Homeಮುಖಪುಟವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರ: ವರದಿ

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರ: ವರದಿ

- Advertisement -
- Advertisement -

ಯಾವುದೇ ಭೂಮಿಯನ್ನು ತನ್ನ ಸ್ವಂತ ಆಸ್ತಿ ಎಂದು ಘೋಷಿಸುವ ವಕ್ಫ್ ಮಂಡಳಿಯ ಪರಮಾಧಿಕಾರವನ್ನು ಕಡಿತಗೊಳಿಸುವುದು ಸೇರಿದಂತೆ ವಕ್ಫ್ ಕಾಯ್ದೆಯಲ್ಲಿ ಹಲವಾರು ತಿದ್ದುಪಡಿಗಳನ್ನು ತರುವ ಮಸೂದೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಮಸೂದೆಯು ವಕ್ಫ್ ಕಾಯ್ದೆಯಲ್ಲಿ ಸುಮಾರು 40 ತಿದ್ದುಪಡಿಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ ಎಂದು ವರದಿಗಳು ತಿಳಿಸಿವೆ.

ಕರಡು ಮಸೂದೆಯು ಪ್ರಸ್ತಾಪಿಸಿದ ಪ್ರಮುಖ ತಿದ್ದುಪಡಿಗಳಲ್ಲಿ ವಕ್ಫ್ ಬೋರ್ಡ್‌ಗಳ ಪುನರ್‌ ರಚನೆ, ಮಂಡಳಿಗಳ ಸಂಯೋಜನೆಯನ್ನು ಬದಲಾಯಿಸುವುದು, ಮಂಡಳಿಯು ವಕ್ಫ್‌ ಆಸ್ತಿ ಎಂದು ಘೋಷಿಸುವ ಮೊದಲು ಭೂಮಿಯ ಪರಿಶೀಲನೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಕಾಯ್ದೆಯ ಕೆಲವು ಷರತ್ತುಗಳನ್ನು ರದ್ದುಗೊಳಿಸುವುದು ಸೇರಿದೆ.

ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಬದಲಾಯಿಸುವುದು ಮತ್ತು ಅವುಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು ಸೆಕ್ಷನ್ 14ಕ್ಕೆ ತಿದ್ದುಪಡಿ ತರುವುದು ಮತ್ತು ರಾಜ್ಯ ವಕ್ಫ್ ಮಂಡಳಿಗಳು ತನ್ನದೆಂದು ಹೇಳಿಕೊಂಡಿರುವ ವಿವಾದಿತ ಭೂಮಿಯನ್ನು ಹೊಸದಾಗಿ ಪರಿಶೀಲಿಸಲು ಮಸೂದೆಯು ಪ್ರಸ್ತಾಪಿಸಿದೆ ಎಂದು ತಿಳಿದು ಬಂದಿದೆ.

ದೆಹಲಿ ವಕ್ಫ್ ಬೋರ್ಡ್ ತನ್ನದೆಂದು ಹೇಳಿಕೊಂಡಿದ್ದ123 ಆಸ್ತಿಗಳ ಭೌತಿಕ ತಪಾಸಣೆಯನ್ನು ಕೇಂದ್ರ ಸರ್ಕಾರವು ನಡೆಸಬಹುದು ಎಂದು ಕಳೆದ ವರ್ಷ ಮೇನಲ್ಲಿ ದೆಹಲಿ ಹೈಕೋರ್ಟ್‌ ಆದೇಶಿಸಿತ್ತು. ಅದರ ನಂತರ, ಕಳೆದ ವರ್ಷ ಆಗಸ್ಟ್‌ನಲ್ಲಿ, ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಈ ಎಲ್ಲಾ ಆಸ್ತಿಗಳಿಗೆ ನೋಟಿಸ್ ನೀಡಿತ್ತು.

ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ತಮಿಳುನಾಡಿನ ಒಂದು ಪ್ರಕರಣ ಸಮರ್ಥಿಸುತ್ತದೆ ಎಂದಿರುವ ವರದಿಗಳು, ಸೆಪ್ಟೆಂಬರ್ 2022ರಲ್ಲಿ ತಮಿಳುನಾಡು ವಕ್ಫ್ ಮಂಡಳಿಯು ಬಹುಪಾಲು ಹಿಂದೂ ಜನಸಂಖ್ಯೆಯನ್ನು ಹೊಂದಿರುವ ತಿರುಚೆಂದೂರೈ ಎಂಬ ಸಂಪೂರ್ಣ ಗ್ರಾಮದ ಮಾಲೀಕತ್ವ ತನ್ನದೆಂದು ಹೇಳಿತ್ತು ಎಂದಿದೆ.

ಪ್ರಸ್ತುತ, ದೇಶದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 30 ವಕ್ಫ್ ಮಂಡಳಿಗಳಿವೆ. 1995ರಲ್ಲಿ ವಕ್ಫ್ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಅದಕ್ಕೆ 2013ರಲ್ಲಿ ಕೆಲ ತಿದ್ದುಪಡಿ ತರಲಾಗಿದೆ. ಬಿಜೆಪಿ ಮತ್ತು ಸಂಘಪರಿವಾರ ವಕ್ಫ್‌ ಕಾಯ್ದೆ ಮತ್ತು ಮಂಡಳಿಗಳನ್ನು ವಿರೋಧಿಸುತ್ತಾ ಬಂದಿವೆ.

ಬದಲಾವಣೆ ಒಪ್ಪಲು ಸಾಧ್ಯವಿಲ್ಲ : ವೈಯಕ್ತಿಕ ಕಾನೂನು ಮಂಡಳಿ

ವಕ್ಫ್‌ ಕಾಯ್ದೆಗೆ ತಿದ್ದುಪಡಿ ತಂದು ವಕ್ಫ್ ಮಂಡಳಿಗಳ ಅಧಿಕಾರವನ್ನು ಕಡಿತಗೊಳಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಭಾನುವಾರ ಹೇಳಿದೆ.

ವಕ್ಫ್ ಮಂಡಳಿಗೆ ಇರುವ ಕಾನೂನಿನ ಮಾನ್ಯತೆಯನ್ನು ಹಾಳುಮಾಡುವ ತಿದ್ದುಪಡಿಗಳನ್ನು ಎಂದಿಗೂ ಒಪ್ಪಲು ಸಾಧ್ಯವಿಲ್ಲ ಎಂದು ಮಂಡಳಿಯ ವಕ್ತಾರ ಸೈಯದ್ ಖಾಸಿಂ ರಸೂಲ್ ಇಲ್ಯಾಸ್ ತಿಳಿಸಿದ್ದಾರೆ.

ಇದನ್ನೂ ಓದಿ : ಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು : ಕಾರ್ಯಪಡೆ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...