- Advertisement -
- Advertisement -
ಒಳ ಮೀಸಲಾತಿ ಹೋರಾಟಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ ಅವರನ್ನು ವರ್ಗಾವಣೆ ಮಾಡಿದೆ.
ಮಣಿವಣ್ಣನ್ ಜಾಗಕ್ಕೆ ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಣದೀಪ್ ಡಿ ಅವರನ್ನು ನೇಮಕ ಮಾಡಲಾಗಿದೆ.
ಮಣಿವಣ್ಣನ್ ಸೇರಿದಂತೆ ಹಲವು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಒಳ ಮೀಸಲಾತಿ ಹೋರಾಟಗಾರರು ಸರ್ಕಾರವನ್ನು ಆಗ್ರಹಿಸಿದ್ದರು.
ಒಳಮೀಸಲಾತಿ ಜಾರಿ ವಿಳಂಬ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಅವರ ಮನೆಗೆ ಇತ್ತೀಚೆಗೆ ಮುತ್ತಿಗೆ ಹಾಕಲು ಮುಂದಾದಾಗಲೂ ಹೋರಾಟಗಾರರು ಮಣ್ಣಿವಣ್ಣನ್ ಸಹಿತ ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಸಿದ್ದರು.


