Homeರಾಷ್ಟ್ರೀಯಸರ್ಕಾರ v/s ರಾಜ್ಯಪಾಲ: ರಾಜ್ಯ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕ ರದ್ದುಗೊಳಿಸಿದ ಕೇರಳ ಹೈಕೋರ್ಟ್

ಸರ್ಕಾರ v/s ರಾಜ್ಯಪಾಲ: ರಾಜ್ಯ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕ ರದ್ದುಗೊಳಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ವಿಶ್ವವಿದ್ಯಾನಿಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಕೇರಳ ಸರ್ಕಾರ ನಿರಂತರ ಸಂಘರ್ಷದಲ್ಲಿದೆ. ಈ ಮಧ್ಯೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ರಾಜ್ಯ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕವನ್ನು ಕೇರಳ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಕೇರಳದ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಡಾ.ರಿಜಿ ಜಾನ್ ನೇಮಕವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂದು ನ್ಯಾಯಾಲಯವು ನೇಮಕಾತಿಯನ್ನು ಕಾನೂನುಬಾಹಿರ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಯುಜಿಸಿ’ ಎಂಬುವುದು ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಇರುವ ಶಾಸನಬದ್ಧ ಸಂಸ್ಥೆಯಾಗಿದ್ದು, ಅದು ದೇಶಾದ್ಯಂತ ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ಮಾಡುತ್ತದೆ.

ಇದನ್ನೂ ಓದಿ: ಸರ್ಕಾರ v/s ರಾಜ್ಯಪಾಲ: ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದ ಕೇರಳ ಸರ್ಕಾರ

ಯುಜಿಸಿ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹೊಸ ಉಪಕುಲಪತಿಯನ್ನು ನೇಮಕ ಮಾಡುವಂತೆ ಪ್ರಸ್ತುತ ರಾಜ್ಯಪಾಲರಾಗಿರುವ, ವಿಶ್ವವಿದ್ಯಾಲಯಗಳ ಕುಲಪತಿಯೂ ಅಗಿರುವ ಆರಿಫ್‌ ಖಾನ್ ಅವರಿಗೆ ನ್ಯಾಯಾಲಯ ಸೂಚಿಸಿದೆ.

ಕಳೆದ ತಿಂಗಳು ರಾಜ್ಯಪಾಲರು ಡಾ. ಜಾನ್ ಸೇರಿದಂತೆ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸೂಚಿಸಿದ್ದರು. ಅವರ ನೇಮಕಾತಿಗಳಲ್ಲಿ ಯುಜಿಸಿಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದರು.

ಕೇರಳದ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿ ನೇಮಕವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ ನಂತರ ರಾಜ್ಯಪಾಲರ ಈ ಕ್ರಮ ಕೈಗೊಂಡಿದ್ದರು.

ಇದನ್ನೂ ಓದಿ: ಪಿಎಫ್‌ಐ ಹಿಂಸಾತ್ಮಕ ಹರತಾಳ | ರಾಜ್ಯಕ್ಕೆ 86 ಲಕ್ಷ ರೂ. ನಷ್ಟ: ಹೈಕೋರ್ಟ್‌‌ನಲ್ಲಿ ಕೇರಳ ಸರ್ಕಾರ

ಯುಜಿಸಿ ನಿಯಮಗಳ ಪ್ರಕಾರ, ರಾಜ್ಯ ಸರ್ಕಾರವು ರಚಿಸಿರುವ ಶೋಧನಾ ಸಮಿತಿಯು ವಿಶ್ವವಿದ್ಯಾಲಯದ ಉನ್ನತ ಹುದ್ದೆಗೆ ರಾಜ್ಯಪಾಲರಿಗೆ ಮೂವರ ಹೆಸರನ್ನು ಶಿಫಾರಸು ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ. ಆದರೆ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರಕರಣದಲ್ಲಿ, ರಾಜ್ಯ ಸರ್ಕಾರದ ಶೋಧನಾ ಸಮಿತಿ ಕೇವಲ ಒಂದು ಹೆಸರನ್ನು ಮಾತ್ರ ಶಿಫಾರಸು ಮಾಡಿತ್ತು.

ಇದಾದ ಕೆಲವೇ ದಿನಗಳಲ್ಲಿ ಒಂಬತ್ತು ರಾಜ್ಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲ ಆರೀಫ್‌ ಖಾನ್ ಸೂಚಿಸಿದ್ದರು. ಇದು ಕೇರಳದ ವಿಶ್ವವಿದ್ಯಾನಿಲಯಗಳ ಕಾರ್ಯನಿರ್ವಹಣೆಯ ಬಗ್ಗೆ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಉಂಟುಮಾಡಿತು.

ಈ ತಿಂಗಳ ಆರಂಭದಲ್ಲಿ, ರಾಜ್ಯ ಸಚಿವ ಸಂಪುಟವು ರಾಜ್ಯಪಾಲರನ್ನು ವಿಶ್ವವಿದ್ಯಾಲಯಗಳ ಕುಲಪತಿಯಾಗಿ ತೆಗೆದುಹಾಕಲು ಸುಗ್ರೀವಾಜ್ಞೆ ಅಥವಾ ವಿಶೇಷ ಆದೇಶವನ್ನು ತರಲು ಮತ ಹಾಕಿತ್ತು.

ಇದನ್ನೂ ಓದಿ: ‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

ಈ ವೇಳೆ ಮಾತನಾಡಿದ್ದ ಕೇರಳದ ಕಾನೂನು ಸಚಿವ ರಾಜೀವ್, ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿಲ್ಲ ಎಂದು ಹೇಳಿದ್ದರು. “ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲು ನಮಗೆ ಯಾವುದೇ ಅಧಿಕಾರವಿಲ್ಲ. ಇದು ಸಾಂವಿಧಾನಿಕ ಅಧಿಕಾರವಾಗಿದೆ, ಅದರ ಕಾರ್ಯಗಳನ್ನು ಸಂವಿಧಾನದಲ್ಲಿ ಚೆನ್ನಾಗಿ ವಿವರಿಸಲಾಗಿದೆ. ನಾವು ಕುಲಪತಿ ನೇಮಕದ ಬಗ್ಗೆ ಸುಗ್ರೀವಾಜ್ಞೆಯನ್ನು ಮಾತ್ರ ಅಂಗೀಕರಿಸಿದ್ದೇವೆ. ಅದು ರಾಜ್ಯದ ವಿಶೇಷ ಶಾಸಕಾಂಗ ಸಾಮರ್ಥ್ಯವಾಗಿದೆ. ಕುಲಪತಿಗಳು ಶಿಕ್ಷಣ ಕ್ಷೇತ್ರದ ಗಣ್ಯ ವ್ಯಕ್ತಿಯಾಗಬೇಕು ಎಂದು ನಾವು ಭಾವಿಸುತ್ತೇವೆ” ಎಂದು ಸಚಿವರು ಹೇಳಿದ್ದರು.

ಕೇರಳ ಸಚಿವ ಸಂಪುಟದ ಕ್ರಮಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲ ಆರಿಫ್‌ ಖಾನ್, ಸುಗ್ರೀವಾಜ್ಞೆಯನ್ನು ರಾಜಭವನಕ್ಕೆ ಕಳುಹಿಸಿದರೆ, ಅದನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸುವುದಾಗಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...