Homeಕರ್ನಾಟಕ'ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

‘ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಕೇಂದ್ರದ ಬಿಜೆಪಿ ಸರ್ಕಾರ 'ಬಲತ್ಕಾರಿಗಳ ಬಚಾವು' ಮಾಡುವ ಸರ್ಕಾರವಾಗಿದೆ

- Advertisement -
- Advertisement -

“ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ. ರೇವಣ್ಣ ಕುಟುಂಬವು ರಾಜಕೀಯ, ಹಣ ಬಲದಿಂದ ನಡೆಸುವ ಅವ್ಯವಹಾರಗಳಿಗೆ, ದರ್ಪಕ್ಕೆ ಇನ್ನು ಉಳಿಗಾಲವಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ‘ಬಲತ್ಕಾರಿಗಳ ಬಚಾವು’ ಮಾಡುವ ಸರ್ಕಾರವಾಗಿದೆ. ಆ ಸರ್ಕಾರವನ್ನು ಜೂನ್ 4ರ ನಂತರ ಕೆಳಗಿಸಬೇಕು” ಎಂದು ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಹೇಳಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, “ಶತಮಾನಗಳಿಂದಲೂ ಮಹಿಳಾ ಸಂಘಟನೆ ಸಂಘರ್ಷ ಮಾಡುತ್ತಿದೆ. ಸಂವಿಧಾನ ಜಾರಿಯಾದ ನಂತರವೂ ದೇಶದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಇದೆ. ಭಾರತದಲ್ಲಿ ಸಾವಂತವಾದ, ಪುರಷವಾದ ಬೇರೂರಿದೆ. ಜೊತೆಗೆ, ಬಂಡವಾಳ ಮತ್ತು ಮತೀಯವಾದವೂ ಸೇರಿಕೊಂಡಿದೆ. ಇವುಗಳನ್ನು ಒಡೆಯದಿದ್ದರೆ, ನಮಗಾರಿಗೂ ಉಳಿವಿಲ್ಲ” ಎಂದರು.

“ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ರೇವಣ್ಣನನ್ನು ಬಂಧಿಸಿ, ಜೈಲಿಗಟ್ಟಬೇಕು. ಅವರಿಗೆ ಓನ್ಲೀ ಜೈಲ್, ನೋ ಬೇಲ್’ (ಜೈಲು ಮಾತ್ರ, ಜಾಮೀನು ಇಲ್ಲ) ಆಗಬೇಕು. ಇದೇ ನಮ್ಮ ಪ್ರಮುಖ ಒತ್ತಾಯ. ರೇವಣ್ಣ ಕುಟುಂಬ ತನಿಖೆಯಲ್ಲಿ ತಮ್ಮ ಪ್ರಭಾವವನ್ನು ಬಳಸಬಹುದು. ಕರ್ನಾಟಕ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು. ಅವರನ್ನು ಜೈಲಿಗಟ್ಟಬೇಕು” ಎಂದು ಒತ್ತಾಯಿಸಿದರು.

“ಸಂತ್ರಸ್ತ ಮಹಿಳೆಯರೊಂದಿಗೆ ನಾವಿದ್ದೇವೆ. ಅವರೊಂದಿಗೆ ಕೊನೆವರೆಗೂ ಹೋರಾಡುತ್ತೇವೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ಸಂತ್ರಸ್ತೆಯರು ಎದೆಗುಂದಬೇಕಿಲ್ಲ” ಎಂದು ಬಲಿಪಶುಗಳಿಗೆ ಧೈರ್ಯ ತುಂಬುವ ಮಾತನಾಡಿದರು.

“ಸರ್ಕಾರಿ ಅಧಿಕಾರಿಗಳು, ಕಾರ್ಯಕರ್ತರು ಅಸಹಾಯಕ ಹೆಣ್ನುಮಕ್ಕಳು ಸಣ್ಣ ಪುಟ್ಟ ಸಹಾಯ ಕೇಳಲು ಬಂದಾಗ ಅವರ ಮೇಲೆ ರೇವಣ್ಣ ಮತ್ತು ಆತನ ಪುತ್ರ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಪರಿಹಾರ ನೀಡಬೇಕು. ಆಪ್ತ ಸಮಾಲೋಚನೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು:

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್ ಸತ್ಯಾಗ್ರಹ. ಎರಡು, ದಂಡಿ ಉಪ್ಪಿನ ಸತ್ಯಾಗ್ರಹ. ಎರಡನೆಯದು, 2020-21ರ ರೈತ ಹೋರಾಟ. ಇವು ದೇಶ ಕಂಡ ಐತಿಹಾಸಿಕ ಹೋರಾಟಗಳು. ರೈತರು ಒಂದು ವರ್ಷಗಳ ನಿರಂತರ ಹೋರಾಟ ಮಾಡಿ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದರು. ಇವತ್ತು, ಹಾಸನದಲ್ಲಿ ನಡೆದಿರುವ ಈ ಲೈಂಗಿಕ ಹಗರಣದ ವಿರುದ್ಧದ ಹೋರಾಟವು ಅಂತಹ ಐತಿಹಾಸಿಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಹೋರಾಟಗಾರ ಎಸ್.ಆರ್ ಹಿರೇಮಠ್ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನ ಕಡೆಗೆ’ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಹಾಸನವನ್ನು ತಮ್ಮ ‘ತಮ್ಮ ರಿಪಬ್ಲಿಕ್’ ಮಾಡಿಕೊಂಡು, ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು. ಪಾಳೆಗಾರಿಕೆಯನ್ನು ಕೊನೆಗಾಣಿಸಲು ವ್ಯವಸ್ಥಿತ ಹೋರಾಟ ನಡೆಬೇಕು. ಬಳ್ಳಾರಿಯ ಪಾಳೆಗಾರಿಕೆಯನ್ನು ಮುರಿದಂತೆ, ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಮುಗಿಸಬೇಕು” ಎಂದರು.

“ಅತ್ಯಾಚಾರ, ಅನ್ಯಾಯ ಮಾಡಿದವರ ವಿರುದ್ಧ ಸಂತ್ರಸ್ತ ಮಹಿಳೆಯರು ಮುಂದೆ ಬಂದು ಹೋರಾಟ ನಡೆಸಬೇಕು. ತಮ್ಮ ಮೇಲಾದ ದೌರ್ಜನ್ಯಗಳ ವಿರುದ್ಧ ಗಟ್ಟಿಯಾಗಿ ಮಾತನಾಡಬೇಕು. ಸರ್ಕಾರ ನಡೆಸುತ್ತಿರುವವರು ಹಾಸನಕ್ಕೆ ಬರಬೇಕು. ಸಂತ್ರಸ್ತೆಯರಿಗೆ ಧೈರ್ಯ ತುಂಬಬೇಕು. ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ ದಾಖಲಿಸಬೇಕು: 

ಪ್ರಜ್ವಲ್ ರೇವಣ್ಣ ಅವರನ್ನು ಭಯೋತ್ಪಾದಕನಾಗಿ ಹೆಸರಿಸಬೇಕು. 400 ಮಂದಿ ಸಂತ್ರಸ್ತೆಯರಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ಗಳನ್ನು ದಾಖಲಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಸಪ್ರತಿ ಸಂತ್ರಸ್ತೆಯರಿಗೆ ₹1 ಕೋಟಿ ಪರಿಹಾರ ನೀಡಬೇಕು. ರೇವಣ್ಣನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಹೈಕೋರ್ಟಿನಲ್ಲಿ ಜಾಮೀನನ್ನು ಪ್ರಶ್ನಿಸಿಲ್ಲ. ಪ್ರಜ್ವಲ್‌ನನ್ನೂ ಇದೇ ರೀತಿ ಜಾಮೀನಿನ ಮೇಲೆ ಬಿಟ್ಟುಬಿಡುವ ಸಾಧ್ಯತೆ ಇದೆ. ಹೀಗಾಗಿ, ನಾವು ಬೃಹತ್ ಹೋರಾಟ ನಡೆಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ಹೇಳಿದ್ದಾರೆ.

ಸರ್ಕಾರಗಳು ರೇವಣ್ಣ ಮತ್ತು ಆತನ ಪುತ್ರ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ಸಾಧ್ಯತೆಗಳಿವೆ. ಪ್ರಜ್ವಲ್ ಸೈಕೋ ಪಾತ್ ಇದ್ದಂತಿದ್ದಾನೆ. ಆತನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ; ‘ಹೋರಾಟದ ನಡಿಗೆ, ಹಾಸನದ ಕಡೆಗೆ..’; ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...