‌ಸಿ ಪ್ರಭಾರಿ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಿ ಡಿಪಿಎಆರ್ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

“ಕೆಪಿಎಸ್‌ಸಿ ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗದ ರೀತಿಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಗೆ ಅರಿವು ಮೂಡಿಸಬೇಕು. ವಿವಿಧ ಹುದ್ದೆಗಳಿಗೆ ನಿಯಮಾನುಸಾರ ಆಯ್ಕೆ ಪೂರ್ಣಗೊಳಿಸಲು ಸೂಚನೆ ನೀಡಬೇಕು” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೂಲಕ ರಾಜ್ಯಪಾಲರಿಗೆ ಲತಾ ಕುಮಾರಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

ಕೆಪಿಎಸ್‌ಸಿಯ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್‌, ಕೆಲ ಸದಸ್ಯರು ಮತ್ತು ಲತಾಕುಮಾರಿ ಅವರ ನಡುವೆ ಜಟಾಪಟಿ ನಡೆಯುತ್ತಿರುವ ಮಧ್ಯೆಯೇ ಲತಾ ಕುಮಾರಿ ಅವರಿಗೆ ಸರ್ಕಾರ ರಜೆ ನೀಡಿ ಕಳುಹಿಸಿದೆ.

ಏನಿದು ಕೆಪಿಎಸ್‌ಸಿ ಆಂತರಿಕ ಕಲಹ?

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು ಆಯೋಗದ ಕಾರ್ಯದರ್ಶಿ ಲತಾ ಕುಮಾರಿ ಸರ್ಕಾರದ ನಿಯಮ ಮತ್ತು ಆಯೋಗದ ನಿರ್ಣಯಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪ ಎಸಗುತ್ತಿದ್ದಾರೆ. ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಕಾರ್ಯದರ್ಶಿ ಲತಾ ಕುಮಾರಿ ಅವರು, ಅಧ್ಯಕ್ಷರು ಮತ್ತು ಹಾಗೂ ಕೆಲ ಸದಸ್ಯರ ವಿರುದ್ದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅಧ್ಯಕ್ಷ ಶಿವಶಂಕರಪ್ಪ ಅವರು ತನ್ನ ವೈಯುಕ್ತಿಕ ಕಾರಣಕ್ಕೆ ಆಯೋಗದ ಹಣ ಬಳಸಿಕೊಳ್ಳಲು ಯತ್ನಿಸಿದ್ದಾರೆ. ಇದಕ್ಕೆ ತಡೆಯಾಗಿದ್ದ ಆಯೋಗದ ಕಾನೂನು ಕೋಶದ ಮುಖ್ಯಸ್ಥರಾಗಿದ್ದ ಎಸ್‌.ಹೆಚ್‌ ಹೊಸಗೌಡರ್ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿದ್ದಾರೆ.

ಕೋರಂ ಇಲ್ಲದೆ ನೇಮಕಾತಿಗೆ ಅನುಮೋದನೆ?

ಕಳೆದ ವಾರ ಕೆ.ಎಸ್‌ ಲತಾ ಕುಮಾರಿ ಅವರು ಆಯೋಗದ ಸಭೆ ನಡೆಸಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದ ವಿವಿಧ ಇಲಾಖೆಗಳ ಒಟ್ಟು 666 ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಗೆ ಅನುಮೋದನೆ ಪಡೆದುಕೊಂಡಿದ್ದಾರೆ. ಆಯೋಗದ ಹಿರಿಯ ಸದಸ್ಯ ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ನೇತೃತ್ವದಲ್ಲಿ 4 ಸದಸ್ಯರ ಗುಂಪು ಸಭೆ ನಡೆಸಿತ್ತು. ಇದು ಅಧ್ಯಕ್ಷರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬೆಳವಣಿಗೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು, ನಾಲ್ವರು ಸದಸ್ಯರ ಗುಂಪು ಸಭೆ ನಡೆಸಿರುವುದು ಮತ್ತು ನೇಮಕಾತಿ ಪಟ್ಟಿಗೆ ಅನುಮೋದನೆ ನೀಡಿರುವುದು ಕಾನೂನು ಬಾಹಿರ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಕೇಂದ್ರದ ವಿರುದ್ದ ‘ದೆಹಲಿ ಚಲೋ’ : ರಾಜ್ಯ ಸರ್ಕಾರದಿಂದ ‘ನನ್ನ ತೆರಿಗೆ ನನ್ನ ಹಕ್ಕು’ ಹೋರಾಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...