Homeಕರ್ನಾಟಕರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ : ವರದಿ

ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ : ವರದಿ

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ಅನ್ನು ಮುಚ್ಚಲು ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದೆ ಎಂದು ಶುಕ್ರವಾರ (ಫೆ.14) ವರದಿಯಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಅಧ್ಯಕ್ಷತೆಯ ಈ ಉಪಸಮಿತಿಯು, ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ (ಫೆ.13) ಮೊದಲ ಸಭೆ ನಡೆಸಿದೆ.

ಬೀದರ್ ವಿಶ್ವವಿದ್ಯಾಲಯ ಹೊತುಪಡಿಸಿ, ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯವೂ ಸೇರಿದಂತೆ ಎಲ್ಲಾ ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ವರದಿಗಳು ಹೇಳಿವೆ.

ಇತರ ವಿಶ್ವವಿದ್ಯಾಲಯಗಳಿಗೆ ಹೋಲಿಸಿದರೆ, ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವರದಿಗಳು ವಿವರಿಸಿವೆ.

ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ದೊಡ್ಡ ಮೊತ್ತದ ಅಗತ್ಯವಿದೆ. 100 ರಿಂದ 200 ಎಕರೆ ಜಮೀನು, ರೂ.342 ಕೋಟಿ ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ, ಮೂಲ ಸೌಕರ್ಯ ಸಲಕರಣೆಗಳು, ವಾಹನಗಳು, ಪೀಠೋಪಕರಣ ಮತ್ತು ಇತರೆ ವಸ್ತುಗಳನ್ನು ಖರೀದಿಸಲು ಅಗತ್ಯವಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ವರದಿಗಳ ಪ್ರಕಾರ, ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಕೋಟೆ, ಮಹಾರಾಣಿ ಕ್ಲಸ್ಟರ್, ನೃಪತುಂಗ ಮತ್ತು ಮಂಡ್ಯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನಿಸಲಾಗಿದೆ.

ಮಂಡ್ಯ ವಿಶ್ವವಿದ್ಯಾಲಯವನ್ನು ಮುಚ್ಚಬೇಕು ಎಂದು ಮಂಡ್ಯ ಮೂಲದ ವಿಧಾನಪರಿಷತ್ ಸದಸ್ಯರೊಬ್ಬರು ಮನವಿ ಪತ್ರ ನೀಡಿದ್ದಾರೆ ಎನ್ನಲಾಗಿದೆ.

ಶಾಸಕರು, ಪರಿಷತ್ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಪಿಐಎಲ್ : ಫೆ.21ಕ್ಕೆ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...