Homeಮುಖಪುಟಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ...

ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ ಸಂಸದ

ಎನ್‌ಪಿಆರ್‌ ಬಳಿಕ ಜನನ ನೋಂದಣಿ ಕುರಿತು ಆತಂಕ ವ್ಯಕ್ತಪಡಿಸಿದ ಸಾಕೇತ್ ಗೋಖಲೆ

- Advertisement -
- Advertisement -

ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ 2023ರ ಪ್ರಕಾರ, ಮಕ್ಕಳ ಜನನ ನೋಂದಣಿ ಮಾಡುವಾಗ ಪೋಷಕರ ಧರ್ಮವನ್ನು ಪ್ರತ್ಯೇಖವಾಗಿ ದಾಖಲಿಸಬೇಕಿದೆ. ಇದು ಹೊಸ ಆತಂಕಕ್ಕೆ ಕಾರಣವಾಗಿದೆ.

ಇದುವರೆಗೆ ಜನನ ನೋಂದಣಿ ಮಾಡುವಾಗ ಮಗುವಿನ ಕುಟುಂಬದ ಧರ್ಮ ಮಾತ್ರ ಉಲ್ಲೇಖಿಸಲಾಗುತ್ತಿತ್ತು. ಆದರೆ, ಕಳೆದ ವರ್ಷ ಆಗಸ್ಟ್‌ 11ರಂದು ಸಂಸತ್‌ನಲ್ಲಿ ಅನುಮೋದನೆಗೊಂಡಿರುವ ತಿದ್ದುಪಡಿ ಕಾಯ್ದೆಯ ಪ್ರಕಾರ, ಮಗುವಿನ ಜನನ ನೋಂದಣಿ ಮಾಡುವಾಗ ತಂದೆ ಮತ್ತು ತಾಯಿಯ ಧರ್ಮಗಳನ್ನು ಸರ್ಕಾರ ಪ್ರತ್ಯೇಖವಾಗಿ ದಾಖಲಿಸಿಕೊಳ್ಳಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಈ ವರದಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ, “ಇದು ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವೇ?” ಎಂಬ ಅನುಮಾನ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರವು ಭಾರತೀಯ ಪೌರತ್ವವನ್ನು ಧರ್ಮದೊಂದಿಗೆ ಜೋಡಿಸುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಸಿಎಎ ಜಾರಿಗೊಳಿಸುವಾಗ, ಅದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗಲೂ ಹೇಳುತ್ತಿದ್ದಾರೆ. ಆದರೆ, ಗೃಹ ಸಚಿವ ಅಮಿತ್ ಶಾ ಅವರು, ಸಿಎಎ ಬಳಿಕ ಎನ್‌ಆರ್‌ಸಿ ಜಾರಿಗೊಳಿಸುವುದಾಗಿ ಈ ಹಿಂದೆಯೇ ಹೇಳಿದ್ದಾರೆ” ಎಂದು ಸಾಕೇತ್ ಗೋಖಲೆ ನೆನಪಿಸಿದ್ದಾರೆ.

“ಇನ್ನು ಮುಂದೆ ಮೋದಿ ಸರ್ಕಾರ ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮಗಳನ್ನು ಪ್ರತ್ಯೇಖವಾಗಿ ದಾಖಲಿಸಿದೆ ಎನ್ನಲಾಗ್ತಿದೆ. ಇದು ಧರ್ಮಾಧಾರಿತವಾಗಿ ಭಾರತೀಯರ ಪೌರತ್ವ ನಿರ್ಧರಿಸುವ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರವಷ್ಟೆ. ಯಾಕೆಂದರೆ…

ಜುಲೈ 1987 ರ ಮೊದಲು ಜನಿಸಿದ ಪೋಷಕರು ತಾವು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಭಾರತದಲ್ಲಿ ಜನಿಸಿದ ಜನನ ಪ್ರಮಾಣಪತ್ರವನ್ನು ನೀಡಬೇಕು.

ಜುಲೈ 1987 ರ ನಂತರ ಜನಿಸಿದ ಪೋಷಕರು ತಮ್ಮ ಪೋಷಕರು ಭಾರತದಲ್ಲಿ ಜನಿಸಿದವರು ಮತ್ತು ಭಾರತೀಯ ಪ್ರಜೆಗಳು ಎಂದು ತೋರಿಸಲು ತಮ್ಮ ಪೋಷಕರ ಜನ್ಮ ಪ್ರಮಾಣಪತ್ರವನ್ನು ನೀಡಬೇಕು.

ಮೇಲಿನ ಮಾನದಂಡಗಳನ್ನು ಬಳಸಿಕೊಂಡು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವ ಸಾಧ್ಯತೆ ಇದೆ. ಒಂದು ವೇಳೆ ಈ ಜನರು ಮುಸ್ಲಿಮರು ಅಲ್ಲ ಎಂದಾದರೆ ನಾನು ಸಿಎಎ ಧನ್ಯವಾದ ಹೇಳುತ್ತೇನೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ. (ಇದರರ್ಥ ಬಲಿಪಶುಗಳು ಖಂಡಿತವಾಗಿ ಮುಸ್ಲಿಮರು ಎಂದಾಗಿದೆ.)

“ಸಿಎಎ ಕುರಿತು ಗುಪ್ತಚರ ಇಲಾಖೆ ಜಂಟಿ ಸಂಸದೀಯ ಸಮಿತಿಗೆ ಹೇಳಿರುವ ಪ್ರಕಾರ, ಅದು ಕೇವಲ 31,313 ಜನರಿಗೆ ಮಾತ್ರ ಪ್ರಯೋಜನವಾಗಲಿದೆ. ಹಾಗಾಗಿ, ಕೇವಲ 31,313 ಜನರಿಗೆ ಉಪಯೋಗವಾಗಲೆಂದು ಸಿಎಎ ಜಾರಿಗೊಳಿಸಿಲ್ಲ. ಸಿಎಎ ಹಿಂದಿನ ಅಜೆಂಡಾ ಎನ್‌ಆರ್‌ಸಿ ಜಾರಿಗೊಳಿಸಿ ಭಾರತೀಯ ಪೌರತ್ವವನ್ನು ಧರ್ಮ ಆಧಾರಿತವಾಗಿಸುವುದಾಗಿದೆ. ಸಿಎಎ ಹಿಂದಿನ ಮೋದಿ ಸರ್ಕಾರ ಕೆಟ್ಟ ಮತ್ತು ದುಷ್ಟ ಅಜೆಂಡಾ ಸ್ಪಷ್ಟವಾಗಿದೆ” ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದ ಸಾಕೇತ್ ಗೋಖಲೆ, ಇದು ಗುಪ್ತವಾಗಿ ಎನ್‌ಆರ್‌ಸಿ ಜಾರಿಗೊಳಿಸುವ ಹುನ್ನಾರ ಎಂದಿದ್ದರು.

ಈ ಕುರಿತು ನಾನುಗೌರಿ ಪ್ರಕಟಿಸಿದ್ದ ವರದಿ ಇಲ್ಲಿದೆ

ಒಟ್ಟಾರೆಯಾಗಿ ಹೇಳುವುದಾದರೆ, ಸಿಎಎ ಜಾರಿಗೊಳಿಸಿರುವುದರ ಮೂಲ ಉದ್ದೇಶ ಎನ್‌ಆರ್‌ಸಿ ಜಾರಿಗೊಳಿಸುವುದಾಗಿದೆ ಎಂಬುವುದು ಸಾಕೇತ್ ಗೋಖಲೆ ಅವರ ವಾದ. ಸಿಎಎ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದಿರುವ ಸರ್ಕಾರ, ಸಿಎಎ ಬೆನ್ನಲ್ಲೇ ಅದಕ್ಕೆ ಸಂಬಂಧಿಸಿದ ಎನ್‌ಪಿಆರ್ ಮೂಲಕ ಜನಗಣತಿ, ಮಗುವಿನ ಪೋಷಕರ ಧರ್ಮ ನೋಂದಣಿ ಇತ್ಯಾದಿ ಕಾನೂನುಗಳನ್ನು ಗೌಪ್ಯವಾಗಿ ಜಾರಿಗೊಳಿಸುತ್ತಿದೆ. ಈ ಬಗ್ಗೆ ಸಾಮಾನ್ಯ ಜನರಿಗೆ ಬಿಡಿ, ದೇಶದ ಉನ್ನತ ಮಟ್ಟದ ನಾಯಕರಿಗೂ ಮಾಹಿತಿಯಿಲ್ಲ ಎಂಬುದಾಗಿ ಕಳವಳದ ಸಂಗತಿ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊರಗೆ ಭೇಟಿಯಾಗುತ್ತೇನೆ..’; ತಿಹಾರ್ ಜೈಲಿನಿಂದ ಪತ್ರ ಬರೆದ ಮನೀಶ್ ಸಿಸೋಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...