Homeಕರ್ನಾಟಕಕೋವಿಡ್ ಹಗರಣ : ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಕೋವಿಡ್ ಹಗರಣ : ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಕುರಿತು ಎಫ್‌ಐಆರ್ ದಾಖಲಾದ ಸುಮಾರು ಎರಡು ತಿಂಗಳ ನಂತರ, ರಾಜ್ಯ ಸರ್ಕಾರ 167 ಕೋಟಿ ರೂಪಾಯಿ ಹಗರಣ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿದೆ.

ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿಗಳನ್ನು ಒಳಗೊಂಡ ತಂಡವು ತನಿಖೆ ನಡೆಸಲಿದೆ. ಎನ್‌95 ಮಾಸ್ಕ್‌ ಪಿಪಿಇ ಕಿಟ್‌ಗಳ ಖರೀದಿ ಮತ್ತು ಕೋವಿಡ್ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ನವೆಂಬರ್ 2024ರಲ್ಲಿ ರಾಜ್ಯ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರದ ಪ್ರಕಾರ, ಈ ಪ್ರಕರಣವನ್ನು ಆರಂಭದಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ಮಾಡಿಸಲು ನಿರ್ಧರಿಸಲಾಗಿತ್ತು. ಆದರೆ, 5 ಕೋಟಿ ರೂ.ಗಿಂತ ಹೆಚ್ಚಿನ ಆರ್ಥಿಕ ವಂಚನೆಗಳನ್ನು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗವು ತನಿಖೆ ಮಾಡಬೇಕು ಎನ್ನುವುದನ್ನು ಕಡ್ಡಾಯಗೊಳಿಸುವ ಸ್ಥಾಪಿತ ಶಿಷ್ಟಾಚಾರವನ್ನು ಉಲ್ಲೇಖಿಸಿ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿದೆ.

ಪ್ರಕರಣದ ಎಫ್‌ಐಆರ್‌ನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮಾಜಿ ನಿರ್ದೇಶಕ ಪಿ.ಜಿ. ಗಿರೀಶ್, ಅಧಿಕಾರಿಗಳಾದ ರಘು ಜಿ.ಪಿ. ಮತ್ತು ಎನ್. ಮುನಿರಾಜು ಅವರ ವಿರುದ್ಧ ಆರೋಪ ಹೊರಿಸಲಾಗಿದೆ. ಇವರು ಇತರ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಸೇರಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ- 1999 ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ದುರುಪಯೋಗದಿಂದ ಒಟ್ಟು 167 ಕೋಟಿ ರೂ. ರಾಜ್ಯ ಖಜಾನೆಗೆ ನಷ್ಟವಾಗಿದೆ ಎಂದು ವರದಿಯಾಗಿದೆ.

ಸಿಐಡಿ ಅಧಿಕಾರಿಗಳು ತಮ್ಮ ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು 1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17(1)(A)ಅಡಿಯಲ್ಲಿ ಆರೋಪಿತ ಅಧಿಕಾರಿಗಳನ್ನು ಪ್ರಾಥಮಿಕ ವಿಚಾರಣೆಗೆ ಒಳಪಡಿಸಲು ರಾಜ್ಯ ಸರ್ಕಾರದ ಅನುಮೋದನೆಯನ್ನು ಕೋರಿದ್ದಾರೆ.

ಪ್ರಕರಣವನ್ನು ಪರಿಶೀಲಿಸುವ ಸಂಪುಟ ಉಪಸಮಿತಿಯ ನೇತೃತ್ವ ವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ಆಯೋಗದ ವರದಿಯ ಪ್ರಮುಖ ಅಂಶಗಳನ್ನು ಉಲ್ಲೇಖಿಸಿದ್ದಾರೆ. ವರದಿಯು ದೊಡ್ಡ ಮಟ್ಟದ ಆರ್ಥಿಕ ಅಕ್ರಮವನ್ನು ಎತ್ತಿ ತೋರಿಸಿದೆ ಎಂದು ವರದಿಯಾಗಿದೆ.

ಕೋವಿಡ್-19 ಪರೀಕ್ಷಾ ವೆಚ್ಚದಲ್ಲಿ ಗಂಭೀರ ಅಕ್ರಮಗಳನ್ನು ಡಿ.ಕೆ ಶಿವಕುಮಾರ್ ಉಲ್ಲೇಖಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲೇ 84 ಲಕ್ಷ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗಿದ್ದು, 502 ಕೋಟಿ ರೂ. ಬಿಲ್‌ ಮಾಡಲಾಗಿದೆ. ಅದರಲ್ಲಿ 400 ಕೋಟಿ ರೂ.ಗಳನ್ನು ಈಗಾಗಲೇ ಪಾವತಿಸಲಾಗಿದೆ. ಇಷ್ಟೊಂದು ಹಣ ಖರ್ಚಾಗಲು ಸಾಧ್ಯವಿಲ್ಲ. ಬಿಲ್ ಮೊತ್ತ ನೋಡಿದರೆ ಪ್ರತಿ ಮನೆಗೆ ಸರಾಸರಿ ಎರಡು ಪರೀಕ್ಷೆಗಳು ನಡೆಯುತ್ತವೆ ಎಂದು ಡಿಕೆಶಿ ಹೇಳಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ (ICMR) ಅಗತ್ಯವಾದ ತಾಂತ್ರಿಕ ಸಾಮರ್ಥ್ಯ ಮತ್ತು ಅನುಮೋದನೆಯ ಕೊರತೆಯಿದ್ದರೂ, 24 ಲಕ್ಷ ಪರೀಕ್ಷೆಗಳನ್ನು ನಡೆಸಲು 146 ಕೋಟಿ ರೂ. ಬಿಲ್ ಮಾಡಿದ ಕಿದ್ವಾಯಿ ಆಸ್ಪತ್ರೆಯ ಬಗ್ಗೆ ಮತ್ತಷ್ಟು ಅನುಮಾನಗಳು ಹುಟ್ಟಿಕೊಂಡಿದೆ.

ಸಿದ್ರಾಮುಲ್ಲಾ ಖಾನ್‌ ಪ್ರಕರಣ | ಬಿಜೆಪಿ ನಾಯಕರ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಕಾಂಗ್ರೆಸ್‌ ಸರ್ಕಾರ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...